A grand Hindu Sangama Shobha Yatre was held in Rippanpete with the participation of thousands of devotees from surrounding villages, showcasing unity, culture, and tradition.
ರಿಪ್ಪನ್‌ಪೇಟೆಯಲ್ಲಿ ಭವ್ಯ ‘ಹಿಂದೂ ಸಂಗಮ’ ಶೋಭಾ ಯಾತ್ರೆ; ಸಹಸ್ರಾರು ಜನರ ಭಾಗಿ
ರಿಪ್ಪನ್‌ಪೇಟೆ: ಪಟ್ಟಣದ ಹಿಂದೂಪರ ಸಂಘಟನೆಗಳ ಆಶ್ರಯದಲ್ಲಿ ಸೋಮವಾರ ಆಯೋಜಿಸಲಾಗಿದ್ದ ‘ಹಿಂದೂ ಸಂಗಮ’ ಶೋಭಾ ಯಾತ್ರೆ ಅತ್ಯಂತ ಅದ್ದೂರಿಯಾಗಿ ಜರುಗಿತು. ರಿಪ್ಪನ್‌ಪೇಟೆ ಸೇರಿದಂತೆ ಸುತ್ತಮುತ್ತಲಿನ ಬಾಳೂರು ಹಾಗೂ ಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಿಂದ ಆಗಮಿಸಿದ ಸಹಸ್ರಾರು ಹಿಂದೂ ಬಾಂಧವರು ಈ ಐತಿಹಾಸಿಕ ಸಂಗಮಕ್ಕೆ ಸಾಕ್ಷಿಯಾದರು.
ಪಟ್ಟಣದ ಹೊಸನಗರ ರಸ್ತೆಯಲ್ಲಿರುವ ಗೌಡ ಸಾರಸ್ವತ ಮಂದಿರದಿಂದ ಶೋಭಾ ಯಾತ್ರೆಗೆ ಅಧಿಕೃತ ಚಾಲನೆ ನೀಡಲಾಯಿತು. ಕೇಸರಿ ಧ್ವಜಗಳನ್ನು ಕೈಯಲ್ಲಿ ಹಿಡಿದ ಸಾವಿರಾರು ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉತ್ಸಾಹದಿಂದ ಮೆರವಣಿಗೆಯಲ್ಲಿ ಭಾಗವಹಿಸಿದರು. ಶೋಭಾ ಯಾತ್ರೆ ತೀರ್ಥಹಳ್ಳಿ ರಸ್ತೆ, ಸಾಗರ ರಸ್ತೆ ಹಾಗೂ ಶಿವಮೊಗ್ಗ ರಸ್ತೆ ಸೇರಿದಂತೆ ಪಟ್ಟಣದ ಪ್ರಮುಖ ಮಾರ್ಗಗಳಲ್ಲಿ ಸಂಚರಿಸಿ ಜನಮನ ಸೆಳೆಯಿತು. ಮೆರವಣಿಗೆಯುದ್ದಕ್ಕೂ ಜೈಕಾರಗಳು ಮೊಳಗಿದರೆ, ಇಡೀ ಪಟ್ಟಣ ಕೇಸರಿಮಯವಾಗಿ ಕಂಗೊಳಿಸಿತು.
ಈ ಸಂದರ್ಭದಲ್ಲಿ ಮಕ್ಕಳಿಗಾಗಿ ವಿಶೇಷ ಛದ್ಮವೇಷ ಸ್ಪರ್ಧೆ ಆಯೋಜಿಸಲಾಗಿದ್ದು, ವಿಭಿನ್ನ ವೇಷಭೂಷಣಗಳಲ್ಲಿ ಮಕ್ಕಳು ಮೆರವಣಿಗೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮಕ್ಕೆ ವಿಶೇಷ ರಂಗು ತುಂಬಿದರು.
ಶೋಭಾ ಯಾತ್ರೆಯ ಬಳಿಕ ಪಟ್ಟಣದ ಭೂಪಾಳಂ ಚಂದ್ರಶೇಖರ್ ಸಭಾಭವನದಲ್ಲಿ ಸಭಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಧಿಕ್ಸೂಚಿ ಭಾಷಣಕಾರರಾಗಿ ಹಾರಿಕಾ ಮಂಜುನಾಥ್ ಆಗಮಿಸಿ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ Hosanagara Taluk Advocates Association extends…
ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ - ಆರೋಪಿ ಅರೆಸ್ಟ್! Sagar police arrested a man accused…
ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ Free 31-day mobile phone repair training for…
ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ Farmers and agricultural workers will hold a…
ಸಾಗರ: ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ; ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನೆ Farmers staged a massive protest…
ಇಂಡಿಯಾ ಪೋಸ್ಟ್‌ನಲ್ಲಿ 25,000ಕ್ಕೂ ಹೆಚ್ಚು ಹುದ್ದೆ: 10ನೇ ತರಗತಿ ಪಾಸಾದವರಿಗೆ ಅವಕಾಶ, ಪರೀಕ್ಷೆ ಇಲ್ಲದೆ ನೇಮಕಾತಿ India Post GDS…