ರಾಷ್ಟ್ರ ಮಟ್ಟದ ವಾಲಿಬಾಲ್ ಅಖಾಡಕ್ಕೆ ರಿಪ್ಪನ್‌ಪೇಟೆಯ ನಿಹಾಲ್ | ಮೇರಿಮಾತಾ ಶಾಲೆಗೆ ಐತಿಹಾಸಿಕ ಗರಿ
Mohammad Nihal, a Class 10 student of Mary Matha High School, Ripponpete, has been selected to represent Karnataka in the Under-17 National Level Volleyball Championship to be held in West Bengal.
ರಿಪ್ಪನ್‌ಪೇಟೆ: ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ 17 ವರ್ಷದೊಳಗಿನವರ ರಾಷ್ಟ್ರಮಟ್ಟದ ವಾಲಿಬಾಲ್ ಕ್ರೀಡಾಕೂಟಕ್ಕೆ ಸ್ಥಳೀಯ ಮೇರಿಮಾತಾ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಮೊಹಮ್ಮದ್ ನಿಹಾಲ್ ಆಯ್ಕೆಯಾಗಿದ್ದಾರೆ. ಈ ಮೂಲಕ ಗ್ರಾಮೀಣ ಭಾಗದ ಯುವ ಪ್ರತಿಭೆ ರಾಷ್ಟ್ರಮಟ್ಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸುವ ಅಪರೂಪದ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.
ಮೂಗುಡ್ತಿ ಗ್ರಾಮದ ಆಬೀದ್ ಎಂ ಮತ್ತು ನೂರ್ ಸಭಾ ದಂಪತಿಯ ಪುತ್ರನಾಗಿರುವ ನಿಹಾಲ್, ತಮ್ಮ ಅದ್ಭುತ ಕ್ರೀಡಾ ಪ್ರದರ್ಶನದ ಮೂಲಕ ರಾಜ್ಯ ತಂಡಕ್ಕೆ ಸ್ಥಾನ ಪಡೆದು ಶಾಲೆ ಹಾಗೂ ತವರಿಗೆ ಕೀರ್ತಿ ತಂದಿದ್ದಾರೆ.
ಕರ್ನಾಟಕ ತಂಡಕ್ಕೆ ಕೇವಲ ಆರು ಮಂದಿ ಆಯ್ಕೆ: ಫೆಬ್ರವರಿ 24ರಿಂದ ಮಾರ್ಚ್ 1ರವರೆಗೆ ಪಶ್ಚಿಮ ಬಂಗಾಳದಲ್ಲಿ ಈ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿ ಜರುಗಲಿದೆ. ವಿಶೇಷವೆಂದರೆ, ಕರ್ನಾಟಕ ರಾಜ್ಯ ತಂಡಕ್ಕೆ ಒಟ್ಟು ಆರು ಮಂದಿ ಪ್ರತಿಭಾವಂತ ಕ್ರೀಡಾಪಟುಗಳು ಮಾತ್ರ ಆಯ್ಕೆಯಾಗಿದ್ದು, ಅದರಲ್ಲಿ ನಿಹಾಲ್ ಕೂಡ ಸ್ಥಾನ ಪಡೆದಿರುವುದು ಅವರ ಕ್ರೀಡಾ ಸಾಮರ್ಥ್ಯಕ್ಕೆ ಹಿಡಿದ ಕನ್ನಡಿಯಾಗಿದೆ.
ಶಾಲೆಯ ಇತಿಹಾಸದಲ್ಲೇ ಪ್ರಥಮ:
ವಿದ್ಯಾರ್ಥಿಯೊಬ್ಬರು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುವುದು ಮೇರಿಮಾತಾ ಪ್ರೌಢಶಾಲೆಯ ಇತಿಹಾಸದಲ್ಲಿಯೇ ಪ್ರಥಮ ಬಾರಿಯಾಗಿದೆ. ಸಣ್ಣ ಹಳ್ಳಿಯಿಂದ ಬಂದ ವಿದ್ಯಾರ್ಥಿಯೊಬ್ಬ ರಾಷ್ಟ್ರೀಯ ಮಟ್ಟಕ್ಕೇರಿರುವುದು ಇತರ ವಿದ್ಯಾರ್ಥಿಗಳಿಗೂ ಸ್ಫೂರ್ತಿದಾಯಕವಾಗಿದೆ. ಕಠಿಣ ಅಭ್ಯಾಸ, ಶಿಸ್ತು ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ಸೂಕ್ತ ಮಾರ್ಗದರ್ಶನವೇ ಈ ಐತಿಹಾಸಿಕ ಸಾಧನೆಗೆ ಕಾರಣ ಎಂದು ವಿಶ್ಲೇಷಿಸಲಾಗಿದೆ.
ಗ್ರಾಮೀಣ ಯುವ ಆಟಗಾರನ ಈ ಮಹತ್ತರ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಸಹಶಿಕ್ಷಕರು ಹಾಗೂ ಪೋಷಕರು ಹರ್ಷ ವ್ಯಕ್ತಪಡಿಸಿದ್ದು, ಮುಂಬರುವ ರಾಷ್ಟ್ರೀಯ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ಮೂಡಿಬರಲಿ ಎಂದು ಶುಭ ಹಾರೈಸಿದ್ದಾರೆ.
ಮಹಮ್ಮದ್ ನಿಹಾಲ್ ಭವಿಷ್ಯದಲ್ಲಿ ರಾಜ್ಯ , ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಇನ್ನಷ್ಟು ದೊಡ್ಡ ಸಾಧನೆಗಳನ್ನು ಮಾಡುವಂತಾಗಲಿ ಎಂದು ಪೋಸ್ಟ್ ಮ್ಯಾನ್ ನ್ಯೂಸ್ ಬಳಗ ಆಶಿಸುತ್ತದೆ.
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…