w
Headlines
Home » ಅಪ್ರಾಪ್ತೆಗೆ ಗರ್ಭಪಾತ ಪ್ರಕರಣ: ಆನಂದಪುರ ಆಸ್ಪತ್ರೆ ವೈದ್ಯೆ ಡಾ. ಡಿ. ಪ್ರತಿಮಾ ಅಮಾನತು

ಅಪ್ರಾಪ್ತೆಗೆ ಗರ್ಭಪಾತ ಪ್ರಕರಣ: ಆನಂದಪುರ ಆಸ್ಪತ್ರೆ ವೈದ್ಯೆ ಡಾ. ಡಿ. ಪ್ರತಿಮಾ ಅಮಾನತು

GridArt 20260204

A gynecologist from Anandapur Community Health Centre in Shivamogga has been suspended for allegedly conducting an abortion on a minor without informing the police, despite it being a POCSO case. The action followed a joint inquiry report that found serious lapses, negligence of duty, and irresponsibility, leading the Health and Family Welfare Department to order her suspension.

ಅಪ್ರಾಪ್ತೆಗೆ ಗರ್ಭಪಾತ ಪ್ರಕರಣ: ಆನಂದಪುರ ಆಸ್ಪತ್ರೆ ವೈದ್ಯೆ ಡಾ. ಡಿ. ಪ್ರತಿಮಾ ಅಮಾನತು

ಶಿವಮೊಗ್ಗ: ಪೋಕ್ಸೊ ಪ್ರಕರಣ ಎಂಬುದು ತಿಳಿದಿದ್ದರೂ ಪೊಲೀಸರಿಗೆ ಮಾಹಿತಿ ನೀಡದೆ ಅಪ್ರಾಪ್ತ ಬಾಲಕಿಗೆ ಗರ್ಭಪಾತ ಮಾಡಿಸಿದ ಆರೋಪದ ಹಿನ್ನೆಲೆಯಲ್ಲಿ ಆನಂದಪುರ ಸಮುದಾಯ ಆರೋಗ್ಯ ಕೇಂದ್ರದ ಪ್ರಸೂತಿ ಹಾಗೂ ಸ್ತ್ರೀರೋಗ ತಜ್ಞೆ ಡಾ. ಡಿ. ಪ್ರತಿಮಾ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಸಾಗರದ ಖಾಸಗಿ ಆಸ್ಪತ್ರೆಯಲ್ಲಿ ಅಪ್ರಾಪ್ತ ಬಾಲಕಿಗೆ ಗರ್ಭಪಾತ ನಡೆಸಿದ ಸಂಬಂಧ ಡಾ. ಪ್ರತಿಮಾ ಸೇರಿದಂತೆ ಒಟ್ಟು 9 ಜನರ ವಿರುದ್ಧ ನವೆಂಬರ್ 6ರಂದು ಪ್ರಕರಣ ದಾಖಲಾಗಿತ್ತು. ಸಾಗರ ನಗರ ಠಾಣೆ ಪೊಲೀಸರು ಪೋಕ್ಸೊ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿಕೊಂಡಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್‌ಸ್ಪೆಕ್ಟರ್ ನೇತೃತ್ವದ ತನಿಖಾ ತಂಡ ನೀಡಿದ ವರದಿ ಹಾಗೂ ದಾಖಲೆಗಳನ್ನು ಪರಿಶೀಲಿಸಿದ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಮತ್ತು ಸಾಗರ ತಾಲ್ಲೂಕು ವೈದ್ಯಾಧಿಕಾರಿಗಳು ಜಂಟಿ ಪರಿಶೀಲನಾ ವರದಿ ಸಲ್ಲಿಸಿದ್ದರು. ವರದಿಯಲ್ಲಿ ವೈದ್ಯೆಯ ವಿರುದ್ಧ ಕರ್ತವ್ಯಲೋಪ, ಕರ್ತವ್ಯ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿತನದ ಗಂಭೀರ ಆರೋಪಗಳು ಮೇಲ್ನೋಟಕ್ಕೆ ಸಾಬೀತಾಗಿವೆ ಎಂದು ಉಲ್ಲೇಖಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಗುರುದತ್ತ ಹೆಗಡೆ ಅವರು ಮಂಗಳವಾರ ಡಾ. ಡಿ. ಪ್ರತಿಮಾ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.