ರಿಪ್ಪನ್‌ಪೇಟೆ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಸುಂದರೇಶ್ ಕೆರೆಹಳ್ಳಿ , ಪ್ರಧಾನ ಕಾರ್ಯದರ್ಶಿಯಾಗಿ ಮಲ್ಲಿಕಾರ್ಜುನ್ ಜಿ ಡಿ ನೇಮಕ

Kerehalli Sundaresha has been appointed as the new President of Ripponpete Mahashakti Kendra, with GD Mallikarjun and Katte Arun as General Secretaries, following official orders issued by Hosanagara Mandal President N Satish.

ರಿಪ್ಪನ್‌ಪೇಟೆ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಸುಂದರೇಶ್ ಕೆರೆಹಳ್ಳಿ , ಪ್ರಧಾನ ಕಾರ್ಯದರ್ಶಿಯಾಗಿ ಮಲ್ಲಿಕಾರ್ಜುನ್ ಜಿ ಡಿ ನೇಮಕ

ರಿಪ್ಪನ್‌ಪೇಟೆ: ಪಟ್ಟಣದ ಮಹಾಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಕೆರೆಹಳ್ಳಿ ಸುಂದರೇಶ್ ಅವರನ್ನು ಹಾಗೂ ಪ್ರಧಾನ ಕಾರ್ಯದರ್ಶಿಗಳಾಗಿ ಜಿ.ಡಿ. ಮಲ್ಲಿಕಾರ್ಜುನ್ ಮತ್ತು ಕಟ್ಟೆ ಅರುಣ್ ಅವರನ್ನು ನೇಮಕಗೊಳಿಸಿ ಹೊಸನಗರ ಮಂಡಲ ಅಧ್ಯಕ್ಷ ಎನ್. ಸತೀಶ್ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಈ ಹಿಂದೆ ಕೆರೆಹಳ್ಳಿ ಹೋಬಳಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿದ್ದ ಎನ್. ಸತೀಶ್ ಅವರು ಹೊಸನಗರ ಮಂಡಲ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ರಿಪ್ಪನ್‌ಪೇಟೆ ಹೋಬಳಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಪಕ್ಷದ ಜಿಲ್ಲಾ ಸಮಿತಿಯ ಸೂಚನೆಯ ಮೇರೆಗೆ ಈ ನೇಮಕಾತಿ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಅಧ್ಯಕ್ಷರಾಗಿ ನೇಮಕಗೊಂಡ ಬಳಿಕ ಪಟ್ಟಣದ ಕುವೆಂಪು ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ನೂತನ ಅಧ್ಯಕ್ಷ ಸುಂದರೇಶ್ ಕೆರೆಹಳ್ಳಿ, ಪಕ್ಷದ ಸಿದ್ಧಾಂತಗಳಿಗೆ ಬದ್ಧವಾಗಿ ಹಿರಿಯರ ಮಾರ್ಗದರ್ಶನದಲ್ಲಿ ಪಕ್ಷ ಸೂಚಿಸುವ ಕೆಲಸಗಳನ್ನು ಚಾಚು ತಪ್ಪದೇ ಮಾಡುತ್ತೇವೆ. ಎಲ್ಲಾ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷದ ಬಲವರ್ಧನೆಗೆ ಶ್ರಮಿಸುತ್ತೇವೆ ಎಂದರು.

ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನದಲ್ಲಿ ವಿಫಲವಾಗಿದೆ. ನಮ್ಮ ಭಾಗದ ಅಭಿವೃದ್ಧಿ ವಿಚಾರದಲ್ಲಿ ಸರ್ಕಾರ ಸಂಪೂರ್ಣ ನಿರ್ಲಕ್ಷ್ಯ ತೋರಿದೆ ಎಂದು ಆರೋಪಿಸಿದ ಅವರು, ರಿಪ್ಪನ್‌ಪೇಟೆ ಸಮುದಾಯ ಆಸ್ಪತ್ರೆ ಬಹುಕಾಲದ ಬೇಡಿಕೆಯಾಗಿದ್ದು, ನಮ್ಮ ಸರ್ಕಾರದ ಅವಧಿಯಲ್ಲಿ ಅದರ ನಿರ್ಮಾಣಕ್ಕೆ ಶ್ರಮಿಸಲಾಗಿತ್ತು. ಆದರೆ ಈಗ ಆ ಯೋಜನೆ ನೆನೆಗುದಿಗೆ ಬಿದ್ದಿದೆ ಎಂದು ಬೇಸರ ವ್ಯಕ್ತಪಡಿಸಿದರು. ಜೊತೆಗೆ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ ಏರಿಸಬೇಕೆಂದು ಆಗ್ರಹಿಸಿದರು.

ಮುಂದಿನ ದಿನಗಳಲ್ಲಿ ಪಕ್ಷವನ್ನು ಇನ್ನಷ್ಟು ಸಂಘಟಿಸಿ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟ ನಡೆಸಿ, ಈ ಭಾಗದ ಅಭಿವೃದ್ಧಿಗಾಗಿ ಸರ್ಕಾರದ ವಿರುದ್ಧ ಧ್ವನಿ ಎತ್ತಲಾಗುವುದು ಎಂದು ಅವರು ಹೇಳಿದರು.

ನಂತರ ಮಾತನಾಡಿದ ಮಹಾಶಕ್ತಿ ಕೇಂದ್ರದ ನೂತನ ಪ್ರಧಾನ ಕಾರ್ಯದರ್ಶಿ ಜಿ.ಡಿ. ಮಲ್ಲಿಕಾರ್ಜುನ್, ಪಕ್ಷದ ಹಿರಿಯರು ನಮ್ಮ ಮೇಲೆ ವಿಶ್ವಾಸವಿಟ್ಟು ಜವಾಬ್ದಾರಿ ನೀಡಿದ್ದಾರೆ. ಪಕ್ಷದ ಆಶಯ ಹಾಗೂ ಸೂಚನೆಯಂತೆ ನಿಷ್ಠೆಯಿಂದ ಕೆಲಸ ಮಾಡುತ್ತೇವೆ ಎಂದರು.

ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರಾದ ಬೆಳ್ಳೂರು ತಿಮ್ಮಪ್ಪ, ಸುಧೀಂದ್ರ ಪೂಜಾರಿ, ರಾಜೇಶ್ ಬುಕ್ಕಿವರೆ,  ಕುಮಾರ್ ಕಳಸೆ , ಮಹೇಶ್, ವೆಂಕಟರಮಣ ಚಿಕ್ಕಜೀನಿ, ಸುಧೀರ್ ಪಿ,ಮುರುಳಿ ಕೆರೆಹಳ್ಳಿ, ಕಗ್ಗಲಿ ಲಿಂಗಪ್ಪ, ಗಣೇಶ್, ನಾರಾಯಣ್ , ಪದ್ಮಾ ಸುರೇಶ್, ನಾಗರತ್ನ ದೇವರಾಜ್,ರೇಖಾ ರವಿ, ದಾನಮ್ಮ, ಮಂಜುಳಾ ಕೆತಾರ್ಜಿ,ವಿಮಲಮ್ಮ ಹಾಗೂ ಇನ್ನಿತರರು ಇದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

4 hours ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

5 hours ago

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

22 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

23 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

1 day ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago