ದುರ್ಬಲ ಕಲಾವಿದರ ಬದುಕಿಗೆ ಬೆಳಕು ನೀಡುತ್ತಿರುವ ಪಟ್ಲ ಸತೀಶ್ ಶೆಟ್ಟಿ – ಶಾಸಕ ಬೇಳೂರು ಗೋಪಾಲಕೃಷ್ಣ

Patla Satish Shetty’s Patla Foundation continues to support Yakshagana artists and students by providing free training, housing support, and financial aid, becoming a ray of hope for underprivileged folk artists in Hosanagara.

ದುರ್ಬಲ ಕಲಾವಿದರ ಬದುಕಿಗೆ ಬೆಳಕು ನೀಡುತ್ತಿರುವ ಪಟ್ಲ ಸತೀಶ್ ಶೆಟ್ಟಿ – ಶಾಸಕ ಬೇಳೂರು ಗೋಪಾಲಕೃಷ್ಣ

ಹೊಸನಗರ : ಇನ್ನೊಬ್ಬರಿಗೆ ಸಹಾಯ ಮಾಡುವುದರಿಂದ ಯಾರೂ ಬಡವರಾಗುವುದಿಲ್ಲ ಬದಲಾಗಿ ಅದು ಹೃದಯವನ್ನು ಶ್ರೀಮಂತಗೊಳಿಸುತ್ತದೆ. ಆ ಮಾತಿಗೆ ಜೀವಂತ ಉದಾಹರಣೆಯಾಗಿ ಪಟ್ಲ ಸತೀಶ್ ಶೆಟ್ಟಿ ಅವರು ಇಂದು ಕಾಣಿಸುತ್ತಿದ್ದಾರೆ. ದುರ್ಬಲ ಕಲಾವಿದರ ಬದುಕಿಗೆ ಆಸರೆಯಾಗುವ ಮೂಲಕ ಅವರ ಭವಿಷ್ಯಕ್ಕೆ ಹೊಸ ದಾರಿ ತೋರಿಸುತ್ತಿರುವ ಪಟ್ಲ ಸತೀಶ್ ಶೆಟ್ಟಿಯವರ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಶಾಸಕ ಗೋಪಾಲಕೃಷ್ಣ ಹೇಳಿದರು.

ಶನಿವಾರ ಹೊಸನಗರದ ಗಾಯತ್ರಿ ಮಂದಿರದಲ್ಲಿ ಪಟ್ಲ ಫೌಂಡೇಶನ್ ಆಶ್ರಯದಲ್ಲಿ ನಡೆದ ಯಕ್ಷಗಾನ ಪ್ರಸಂಗ ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ ಗ್ರಾಮೀಣ ಪ್ರದೇಶದ ಪ್ರತಿಯೊಬ್ಬ ವಿದ್ಯಾರ್ಥಿಗೂ ಯಕ್ಷಗಾನದ ಪರಿಚಯ ಇರಬೇಕು. ಕಲಾವಿದರಾಗದಿದ್ದರೂ ಉತ್ತಮ ಯಕ್ಷಗಾನ ಪ್ರೇಕ್ಷಕರಾಗಬೇಕು ಎಂಬ ಉದ್ದೇಶದಿಂದ ಪಟ್ಲ ಫೌಂಡೇಶನ್ ಕಳೆದ ಹತ್ತು ವರ್ಷಗಳಿಂದ ಯಕ್ಷಕಲಾವಿದರು ಮತ್ತು ಅವರ ಕುಟುಂಬಗಳಿಗಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ರಾಷ್ಟ್ರಮಟ್ಟದಲ್ಲಿ ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸುವ ಕಾರ್ಯವೂ ನಿರಂತರವಾಗಿ ನಡೆಯುತ್ತಿದೆ ಎಂದು ಹೇಳಿದರು.

ಡಿಸಿಸಿ ಬ್ಯಾಂಕ್ ಹಾಗೂ ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌಡ ಮಾತನಾಡಿ ಯಕ್ಷಗಾನ ಕಲೆಯನ್ನು ದೇವರಂತೆ ಪೂಜಿಸುವವರು, ಕಲಾವಿದರನ್ನು ಪ್ರೀತಿಸುವ ಅಭಿಮಾನಿಗಳು ಮತ್ತು ದಾನಿಗಳು ನಮ್ಮ ನಡುವೆ ಹಲವರಿದ್ದಾರೆ. ಆದರೆ ಸ್ವತಃ ಒಬ್ಬ ಕಲಾವಿದನಾಗಿ ಬಡ ಮತ್ತು ಅಶಕ್ತ ಕಲಾವಿದರ ಬೆಂಬಲಕ್ಕೆ ನಿಂತವರು ವಿರಳ. ಆ ವಿರಳರಲ್ಲಿ ಪಟ್ಲ ಸತೀಶ್ ಶೆಟ್ಟಿಯವರು ಪ್ರಮುಖರು ಎಂದು ಹೇಳಿದರು.

ಅಂ. ರಾಮಶೇಟ್ ವೇದಿಕೆ ಹಾಗೂ ಶ್ರೀ ಗಣಪತಿ ದೇವಾಲಯದ ಮಾರ್ಕೋಡು ಸುಬ್ರುಯ ಆಚಾರ್ಯ ವೇದಿಕೆಗಳಲ್ಲಿ ಒಟ್ಟು 45 ಯಕ್ಷಗಾನ ಪ್ರಸಂಗಗಳು ಪ್ರದರ್ಶನಗೊಂಡವು.

ಈ ಸಂದರ್ಭದಲ್ಲಿ ಶಾಸಕರು, ಆರ್.ಎಂ. ಮಂಜುನಾಥ ಗೌಡರು, ಶ್ರೀ ರಾಮಕೃಷ್ಣ ವಿದ್ಯಾ ಸಂಸ್ಥೆ ಹಾಗೂ ವಿವಿಧ ಸಂಘ–ಸಂಸ್ಥೆಗಳ ವತಿಯಿಂದ ಪಟ್ಲ ಸತೀಶ್ ಶೆಟ್ಟಿಯವರನ್ನು ಗೌರವಿಸಿ ಸನ್ಮಾನಿಸಲಾಯಿತು.

ಪಟ್ಲ ಫೌಂಡೇಶನ್ ಆಶ್ರಯದಲ್ಲಿ ಹೊಸನಗರ, ಸಾಗರ ಮತ್ತು ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ 50ಕ್ಕೂ ಹೆಚ್ಚು ಶಾಲೆಗಳ 5,500 ವಿದ್ಯಾರ್ಥಿಗಳಿಗೆ ಉಚಿತ ಯಕ್ಷಶಿಕ್ಷಣ ನೀಡಲಾಗುತ್ತಿದೆ. ಮಕ್ಕಳ ಪ್ರತಿಭೆ ಪ್ರದರ್ಶನಕ್ಕೆ ಎರಡು ವೇದಿಕೆಗಳಲ್ಲಿ 30ಕ್ಕೂ ಹೆಚ್ಚು ಯಕ್ಷಗಾನ ಪ್ರದರ್ಶನಗಳು ನಡೆದವು. ಜೊತೆಗೆ ಹೊಸನಗರದ ಯಕ್ಷಗಾನ ಕಲಾವಿದರಿಗೆ ನಾಲ್ಕು ಆಶ್ರಯ ಮನೆಗಳನ್ನು ನೀಡಲಾಗಿದ್ದು, ಆರ್ಥಿಕವಾಗಿ ಹಿಂದುಳಿದ 15 ಕಲಾವಿದರಿಗೆ ತಲಾ ₹30,000 ಪ್ರೋತ್ಸಾಹ ಧನ ವಿತರಿಸಲಾಗಿದೆ. 500 ಮಕ್ಕಳಿಗೆ ಒಂದು ದಿನದ ಪ್ರವಾಸವೂ ಆಯೋಜಿಸಲಾಗಿದೆ ಎಂದು ಪತ್ರಕರ್ತ ನಗರ ರಾಘವೇಂದ್ರ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಡಿ. ದೇವರಾಜ್, ಉದ್ಯಮಿ ಸುರೇಶ್ ಎನ್., ಡಾ. ಚೈತನ್ಯ, ದುಮ್ಮ ವಿನಯ್, ಸಾಹಿತಿ ಸುದೀಂದ್ರ ಭಂಡರಕರ್, ಪತ್ರಕರ್ತ ಸಂಘದ ಅಧ್ಯಕ್ಷ ಎಂ.ಕೆ. ವೆಂಕಟೇಶ್ ಮೂರ್ತಿ, ಗೌತಮ್ ಆಚಾರ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸುಜಾತ ಸುರೇಶ್ ಸ್ವಾಗತಿಸಿ, ಸುದೀಂದ್ರ ಪಂಡಿತ್ ಕಾರ್ಯಕ್ರಮ ನಿರೂಪಿಸಿದರು. 700ಕ್ಕೂ ಹೆಚ್ಚು ವಿದ್ಯಾರ್ಥಿಗಳು ಯಕ್ಷಗಾನ ಪ್ರದರ್ಶನದಲ್ಲಿ ಭಾಗವಹಿಸಿದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

4 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

5 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

22 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

23 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

1 day ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago