ರಿಪ್ಪನ್‌ಪೇಟೆ: ಪುಲ್ವಾಮಾ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ – ಹಿಂದೂ ಜಾಗರಣ ವೇದಿಕೆಯಿಂದ ಸ್ಮರಣಾ ಕಾರ್ಯಕ್ರಮ

Rippanpet: Tribute to Pulwama martyrs – Memorial program by Hindu Jagran Vedike

ರಿಪ್ಪನ್‌ಪೇಟೆ: ಪುಲ್ವಾಮಾ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ – ಹಿಂದೂ ಜಾಗರಣ ವೇದಿಕೆಯಿಂದ ಸ್ಮರಣಾ ಕಾರ್ಯಕ್ರಮ

POSTMAN NEWS KANNADA

ರಿಪ್ಪನ್‌ಪೇಟೆ: 2019ರ ಫೆಬ್ರವರಿ 14ರಂದು ಜಮ್ಮು–ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಭೀಕರ ಉಗ್ರ ದಾಳಿಯಲ್ಲಿ 40 ಸಿಆರ್‌ಪಿಎಫ್ ಯೋಧರು ಹುತಾತ್ಮರಾದ ದುರ್ಘಟನೆ ಇಡೀ ದೇಶವನ್ನು ದುಃಖದಲ್ಲಿ ಮುಳುಗಿಸಿತ್ತು. ದೇಶದ ಭದ್ರತೆಗೆ ತಮ್ಮ ಅಮೂಲ್ಯ ಪ್ರಾಣಗಳನ್ನು ಅರ್ಪಿಸಿದ ಆ ವೀರ ಯೋಧರ ತ್ಯಾಗ ಸದಾ ನಮ್ಮ ಹೃದಯಗಳಲ್ಲಿ ಅಮರವಾಗಿರುತ್ತದೆ ಎಂದು ಹಿಂದೂ ಜಾಗರಣ ವೇದಿಕೆಯ ಮಂಜುನಾಥ ಆಚಾರ್ ಹೇಳಿದರು.

ಪಟ್ಟಣದ ವಿನಾಯಕವೃತ್ತದಲ್ಲಿ ಹಿಂದೂ ಜಾಗರಣ ವೇದಿಕೆ ವಿನಾಯಕಪೇಟೆ ಘಟಕದ ವತಿಯಿಂದ ಹುತಾತ್ಮ ಯೋಧರ ಸ್ಮರಣಾರ್ಥ ಪುಷ್ಪಾರ್ಚನೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಯೋಧರ ತ್ಯಾಗವನ್ನು ಸ್ಮರಿಸಿ ಮೌನಾಚರಣೆ ನಡೆಸಲಾಯಿತು.

ಸೈನಿಕರು ಕರ್ತವ್ಯನಿಷ್ಠೆ, ದೇಶಭಕ್ತಿ ಮತ್ತು ಧೈರ್ಯದ ಪ್ರತೀಕವಾಗಿದ್ದು, “ರಾಷ್ಟ್ರ ಮೊದಲು” ಎಂಬ ಸಂದೇಶವನ್ನು ತಮ್ಮ ಬಲಿದಾನದ ಮೂಲಕ ಜಗತ್ತಿಗೆ ಸಾರಿದ್ದಾರೆ. ಯೋಧರ ಕುಟುಂಬಗಳು ಅನುಭವಿಸಿದ ನೋವು ಅಪಾರವಾದರೂ, ಅವರ ತ್ಯಾಗವು ಕೋಟ್ಯಾಂತರ ಭಾರತೀಯರ ಹೃದಯಗಳಲ್ಲಿ ದೇಶಪ್ರೇಮವನ್ನು ಮತ್ತಷ್ಟು ಗಟ್ಟಿಗೊಳಿಸಿದೆ ಎಂದು ನಾಗರತ್ನ ದೇವರಾಜ್ ಅಭಿಪ್ರಾಯಪಟ್ಟರು.

ಪುಲ್ವಾಮಾ ದಾಳಿಯ ಹುತಾತ್ಮರ ಸ್ಮರಣೆ ಕೇವಲ ಒಂದು ದಿನದ ಆಚರಣೆಯಲ್ಲ; ಅದು ದೇಶದ ಸುರಕ್ಷತೆಗೆ ನಾವೆಲ್ಲರೂ ಸದಾ ಜಾಗೃತರಾಗಿರಬೇಕೆಂಬ ಸಂಕಲ್ಪದ ದಿನವಾಗಿದೆ. ಆ ವೀರರಿಗೆ ನಮ್ಮ ನಮನಗಳು. ಅವರ ಆತ್ಮಗಳಿಗೆ ಶಾಂತಿ ಸಿಗಲಿ, ಅವರ ತ್ಯಾಗವು ದೇಶಕ್ಕೆ ದಾರಿ ದೀಪವಾಗಿರಲಿ ಎಂದು ನಿವೃತ್ತ ಸೈನಿಕ ರಾಘವೇಂದ್ರ ಆಚಾರ್ಯ ಹೇಳಿದರು.

ಈ ಕಾರ್ಯಕ್ರಮದಲ್ಲಿ ಹಿಂದೂ ಜಾಗರಣ ವೇದಿಕೆಯ ಕುಷನ್ ದೇವರಾಜ್, ಸಂಜಯ್, ಶ್ರೀನಿವಾಸ್ ಆಚಾರ್, ರಾಘವೇಂದ್ರ, ಆಟೋ ಪ್ರಕಾಶ್, ಮೂಗುಡ್ತಿ ಅರುಣ್, ಅಭಿಷೇಕ್, ಆರ್. ರಾಘವೇಂದ್ರ, ತ.ಮ. ನರಸಿಂಹ, ಹೊನ್ನಾಳಿ ರವಿ, ಆಟೋ ಸಂತೋಷ್ ಸೇರಿದಂತೆ ಮಹಿಳಾ ಮುಖಂಡರಾದ ಪದ್ಮ ಸುರೇಶ, ಶೈಲಾ ಪ್ರಭು, ಲಕ್ಷ್ಮಿ ಶ್ರೀನಿವಾಸ್ ಹಾಗೂ ಅನೇಕರು ಭಾಗವಹಿಸಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…

4 hours ago

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…

5 hours ago

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

9 hours ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

13 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

15 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

1 day ago