ರಿಪ್ಪನ್‌ಪೇಟೆಯಲ್ಲಿ ಕುಡಿಯುವ ನೀರಿಗೆ ತೀವ್ರ ಹಾಹಾಕಾರ – ಪಂಚಾಯಿತಿ ನಿರ್ಲಕ್ಷ್ಯಕ್ಕೆ ಜನರ ಆಕ್ರೋಶ

Severe drinking water crisis in Ripponpete Gram Panchayat limits has triggered public anger as borewells have dried up and authorities failed to provide tanker water, leaving residents struggling for basic needs.

ರಿಪ್ಪನ್‌ಪೇಟೆ: ಕಳೆದ ಒಂದು ತಿಂಗಳಿನಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸರಬರಾಜು ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಗವಟೂರು, ಬರುವೆ, ಕೆರೆಹಳ್ಳಿ ಸೇರಿದಂತೆ ಹಲವು ಪ್ರದೇಶಗಳ ನಿವಾಸಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ದಿನಕ್ಕೆ ಒಂದೇ ಬೊಕ್ಕಸ ನೀರಿಗೂ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದ್ದು, ಮಹಿಳೆಯರು ದೂರದ ಪ್ರದೇಶಗಳಿಗೆ ಹೋಗಿ ನೀರು ಹೊತ್ತು ತರುವ ಅನಿವಾರ್ಯತೆ ಎದುರಾಗಿದೆ.

ಗ್ರಾಮ ಪಂಚಾಯಿತಿ ವ್ಯಾಪ್ತಿಯ ಐದು ಬೋರ್‌ವೆಲ್‌ಗಳು ಸಂಪೂರ್ಣವಾಗಿ ನಿಷ್ಕ್ರಿಯಗೊಂಡಿದ್ದು, ಇದನ್ನೇ ನೆಪವಾಗಿ ಅಧಿಕಾರಿಗಳು ನೀರು ಪೂರೈಕೆ ಸಾಧ್ಯವಿಲ್ಲವೆಂದು ಹೇಳಿಕೊಳ್ಳುತ್ತಿದ್ದಾರೆ. ಆದರೆ ತಿಂಗಳಿನಷ್ಟು ಕಾಲ ಸಮಸ್ಯೆ ಮುಂದುವರಿದರೂ ಪರ್ಯಾಯ ವ್ಯವಸ್ಥೆ ಮಾಡದ ಪಂಚಾಯಿತಿ ಅಧಿಕಾರಿಗಳ ಬೇಜವಾಬ್ದಾರಿತನದ ವಿರುದ್ಧ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಪಂಚಾಯಿತಿ ವ್ಯಾಪ್ತಿಯ ಅರ್ಧಕ್ಕೂ ಹೆಚ್ಚು ಬೋರ್‌ವೆಲ್‌ಗಳು ನೀರಿಲ್ಲದೇ ಕೈಕೊಟ್ಟಿರುವ ವಿಚಾರವನ್ನು ಇತ್ತೀಚೆಗೆ ಕೆಡಿಪಿ ಸದಸ್ಯರೊಬ್ಬರು ಕೆಡಿಪಿ ಸಭೆಯಲ್ಲಿ ಪ್ರಸ್ತಾಪಿಸಿದ್ದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಬೇಳೂರು ಗೋಪಾಲಕೃಷ್ಣ ಹಾಗೂ ಆರಗ ಜ್ಞಾನೇಂದ್ರ ಸಮಸ್ಯೆಯ ಗಂಭೀರತೆಯನ್ನು ಮನಗಂಡು, ಸಂಬಂಧಪಟ್ಟ ಅಧಿಕಾರಿಗಳಿಗೆ ತಕ್ಷಣ ಕ್ರಮ ಕೈಗೊಂಡು ಜನರಿಗೆ ಸಮರ್ಪಕ ನೀರು ಪೂರೈಸುವಂತೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ.

ಆದರೂ ಸಭೆಯ ನಂತರವೂ ಸ್ಥಳೀಯ ಮಟ್ಟದಲ್ಲಿ ಯಾವುದೇ ಪರಿಣಾಮಕಾರಿ ಕ್ರಮಗಳು ಜಾರಿಯಾಗಿಲ್ಲ. ಹೊಸ ಬೋರ್‌ವೆಲ್ ಕೊರೆಸುವ ಕುರಿತು ಅಧಿಕಾರಿಗಳು ಚಿಂತನೆ ನಡೆಸುತ್ತಿದ್ದಾರೆ ಎನ್ನಲಾಗುತ್ತಿದರೂ, ಅದು ಕಾರ್ಯರೂಪಕ್ಕೆ ಬರದೆ ಜನರು ದಿನೇದಿನೇ ಸಂಕಷ್ಟ ಅನುಭವಿಸುವಂತಾಗಿದೆ. ಬೇಸಿಗೆ ಆರಂಭವಾಗುತ್ತಿರುವ ಈ ಸಂದರ್ಭದಲ್ಲಿ ನೀರಿನ ಸಮಸ್ಯೆ ಇನ್ನಷ್ಟು ಉಲ್ಬಣಗೊಳ್ಳುವ ಭೀತಿ ಎದುರಾಗಿದೆ.

ರಿಪ್ಪನ್ ಪೇಟೆ ಭಾಗದಲ್ಲಿ ನಡೆದ ಜೆಜೆಎಂ ಯೋಜನೆಗಳೆಲ್ಲಾ ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ನೆಲಕಚ್ಚಿ ಹೋಗಿರುವುದು ಗುತ್ತಿಗೆದಾರರು ಹಾಗೂ ಮಧ್ಯವರ್ತಿಗಳ ನಡುವೆ ನಡೆದ ಝಣ ಝಣ ಕಾಂಚಾನದ ಸದ್ದು ನೆನಪಿಸುತ್ತದೆ.

ಇನ್ನೂ ಗಂಭೀರವಾದ ಆರೋಪವೆಂದರೆ, ಗ್ರಾಮದ ಹೊರಭಾಗದಲ್ಲಿ ಕೊಳವೆಬಾವಿ ಕೊರೆಸಿದರೆ ನೀರು ಸಿಗುವ ಸಾಧ್ಯತೆ ಇದ್ದರೂ, ಪಂಚಾಯಿತಿ ನೀರು ಇಲ್ಲದ ಪ್ರದೇಶಗಳಲ್ಲೇ ಪದೇಪದೆ ಬೋರ್‌ವೆಲ್ ಕೊರೆಸುತ್ತಿದ್ದು, ಇದರಿಂದ ಸರ್ಕಾರಿ ಹಣ ವ್ಯರ್ಥವಾಗುತ್ತಿದೆ ಎಂಬುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಯೋಜನೆಗಳ ಅವೈಜ್ಞಾನಿಕ ಅನುಷ್ಠಾನ ಹಾಗೂ ಸ್ಥಳೀಯ ವಾಸ್ತವ್ಯವನ್ನು ಅರಿಯದ ನಿರ್ಧಾರಗಳು ಈ ಸಂಕಷ್ಟಕ್ಕೆ ಕಾರಣವೆಂದು ಜನರು ಆರೋಪಿಸುತ್ತಿದ್ದಾರೆ.

“ಕುಡಿಯುವ ನೀರು ಮೂಲಭೂತ ಹಕ್ಕು. ಶಾಶ್ವತ ಪರಿಹಾರ ಕಂಡುಕೊಳ್ಳುವವರೆಗೂ ತಕ್ಷಣ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು” ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಗ್ರಾಮ ಪಂಚಾಯಿತಿ ವಿರುದ್ಧ ತೀವ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿರುವ ಗ್ರಾಮಸ್ಥರು, ಸಮಸ್ಯೆಗೆ ಶೀಘ್ರ ಪರಿಹಾರ ಸಿಗದಿದ್ದರೆ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಲಿದೆ ಎಂದು ಎಚ್ಚರಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

3 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

5 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

22 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

22 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

24 hours ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago