A gynecologist from Anandapur Community Health Centre in Shivamogga has been suspended for allegedly conducting an abortion on a minor without informing the police, despite it being a POCSO case. The action followed a joint inquiry report that found serious lapses, negligence of duty, and irresponsibility, leading the Health and Family Welfare Department to order her suspension.
ಅಪ್ರಾಪ್ತೆಗೆ ಗರ್ಭಪಾತ ಪ್ರಕರಣ: ಆನಂದಪುರ ಆಸ್ಪತ್ರೆ ವೈದ್ಯೆ ಡಾ. ಡಿ. ಪ್ರತಿಮಾ ಅಮಾನತು
ಶಿವಮೊಗ್ಗ: ಪೋಕ್ಸೊ ಪ್ರಕರಣ ಎಂಬುದು ತಿಳಿದಿದ್ದರೂ ಪೊಲೀಸರಿಗೆ ಮಾಹಿತಿ ನೀಡದೆ ಅಪ್ರಾಪ್ತ ಬಾಲಕಿಗೆ ಗರ್ಭಪಾತ ಮಾಡಿಸಿದ ಆರೋಪದ ಹಿನ್ನೆಲೆಯಲ್ಲಿ ಆನಂದಪುರ ಸಮುದಾಯ ಆರೋಗ್ಯ ಕೇಂದ್ರದ ಪ್ರಸೂತಿ ಹಾಗೂ ಸ್ತ್ರೀರೋಗ ತಜ್ಞೆ ಡಾ. ಡಿ. ಪ್ರತಿಮಾ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
ಸಾಗರದ ಖಾಸಗಿ ಆಸ್ಪತ್ರೆಯಲ್ಲಿ ಅಪ್ರಾಪ್ತ ಬಾಲಕಿಗೆ ಗರ್ಭಪಾತ ನಡೆಸಿದ ಸಂಬಂಧ ಡಾ. ಪ್ರತಿಮಾ ಸೇರಿದಂತೆ ಒಟ್ಟು 9 ಜನರ ವಿರುದ್ಧ ನವೆಂಬರ್ 6ರಂದು ಪ್ರಕರಣ ದಾಖಲಾಗಿತ್ತು. ಸಾಗರ ನಗರ ಠಾಣೆ ಪೊಲೀಸರು ಪೋಕ್ಸೊ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿಕೊಂಡಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್‌ಸ್ಪೆಕ್ಟರ್ ನೇತೃತ್ವದ ತನಿಖಾ ತಂಡ ನೀಡಿದ ವರದಿ ಹಾಗೂ ದಾಖಲೆಗಳನ್ನು ಪರಿಶೀಲಿಸಿದ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಮತ್ತು ಸಾಗರ ತಾಲ್ಲೂಕು ವೈದ್ಯಾಧಿಕಾರಿಗಳು ಜಂಟಿ ಪರಿಶೀಲನಾ ವರದಿ ಸಲ್ಲಿಸಿದ್ದರು. ವರದಿಯಲ್ಲಿ ವೈದ್ಯೆಯ ವಿರುದ್ಧ ಕರ್ತವ್ಯಲೋಪ, ಕರ್ತವ್ಯ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿತನದ ಗಂಭೀರ ಆರೋಪಗಳು ಮೇಲ್ನೋಟಕ್ಕೆ ಸಾಬೀತಾಗಿವೆ ಎಂದು ಉಲ್ಲೇಖಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಗುರುದತ್ತ ಹೆಗಡೆ ಅವರು ಮಂಗಳವಾರ ಡಾ. ಡಿ. ಪ್ರತಿಮಾ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ Hosanagara Taluk Advocates Association extends…
ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ - ಆರೋಪಿ ಅರೆಸ್ಟ್! Sagar police arrested a man accused…
ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ Free 31-day mobile phone repair training for…
ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ Farmers and agricultural workers will hold a…
ಸಾಗರ: ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ; ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನೆ Farmers staged a massive protest…
ಇಂಡಿಯಾ ಪೋಸ್ಟ್‌ನಲ್ಲಿ 25,000ಕ್ಕೂ ಹೆಚ್ಚು ಹುದ್ದೆ: 10ನೇ ತರಗತಿ ಪಾಸಾದವರಿಗೆ ಅವಕಾಶ, ಪರೀಕ್ಷೆ ಇಲ್ಲದೆ ನೇಮಕಾತಿ India Post GDS…