ಮೇಗರವಳ್ಳಿಯಲ್ಲಿ ರಸ್ತೆ ಬದಿಯಲ್ಲಿ ನಿಂತ ಕಾರಿಗೆ BMW ಕಾರು ಡಿಕ್ಕಿ – ಮಹಿಳೆ ಸಾವು

A tragic road accident occurred at Megaravalli on Tuesday morning when a high-speed BMW rammed into a stationary car from behind. The impact left a couple critically injured and they were rushed to Manipal Hospital. Unfortunately, the woman, identified as Mallika, succumbed to her head injuries during treatment. The incident falls under Agumbe Police Station limits, and police have registered a case and launched an investigation into rash and negligent driving.

ಮೇಗರವಳ್ಳಿ: ಇಂದು ಬೆಳಿಗ್ಗೆ ಮೇಗರವಳ್ಳಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ದಂಪತಿಗಳಲ್ಲಿ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

ಮಾಹಿತಿ ಪ್ರಕಾರ, ರಸ್ತೆ ಬದಿಯಲ್ಲಿ ನಿಂತಿದ್ದ ಕಾರಿಗೆ ಹಿಂಬದಿಯಿಂದ ಅತೀವೇಗವಾಗಿ ಬಂದ ಬಿಎಂಡಬ್ಲ್ಯೂ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ನಿಂತಿದ್ದ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಅದರೊಳಗಿದ್ದ ದಂಪತಿಗಳು ಗಂಭೀರವಾಗಿ ಗಾಯಗೊಂಡಿದ್ದರು. ಅಪಘಾತದ ಬಳಿಕ ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ತಕ್ಷಣವೇ ಮಣಿಪಾಲ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದಂಪತಿಗಳಲ್ಲಿ ತಲೆಗೆ ಗಂಭೀರ ಪೆಟ್ಟು ಬಿದ್ದಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಅಪಘಾತದಲ್ಲಿ ಗಾಯಗೊಂಡಿರುವ ಅವರ ಪತಿಯ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿದಿದೆ ಎನ್ನಲಾಗಿದೆ.

ಘಟನೆಯ ಕುರಿತು ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ಕಾರಣವಾದ ಬಿಎಂಡಬ್ಲ್ಯೂ ಕಾರಿನ ಚಾಲಕನ ವಿರುದ್ಧ ತನಿಖೆ ಕೈಗೊಳ್ಳಲಾಗಿದೆ.

ಅತೀವೇಗ ಹಾಗೂ ಅಜಾಗರೂಕ ಚಾಲನೆಯೇ ಅಪಘಾತಕ್ಕೆ ಕಾರಣವಾಗಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

1 day ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

1 day ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

1 day ago

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…

1 day ago

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…

1 day ago

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…

1 day ago