ರಿಪ್ಪನ್‌ಪೇಟೆಯಲ್ಲಿ ನಾಳೆ ನಡೆಯಲಿರುವ ಭವ್ಯ ಹಿಂದೂ ಸಂಗಮಕ್ಕೆ ಸಕಲ ಸಜ್ಜು

All preparations are complete for the Hindu Sangama program to be held tomorrow at Ripponpete in Hosanagara taluk, with thousands of devotees expected to participate.

ರಿಪ್ಪನ್‌ಪೇಟೆಯಲ್ಲಿ ನಾಳೆ ನಡೆಯಲಿರುವ ಭವ್ಯ ಹಿಂದೂ ಸಂಗಮಕ್ಕೆ ಸಕಲ ಸಜ್ಜು

ರಿಪ್ಪನ್‌ಪೇಟೆ: ಹಿಂದೂ ಸಮಾಜವನ್ನು ಸಂಘಟಿತ, ಸ್ವಾವಲಂಬಿ, ಸಂಸ್ಕಾರಯುಕ್ತ ಹಾಗೂ ಸಾಮರಸ್ಯಯುಕ್ತವಾಗಿ ರೂಪಿಸುವ ಧ್ಯೇಯದೊಂದಿಗೆ ಕಾರ್ಯನಿರ್ವಹಿಸುತ್ತಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ತನ್ನ ಶತಮಾನೋತ್ಸವವನ್ನು ಆಚರಿಸುತ್ತಿರುವ ಹಿನ್ನೆಲೆ, ಪಂಚಾಯಿತಿ ಮಟ್ಟದಲ್ಲಿ ಹಿಂದೂ ಸಂಗಮ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಅದರ ಭಾಗವಾಗಿ ರಿಪ್ಪನ್‌ಪೇಟೆಯಲ್ಲಿ ನಾಳೆ (ಸೋಮವಾರ) ನಡೆಯಲಿರುವ ಹಿಂದೂ ಸಂಗಮ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳು ಅಂತಿಮ ಹಂತ ತಲುಪಿವೆ.

ಈಗಾಗಲೇ ಹೆದ್ದಾರಿಪುರದಲ್ಲಿ ನಡೆದ ಹಿಂದೂ ಸಂಗಮ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿದ್ದು, ರಿಪ್ಪನ್‌ಪೇಟೆಯಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಸಾವಿರಾರು ಸಂಖ್ಯೆಯಲ್ಲಿ ಹಿಂದೂ ಬಾಂಧವರು ಭಾಗವಹಿಸುವ ನಿರೀಕ್ಷೆ ಇದೆ. ಕಾರ್ಯಕ್ರಮವನ್ನು ಶಿಸ್ತಿನಿಂದ ಹಾಗೂ ಸಂಭ್ರಮದ ವಾತಾವರಣದಲ್ಲಿ ನಡೆಸಲು ಸಮಿತಿ ಸದಸ್ಯರು ಸಜ್ಜಾಗಿದ್ದಾರೆ.

ಹೊಸನಗರ ತಾಲೂಕಿನ ಒಟ್ಟು 30 ಪಂಚಾಯಿತಿಗಳನ್ನು ಪ್ರತಿನಿಧಿಸುವಂತೆ ಆಯ್ದ 17 ವಿವಿಧ ಸ್ಥಳಗಳಲ್ಲಿ, ಜನವರಿ 22ರಿಂದ ಫೆಬ್ರವರಿ 8ರವರೆಗೆ ವಿಭಿನ್ನ ದಿನಗಳಲ್ಲಿ ಹಿಂದೂ ಸಂಗಮ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಈ ಕಾರ್ಯಕ್ರಮಗಳ ಮೂಲಕ ಹಿಂದೂ ಧರ್ಮ ಮತ್ತು ಸಂಸ್ಕೃತಿಗಳ ಸಂರಕ್ಷಣೆ, ಸ್ವಾವಲಂಬನೆ ಹಾಗೂ ಸಮಗ್ರ ಸಮಾಜ ವಿಕಾಸದ ಕುರಿತು ಜಾಗೃತಿ ಮೂಡಿಸುವುದು ಮುಖ್ಯ ಉದ್ದೇಶವಾಗಿದೆ.

ಜಾಗೃತ ಹಾಗೂ ಸಂಘಟಿತ ಹಿಂದೂ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕಟಿಬದ್ಧರಾಗಬೇಕು ಎಂಬ ಆಶಯದೊಂದಿಗೆ ಈ ಉತ್ಸವಗಳನ್ನು ಆಯೋಜಿಸಲಾಗಿದ್ದು, ಎಲ್ಲಾ ಹಿಂದೂ ಬಾಂಧವರು ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಭಾಗವಹಿಸಿ ಸಮಾಜ ಜಾಗೃತಿಯ ಈ ಮಹತ್ವದ ಕಾರ್ಯಕ್ರಮದಲ್ಲಿ ತಮ್ಮ ಪಾತ್ರವನ್ನು ಅರಿತುಕೊಳ್ಳಬೇಕು ಎಂದು ಆಯೋಜಕರು ಮನವಿ ಮಾಡಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ Hosanagara Taluk Advocates Association extends…

9 hours ago

ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ – ಆರೋಪಿ ಅರೆಸ್ಟ್!

ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ - ಆರೋಪಿ ಅರೆಸ್ಟ್! Sagar police arrested a man accused…

9 hours ago

ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ

ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ Free 31-day mobile phone repair training for…

9 hours ago

ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ

ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ Farmers and agricultural workers will hold a…

9 hours ago

ಸಾಗರ: ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ; ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನೆ

ಸಾಗರ: ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ; ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನೆ Farmers staged a massive protest…

18 hours ago

ಇಂಡಿಯಾ ಪೋಸ್ಟ್‌ನಲ್ಲಿ 25,000ಕ್ಕೂ ಹೆಚ್ಚು ಹುದ್ದೆ: 10ನೇ ತರಗತಿ ಪಾಸಾದವರಿಗೆ ಅವಕಾಶ, ಪರೀಕ್ಷೆ ಇಲ್ಲದೆ ನೇಮಕಾತಿ

ಇಂಡಿಯಾ ಪೋಸ್ಟ್‌ನಲ್ಲಿ 25,000ಕ್ಕೂ ಹೆಚ್ಚು ಹುದ್ದೆ: 10ನೇ ತರಗತಿ ಪಾಸಾದವರಿಗೆ ಅವಕಾಶ, ಪರೀಕ್ಷೆ ಇಲ್ಲದೆ ನೇಮಕಾತಿ India Post GDS…

18 hours ago