POSTMANNEWS

ನೈಜ ಸುದ್ದಿ ನೇರ ಬಿತ್ತರ..

ಬಸ್–ಕಾರ್ ಮುಖಾಮುಖಿ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು, ಮತ್ತೊಬ್ಬ ಗಂಭೀರ

A tragic road accident claimed one life on the spot, while another person was critically injured. The collision occurred between a private bus traveling from Thirthahalli to Shivamogga and an Alto car coming from the opposite direction. The impact severely damaged both vehicles, and the injured was rushed to a Shivamogga hospital. Police have registered a case and are investigating the incident.

ಶಿವಮೊಗ್ಗ: ಸಕ್ರೇಬೈಲ್ ಸಮೀಪ ಭಾನುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬನ ಸ್ಥಿತಿ ಗಂಭೀರವಾಗಿರುವುದಾಗಿ ವರದಿಯಾಗಿದೆ.

ತೀರ್ಥಹಳ್ಳಿಯಿಂದ ಶಿವಮೊಗ್ಗದ ಕಡೆಗೆ ಸಾಗುತ್ತಿದ್ದ ಖಾಸಗಿ ಬಸ್ ಹಾಗೂ ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ಬರುತ್ತಿದ್ದ ಆಲ್ಟೊ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೊಬ್ಬ ಗಂಭೀರವಾಗಿ ಗಾಯಗೊಂಡು ಶಿವಮೊಗ್ಗದ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಅಪಘಾತದಲ್ಲಿ ಬಸ್ಸಿನ ಹಾಗೂ ಕಾರಿನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದ್ದು, ಕಾರು ಬಲಭಾಗಕ್ಕೆ ಚಲಿಸಿ ಬಸ್ಸಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಘಟನೆ ಕುರಿತು ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

About The Author

Exit mobile version