ಆನ್‌ಲೈನ್ ಗೇಮಿಂಗ್ ವ್ಯಸನಕ್ಕೆ ಬ್ಯಾಂಕ್ ಅಧಿಕಾರಿಯಿಂದ ದ್ರೋಹ: 4 ಕೋಟಿ ರೂ. ಚಿನ್ನ ಕಳವು, ಸಹಾಯಕ ಮ್ಯಾನೇಜರ್ ಬಂಧನ

A nationalised bank’s assistant manager was arrested after allegedly stealing customers’ pledged gold worth nearly ₹4 crore to repay debts incurred through online gaming and casino betting. Police recovered over 1 kg of gold; investigation continues.

ಆನ್‌ಲೈನ್‌ ಗೇಮಿಂಗ್‌, ಬೆಟ್ಟಿಂಗ್‌ ಹಾಗೂ ಕ್ಯಾಸಿನೋ ಜೂಜಾಟದ ಚಟಕ್ಕೆ ಬಿದ್ದು ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದ ರಾಷ್ಟ್ರೀಕೃತ ಬ್ಯಾಂಕ್‌ನ ಸಹಾಯಕ ಮ್ಯಾನೇಜರ್‌ ಒಬ್ಬರು, ಗ್ರಾಹಕರು ಅಡಮಾನ ಇರಿಸಿದ್ದ ಚಿನ್ನಾಭರಣಗಳನ್ನು ಕಳ್ಳತನ ಮಾಡಿ ಖಾಸಗಿ ಫೈನಾನ್ಸ್‌ಗಳಲ್ಲಿ ಅಡಮಾನ ಇಟ್ಟಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗಿರಿನಗರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿ ಯಾರು?

ಬಂಧಿತ ಆರೋಪಿ ಕಿರಣ್ ಕುಮಾರ್ (35). ಆಂಧ್ರಪ್ರದೇಶದ ಚಿತ್ತೂರು ಮೂಲದವನಾದ ಕಿರಣ್‌, ಬೆಂಗಳೂರಿನ ವಿದ್ಯಾರಣ್ಯಪುರ ನಿವಾಸಿಯಾಗಿದ್ದು, ಗಿರಿನಗರದಲ್ಲಿರುವ ರಾಷ್ಟ್ರೀಕೃತ ಬ್ಯಾಂಕ್‌ ಶಾಖೆಯಲ್ಲಿ ಕಳೆದ ಕೆಲವು ವರ್ಷಗಳಿಂದ ಸಹಾಯಕ ಮ್ಯಾನೇಜರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದ.

ಆರು ತಿಂಗಳಲ್ಲಿ ಹಂತ ಹಂತವಾಗಿ ಕಳವು :

ಪೊಲೀಸರ ಮಾಹಿತಿ ಪ್ರಕಾರ, ಕಿರಣ್‌ ಆನ್‌ಲೈನ್‌ ಗೇಮಿಂಗ್‌ ಹಾಗೂ ಕ್ಯಾಸಿನೋಗಳಲ್ಲಿ ಹಣ ಹೂಡಿ ಭಾರಿ ನಷ್ಟ ಅನುಭವಿಸಿದ್ದ. ಸಾಲದ ಭಾರ ತಾಳಲಾರದೆ, ಬ್ಯಾಂಕ್‌ನ ಲಾಕರ್‌ನಲ್ಲಿ ಗ್ರಾಹಕರು ಅಡಮಾನ ಇರಿಸಿದ್ದ ಚಿನ್ನಾಭರಣಗಳನ್ನು ಕಳೆದ ಆರು ತಿಂಗಳಿನಿಂದ ಹಂತ-ಹಂತವಾಗಿ ಕದ್ದಿದ್ದಾನೆ. ಒಟ್ಟು 2 ಕೆಜಿ 780 ಗ್ರಾಂ ಚಿನ್ನಾಭರಣ ಕಳವು ಮಾಡಿದ್ದು, ಅದರ ಅಂದಾಜು ಮೌಲ್ಯ ಸುಮಾರು 4 ಕೋಟಿ ರೂ. ಆಗಿದೆ.

ಫೈನಾನ್ಸ್‌ಗಳಲ್ಲಿ ಅಡಮಾನ, ಮತ್ತೆ ಜೂಜಾಟ :

ಕದ್ದ ಚಿನ್ನವನ್ನು ಕತ್ರಿಗುಪ್ಪೆ ಪ್ರದೇಶದ ಎರಡು ಖಾಸಗಿ ಫೈನಾನ್ಸ್‌ಗಳಲ್ಲಿ ಅಡಮಾನ ಇಟ್ಟು ಹಣ ಪಡೆದಿದ್ದ ಆರೋಪಿ, ಅದರ ಒಂದು ಭಾಗದಿಂದ ಸಾಲ ತೀರಿಸಿದ್ದರೂ, ಉಳಿದ ಹಣವನ್ನು ಮತ್ತೆ ಗೇಮಿಂಗ್‌ಗೆ ಹೂಡಿ ಕಳೆದುಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯಿಂದ ಇದುವರೆಗೆ 1 ಕೆಜಿಗೂ ಅಧಿಕ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

ಗ್ರಾಹಕಿ ಬಂದಾಗಲೇ ಬಯಲು :

ಆರು ತಿಂಗಳ ಹಿಂದೆ ಚಿನ್ನ ಅಡವಿಟ್ಟು ಸಾಲ ಪಡೆದಿದ್ದ ಮಹಿಳೆಯೊಬ್ಬರು ಇತ್ತೀಚೆಗೆ ಸಾಲ ತೀರಿಸಿ ಒಡವೆ ಬಿಡಿಸಿಕೊಳ್ಳಲು ಬ್ಯಾಂಕ್‌ಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಪ್ಯಾಕೆಟ್‌ ಪರಿಶೀಲಿಸಿದಾಗ ಕೆಲವು ಆಭರಣಗಳು ನಾಪತ್ತೆಯಾಗಿದ್ದವು. ತಕ್ಷಣ ಅಧಿಕಾರಿಗಳು ಲಾಕರ್‌ ತಪಾಸಣೆ ನಡೆಸಿದಾಗ, ಕಳೆದ ಒಂದು ವರ್ಷದಲ್ಲಿ ಚಿನ್ನ ಸಾಲ ಮಂಜೂರು ಮಾಡಲಾಗಿದ್ದ 207 ಪ್ಯಾಕೆಟ್‌ಗಳ ಪೈಕಿ 21 ಪ್ಯಾಕೆಟ್‌ಗಳಲ್ಲಿ ಚಿನ್ನ ಕಾಣೆಯಾಗಿದ್ದು, ಮೂವತ್ತು ಪ್ಯಾಕೆಟ್‌ಗಳಲ್ಲಿ ಸಂಪೂರ್ಣ ಚಿನ್ನವೇ ನಾಪತ್ತೆಯಾಗಿರುವುದು ಪತ್ತೆಯಾಗಿದೆ.

ಆಂತರಿಕ ವಿಚಾರಣೆಯಲ್ಲಿ ಒಪ್ಪಿಗೆ :

ಬ್ಯಾಂಕ್‌ನ ಆಂತರಿಕ ವಿಚಾರಣೆಯಲ್ಲಿ ಆರೋಪಿ ಕಿರಣ್‌ ವಲಯ ಕಚೇರಿಗೆ ಹಾಜರಾಗಿ ಕಳ್ಳತನ ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ. ಚಿನ್ನವನ್ನು ಖಾಸಗಿ ಫೈನಾನ್ಸ್‌ಗಳಲ್ಲಿ ಅಡಮಾನ ಇಟ್ಟಿರುವುದನ್ನೂ ಬಾಯ್ಬಿಟ್ಟಿದ್ದಾನೆ. ಈ ಹಿನ್ನೆಲೆಯಲ್ಲಿ ವಲಯ ಮ್ಯಾನೇಜರ್‌ ನೀಡಿದ ದೂರಿನ ಮೇರೆಗೆ ಪೊಲೀಸರು ಬಂಧನ ಮಾಡಿದ್ದಾರೆ.

ಡಿಸಿಪಿ ಹೇಳಿಕೆ :

ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ್ ಮಾತನಾಡಿ, “ಬ್ಯಾಂಕ್‌ನಿಂದ ಸುಮಾರು 4 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕಳವು ಪ್ರಕರಣದಲ್ಲಿ ಸಹಾಯಕ ಮ್ಯಾನೇಜರ್‌ನ್ನು ಬಂಧಿಸಲಾಗಿದೆ. ಕದ್ದ ಹಣವನ್ನು ಆನ್‌ಲೈನ್‌ ಬೆಟ್ಟಿಂಗ್‌ಗೆ ಬಳಸಿರುವುದು ತನಿಖೆಯಿಂದ ಮೇಲ್ನೋಟಕ್ಕೆ ಗೊತ್ತಾಗಿದೆ. ಅಡಮಾನ ಇಟ್ಟಿರುವ ಫೈನಾನ್ಸ್‌ಗಳು ಚಿನ್ನವನ್ನು ಪೊಲೀಸರಿಗೆ ಒಪ್ಪಿಸಲು ಹಿಂದೇಟು ಹಾಕುತ್ತಿದ್ದು, ಈ ವಿಚಾರವನ್ನು ಕೋರ್ಟ್‌ ಗಮನಕ್ಕೆ ತಂದು ಮುಂದಿನ ಕ್ರಮ ಕೈಗೊಳ್ಳಲಾಗಿದೆ” ಎಂದರು.

ಪ್ರಕರಣದ ಕುರಿತು ಮುಂದಿನ ತನಿಖೆ ಮುಂದುವರಿದಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

5 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

7 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

1 day ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

1 day ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

1 day ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago