POSTMANNEWS

ನೈಜ ಸುದ್ದಿ ನೇರ ಬಿತ್ತರ..

ರಾಹುಲ್ ಗಾಂಧಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಪ್ರಕರಣ : ರಾಜೇಶ್ ಹಿರಿಮನೆಗೆ ಜಾಮೀನು

HosaNagara JMFC Court granted bail to Rajesh Hirimane, accused in a social media post case involving alleged derogatory content against Lok Sabha Opposition Leader Rahul Gandhi.

ರಾಹುಲ್ ಗಾಂಧಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಪ್ರಕರಣ : ರಾಜೇಶ್ ಹಿರಿಮನೆಗೆ ಜಾಮೀನು

ಹೊಸನಗರ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡ ಆರೋಪದಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದ ತೀರ್ಥಹಳ್ಳಿ ಶಾಸಕರ ಆಪ್ತ ಸಹಾಯಕ ರಾಜೇಶ್ ಹಿರಿಮನೆ ರವರನ್ನು ಇಂದು ಜಾಮೀನಿನ ಮೇಲೆ ಬಿಡುಗಡೆಗೊಳಿಸಿ ಹೊಸನಗರ ಜೆ.ಎಂ.ಎಫ್.ಸಿ (JMFC) ನ್ಯಾಯಾಲಯ ಆದೇಶ ಹೊರಡಿಸಿದೆ.

ಪ್ರಕರಣದ ವಿಚಾರಣೆಯನ್ನು ಇಂದು ನಡೆಸಿದ ಹೊಸನಗರ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರು, ಆರೋಪಿ ರಾಜೇಶ್ ಹಿರಿಮನೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಪರಿಗಣಿಸಿ, ಜಾಮೀನಿನ ಆಧಾರದ ಮೇಲೆ ಬಿಡುಗಡೆಗೊಳಿಸುವಂತೆ ಆದೇಶಿಸಿದರು.

ಸಾಮಾಜಿಕ ಜಾಲತಾಣದಲ್ಲಿ ರಾಹುಲ್ ಗಾಂಧಿಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್‌ ಪ್ರಕಟಿಸಿದ್ದ ಪ್ರಕರಣದಲ್ಲಿ ಬುಧವಾರ ಆರೋಪಿ ರಾಜೇಶ್ ಹಿರಿಮನೆ ರವರಿಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಲಾಗಿತ್ತು.ರಾಜೇಶ್ ಹಿರಿಮನೆ ಪರವಾಗಿ ವಕೀಲ ವಾಲೇಮನೆ ಶಿವಕುಮಾರ್ ವಾದ ಮಂಡಿಸಿದ್ದರು.

ಘಟನೆಯ ವಿವರ:

ಆರೋಪಿ ರಾಜೇಶ್ ಹಿರಿಮನೆ, ರಾಹುಲ್ ಗಾಂಧಿ ಅವರ ಮುಖದ ಅರ್ಧ ಭಾಗ ಹಾಗೂ ಪಾಕಿಸ್ತಾನ ಸೇನೆಯ ಸಮವಸ್ತ್ರ ಧರಿಸಿದ ಅಧಿಕಾರಿ ‘ಅಸಿಮ್’ (ASIM) ಎಂಬುವರ ಚಿತ್ರವನ್ನು ಎಡಿಟ್ ಮಾಡಿ ಒಂದೇ ಚಿತ್ರದಲ್ಲಿ ಸಂಯೋಜಿಸಿದ್ದರು. ಈ ಚಿತ್ರಕ್ಕೆ “ONE AGENDA” ಎಂಬ ಟ್ಯಾಗ್‌ಲೈನ್ ನೀಡಿದ್ದು, ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದರು ಎಂಬ ಆರೋಪ ಇದೆ.

ಈ ಸಂಬಂಧ ದಿನಾಂಕ 20/05/2025 ರಂದು ನಗರ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ (BNS) ಕಾಯ್ದೆಯ ಸೆಕ್ಷನ್ 353(2) ಅಡಿಯಲ್ಲಿ ಪೊಲೀಸರು ಸ್ವಯಂ ಪ್ರೇರಿತವಾಗಿ (Suo Moto) ಪ್ರಕರಣ ದಾಖಲಿಸಿಕೊಂಡಿದ್ದರು. ಪ್ರಕರಣದ ತನಿಖೆ ಮುಂದುವರಿದಿದ್ದು, ನ್ಯಾಯಾಲಯದ ಆದೇಶದಂತೆ ಆರೋಪಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

About The Author

Exit mobile version