All preparations are complete for the Hindu Sangama program to be held tomorrow at Ripponpete in Hosanagara taluk, with thousands of devotees expected to participate.
ರಿಪ್ಪನ್‌ಪೇಟೆಯಲ್ಲಿ ನಾಳೆ ನಡೆಯಲಿರುವ ಭವ್ಯ ಹಿಂದೂ ಸಂಗಮಕ್ಕೆ ಸಕಲ ಸಜ್ಜು
ರಿಪ್ಪನ್‌ಪೇಟೆ: ಹಿಂದೂ ಸಮಾಜವನ್ನು ಸಂಘಟಿತ, ಸ್ವಾವಲಂಬಿ, ಸಂಸ್ಕಾರಯುಕ್ತ ಹಾಗೂ ಸಾಮರಸ್ಯಯುಕ್ತವಾಗಿ ರೂಪಿಸುವ ಧ್ಯೇಯದೊಂದಿಗೆ ಕಾರ್ಯನಿರ್ವಹಿಸುತ್ತಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ತನ್ನ ಶತಮಾನೋತ್ಸವವನ್ನು ಆಚರಿಸುತ್ತಿರುವ ಹಿನ್ನೆಲೆ, ಪಂಚಾಯಿತಿ ಮಟ್ಟದಲ್ಲಿ ಹಿಂದೂ ಸಂಗಮ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಅದರ ಭಾಗವಾಗಿ ರಿಪ್ಪನ್‌ಪೇಟೆಯಲ್ಲಿ ನಾಳೆ (ಸೋಮವಾರ) ನಡೆಯಲಿರುವ ಹಿಂದೂ ಸಂಗಮ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳು ಅಂತಿಮ ಹಂತ ತಲುಪಿವೆ.
ಈಗಾಗಲೇ ಹೆದ್ದಾರಿಪುರದಲ್ಲಿ ನಡೆದ ಹಿಂದೂ ಸಂಗಮ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿದ್ದು, ರಿಪ್ಪನ್‌ಪೇಟೆಯಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಸಾವಿರಾರು ಸಂಖ್ಯೆಯಲ್ಲಿ ಹಿಂದೂ ಬಾಂಧವರು ಭಾಗವಹಿಸುವ ನಿರೀಕ್ಷೆ ಇದೆ. ಕಾರ್ಯಕ್ರಮವನ್ನು ಶಿಸ್ತಿನಿಂದ ಹಾಗೂ ಸಂಭ್ರಮದ ವಾತಾವರಣದಲ್ಲಿ ನಡೆಸಲು ಸಮಿತಿ ಸದಸ್ಯರು ಸಜ್ಜಾಗಿದ್ದಾರೆ.
ಹೊಸನಗರ ತಾಲೂಕಿನ ಒಟ್ಟು 30 ಪಂಚಾಯಿತಿಗಳನ್ನು ಪ್ರತಿನಿಧಿಸುವಂತೆ ಆಯ್ದ 17 ವಿವಿಧ ಸ್ಥಳಗಳಲ್ಲಿ, ಜನವರಿ 22ರಿಂದ ಫೆಬ್ರವರಿ 8ರವರೆಗೆ ವಿಭಿನ್ನ ದಿನಗಳಲ್ಲಿ ಹಿಂದೂ ಸಂಗಮ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಈ ಕಾರ್ಯಕ್ರಮಗಳ ಮೂಲಕ ಹಿಂದೂ ಧರ್ಮ ಮತ್ತು ಸಂಸ್ಕೃತಿಗಳ ಸಂರಕ್ಷಣೆ, ಸ್ವಾವಲಂಬನೆ ಹಾಗೂ ಸಮಗ್ರ ಸಮಾಜ ವಿಕಾಸದ ಕುರಿತು ಜಾಗೃತಿ ಮೂಡಿಸುವುದು ಮುಖ್ಯ ಉದ್ದೇಶವಾಗಿದೆ.
ಜಾಗೃತ ಹಾಗೂ ಸಂಘಟಿತ ಹಿಂದೂ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕಟಿಬದ್ಧರಾಗಬೇಕು ಎಂಬ ಆಶಯದೊಂದಿಗೆ ಈ ಉತ್ಸವಗಳನ್ನು ಆಯೋಜಿಸಲಾಗಿದ್ದು, ಎಲ್ಲಾ ಹಿಂದೂ ಬಾಂಧವರು ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಭಾಗವಹಿಸಿ ಸಮಾಜ ಜಾಗೃತಿಯ ಈ ಮಹತ್ವದ ಕಾರ್ಯಕ್ರಮದಲ್ಲಿ ತಮ್ಮ ಪಾತ್ರವನ್ನು ಅರಿತುಕೊಳ್ಳಬೇಕು ಎಂದು ಆಯೋಜಕರು ಮನವಿ ಮಾಡಿದ್ದಾರೆ.
ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Special pooja was offered at Varasiddhi…
ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ BJP launches a month-long Seva Sankalpa Abhiyan…
ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ Youth Congress and NSUI workers in Shivamogga…
ಶಿವಮೊಗ್ಗ ಲೋಕಾಯುಕ್ತ ಎಸ್‌ಪಿಯಾಗಿ ಆಂಟನಿ ಜಾನ್ ನೇಮಕ Anthony John has been appointed as the new Lokayukta…
ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ…
ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…