ಸುರಕ್ಷಿತ ಸಂಚಾರಕ್ಕೆ ಪೊಲೀಸರ ಹೆಜ್ಜೆ : ಕೊಪ್ಪರಗುಂಡಿ–ಅಮ್ಮನಘಟ್ಟ ರಸ್ತೆಯಲ್ಲಿ ರೇಡಿಯಮ್ ಸ್ಟಿಕ್ಕರ್ ಅಳವಡಿಕೆ

Road safety initiative carried out in Ripponpet police station limits as reflective radium stickers were installed from Kopparagundi Surulikoppa Nursery to Ammanghatta Cross under the leadership of PSI Raju Reddy to prevent accidents and improve night-time visibility.

ಸಂಚಾರಕ್ಕೆ ಪೊಲೀಸರ ಹೆಜ್ಜೆ : ಕೊಪ್ಪರಗುಂಡಿ–ಅಮ್ಮನಘಟ್ಟ ರಸ್ತೆಯಲ್ಲಿ ರೇಡಿಯಮ್ ಸ್ಟಿಕ್ಕರ್ ಅಳವಡಿಕೆ

ರಿಪ್ಪನಪೇಟೆ: ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ಸಾರ್ವಜನಿಕರ ಸಂಚಾರ ಸುರಕ್ಷತೆ ಹೆಚ್ಚಿಸುವ ಉದ್ದೇಶದಿಂದ ಪಟ್ಟಣದ ಪಿಎಸೈ ರಾಜು ರೆಡ್ಡಿ ನೇತ್ರತ್ವದಲ್ಲಿ ಸಿಬ್ಬಂದಿಗಳು ಕೋಡೂರು ಗ್ರಾಪಂ ವ್ಯಾಪ್ತಿಯಲ್ಲಿ ರೇಡಿಯಮ್ ಸ್ಟಿಕ್ಕರ್ ಅಳವಡಿಸುವ ಕಾರ್ಯಾಚರಣೆ ನಡೆಸಿದರು.

ಕೋಡೂರು ಸಮೀಪದ ಕೊಪ್ಪರಗುಂಡಿ ಸುರಳಿಕೊಪ್ಪ ನರ್ಸರಿಯಿಂದ ಅಮ್ಮನಘಟ್ಟ ದೇವಸ್ಥಾನದ ತಿರುವಿನವರೆಗೆ ರಾತ್ರಿ ಸಮಯದಲ್ಲಿ ವಾಹನ ಚಾಲಕರಿಗೆ ಸ್ಪಷ್ಟ ದೃಶ್ಯತೆ ಸಿಗುವಂತೆ ರಸ್ತೆ ಬದಿಗಳು ಹಾಗೂ ಅಪಾಯಕರ ತಿರುವುಗಳಲ್ಲಿ ರೇಡಿಯಮ್ ಸ್ಟಿಕ್ಕರ್‌ಗಳನ್ನು ಅಳವಡಿಸಲಾಯಿತು.

ಪಿಎಸ್‌ಐ ರಾಜು ರೆಡ್ಡಿ ಮಾತನಾಡಿ, ಈ ಮಾರ್ಗದಲ್ಲಿ ದಿನನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ವಾಹನ ಸಂಚಾರ ನಡೆಯುತ್ತಿದ್ದು, ರಾತ್ರಿ ವೇಳೆ ಬೆಳಕಿನ ಕೊರತೆಯಿಂದ ಅಪಘಾತಗಳ ಸಂಭವ ಹೆಚ್ಚಾಗುವ ಸಾಧ್ಯತೆ ಇತ್ತು. ಇದನ್ನು ಮನಗಂಡು, ರಸ್ತೆ ಸುರಕ್ಷತಾ ಕ್ರಮಗಳ ಭಾಗವಾಗಿ ರೇಡಿಯಮ್ ಸ್ಟಿಕ್ಕರ್ ಅಳವಡಿಕೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರೇಡಿಯಮ್ ಸ್ಟಿಕ್ಕರ್‌ಗಳು ದೂರದಿಂದಲೇ ಕಾಣಿಸಿಕೊಳ್ಳುವ ಕಾರಣ, ವಾಹನ ಚಾಲಕರು ಮುಂಚಿತವಾಗಿ ಎಚ್ಚರಿಕೆ ವಹಿಸಿ ಸುರಕ್ಷಿತವಾಗಿ ಸಂಚರಿಸಲು ಸಹಕಾರಿಯಾಗುತ್ತವೆ ಎಂದರು.

ರಸ್ತೆ ಅಪಘಾತಗಳನ್ನು ಕಡಿಮೆ ಮಾಡುವುದೇ ನಮ್ಮ ಮುಖ್ಯ ಗುರಿ. ಸಾರ್ವಜನಿಕರ ಜೀವ ಮತ್ತು ಆಸ್ತಿಯನ್ನು ರಕ್ಷಿಸುವ ದೃಷ್ಟಿಯಿಂದ ಇಂತಹ ಸುರಕ್ಷತಾ ಕ್ರಮಗಳನ್ನು ಮುಂದುವರಿಸಲಾಗುತ್ತದೆ,” ಎಂದು ಹೇಳಿದರು.

ಸ್ಥಳೀಯ ಸಾರ್ವಜನಿಕರು ಮತ್ತು ವಾಹನ ಚಾಲಕರು ಪೊಲೀಸ್ ಇಲಾಖೆಯ ಈ ಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಸಂಧರ್ಭದಲ್ಲಿ ಪೊಲೀಸ್ ಸಿಬ್ಬಂದಿಗಳಾದ ಉಮೇಶ್ , ರಾಮಚಂದ್ರ , ವಿಶ್ವನಾಥ್ ಹಾಗೂ ಅವಿನಾಶ್ ಸೇರಿದಂತೆ ಇನ್ನಿತರರು ಇದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ Hosanagara Taluk Advocates Association extends…

9 hours ago

ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ – ಆರೋಪಿ ಅರೆಸ್ಟ್!

ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ - ಆರೋಪಿ ಅರೆಸ್ಟ್! Sagar police arrested a man accused…

9 hours ago

ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ

ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ Free 31-day mobile phone repair training for…

9 hours ago

ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ

ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ Farmers and agricultural workers will hold a…

9 hours ago

ಸಾಗರ: ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ; ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನೆ

ಸಾಗರ: ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ; ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನೆ Farmers staged a massive protest…

18 hours ago

ಇಂಡಿಯಾ ಪೋಸ್ಟ್‌ನಲ್ಲಿ 25,000ಕ್ಕೂ ಹೆಚ್ಚು ಹುದ್ದೆ: 10ನೇ ತರಗತಿ ಪಾಸಾದವರಿಗೆ ಅವಕಾಶ, ಪರೀಕ್ಷೆ ಇಲ್ಲದೆ ನೇಮಕಾತಿ

ಇಂಡಿಯಾ ಪೋಸ್ಟ್‌ನಲ್ಲಿ 25,000ಕ್ಕೂ ಹೆಚ್ಚು ಹುದ್ದೆ: 10ನೇ ತರಗತಿ ಪಾಸಾದವರಿಗೆ ಅವಕಾಶ, ಪರೀಕ್ಷೆ ಇಲ್ಲದೆ ನೇಮಕಾತಿ India Post GDS…

18 hours ago