w
Headlines
Home » ಸಾಲಭಾಧೆಗೆ ಬೇಸತ್ತು ರೈತ ಆತ್ಮಹತ್ಯೆ

ಸಾಲಭಾಧೆಗೆ ಬೇಸತ್ತು ರೈತ ಆತ್ಮಹತ್ಯೆ

IMG 20260213

A 56-year-old farmer died by suicide in Ballibailu village near Anandapura, Sagara taluk, reportedly due to mounting loan pressure from bank and microfinance borrowings. Police have registered a case.

ಸಾಗರ ತಾಲೂಕಿನ ಆನಂದಪುರ ಸಮೀಪದ ಬಳ್ಳಿಬೈಲು ಗ್ರಾಮದಲ್ಲಿ ಗೋಪಾಲ (56) ಎಂಬವರು ಮಾವಿನ ಗಿಡಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ನಡೆದಿದೆ.

ರೈತ ಗೋಪಾಲ ರವರು ಸುಮಾರು ಎರಡು ವರ್ಷಗಳ ಹಿಂದೆ State Bank of india ದಲ್ಲು ರೂ.4 ಲಕ್ಷ ಕೃಷಿ ಸಾಲ ಪಡೆದು ಅಡಿಕೆ ಸಸಿಗಳನ್ನು ನೆಟ್ಟಿದ್ದರು. ಇದರ ಜೊತೆಗೆ ಮೈಕ್ರೋ ಫೈನಾನ್ಸ್ ಸಂಸ್ಥೆಯಿಂದ ರೂ.50,000 ಹಾಗೂ ಇನ್ನಿತರ ಸಣ್ಣಪುಟ್ಟ ಕೈ ಸಾಲಗಳನ್ನು ಕೂಡ ಮಾಡಿಕೊಂಡಿದ್ದರು. ಸಾಲ ತೀರಿಸುವ ಒತ್ತಡದಿಂದಾಗಿ ಅವರು ಮನಸ್ಸಿಗೆ ತೀವ್ರ ಬೇಸರಗೊಂಡಿದ್ದರು ಎಂದು ತಿಳಿದುಬಂದಿದೆ.

ಗುರುವಾರ ಸಂಜೆ ಗೋಪಾಲರು ಕಾಣೆಯಾಗಿದ್ದರಿಂದ ಮನೆಯವರು ಹಾಗೂ ಗ್ರಾಮಸ್ಥರು ಹುಡುಕಾಟ ನಡೆಸಿದಾಗ, ಮನೆಯ ಹಿತ್ತಲಿನ ಮಾವಿನ ಗಿಡಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ.

ಈ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.