ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ-1 ಆರಂಭ | 7.10 ಲಕ್ಷ ವಿದ್ಯಾರ್ಥಿಗಳು ನೋಂದಣಿ

Second PUC Exam-1 begins from tomorrow across Karnataka with over 7.10 lakh students registered. Authorities ensure smooth and fair conduct of examinations statewide.

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ-1 ಆರಂಭ | 7.10 ಲಕ್ಷ ವಿದ್ಯಾರ್ಥಿಗಳು ನೋಂದಣಿ

ನಿಗದಿತ ವೇಳಾಪಟ್ಟಿಯಂತೆ ಫೆ.28ರಿಂದ ರಾಜ್ಯಾದ್ಯಂತ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 (2nd puc exam- 1) ಆರಂಭವಾಗಲಿದ್ದು, ಈ ಬಾರಿ 7,10,363 ವಿದ್ಯಾರ್ಥಿಗಳು (Students) ನೋಂದಾಯಿಸಿಕೊಂಡಿದ್ದಾರೆ. ಮಾ.17ರವರೆಗೆ ನಡೆಯುವ ಪರೀಕ್ಷೆಗೆ ರಾಜ್ಯಾದ್ಯಂತ 1,217 ಕೇಂದ್ರಗಳನ್ನು ಗುರುತಿಸಲಾಗಿದ್ದು ಯಾವುದೇ ಅಕ್ರಮ, ಗೊಂದಲಗಳಿಗೆ ಅವಕಾಶವಾಗದೆ ಸುಸೂತ್ರವಾಗಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಹಾಗೂ ಭದ್ರತಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ.

ಪರೀಕ್ಷೆಗೆ ನೋಂದಾಯಿಸಿರುವ 7.10 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ 6,46,801 ತರಗತಿ ವಿದ್ಯಾರ್ಥಿಗಳು (ಫ್ರೆಷರ್ಸ್‌), 50,540 ಪುನರಾವರ್ತಿತ, 13,022 ಖಾಸಗಿ ಅಭ್ಯರ್ಥಿಗಳಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಅತಿ ಹೆಚ್ಚು 2,92,645 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 2,11,174, ಕಲಾ ವಿಭಾಗದಲ್ಲಿ 1,42,982 ಮಂದಿ ನೋಂದಾಯಿಸಿದ್ದಾರೆ ಎಂದು ಮಂಡಳಿ ತಿಳಿಸಿದೆ.

ಎಲ್ಲಾ ಪರೀಕ್ಷಾ ಕೊಠಡಿಗಳಲ್ಲೂ ಸಿಸಿ ಕ್ಯಾಮರಾ ಕಣ್ಗಾವಲು ಮತ್ತು ಜಿಲ್ಲಾ ಕೇಂದ್ರದಲ್ಲಿ ಯಾವುದೇ ಕೇಂದ್ರದ ಯಾವುದೇ ಕೊಠಡಿ ವ್ಯವಸ್ಥೆಯನ್ನು ವೀಕ್ಷಿಸಬಹುದಾದ ವೆಬ್‌ಕಾಸ್ಟಿಂಗ್‌ ವ್ಯವಸ್ಥೆ ಈ ಬಾರಿಯೂ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳು, ಜಿಪಂ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳು, ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಸೇರಿ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಜೊತೆ ಸಭೆ ನಡೆಸಿ ಅಗತ್ಯ ಸೂಚನೆಗಳನ್ನು ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ವದಂತಿ ಹಬ್ಬಿಸಿದರೆ ತಕ್ಷಣ ದೂರು:

ಪ್ರಶ್ನೆಪತ್ರಿಕೆ ಸೋರಿಕೆ ವದಂತಿ ಹಬ್ಬಿಸುವುದು ಅಥವಾ ನಕಲಿ ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವಂಥವರ ಮೇಲೆ ನಿಗಾ ಇರಿಸಲಾಗುತ್ತದೆ. ಜೊತೆಗೆ ಇಂಥ ಅಕ್ರಮ ಎಸಗಿದವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡುವವರ ಮೇಲೆ ತಕ್ಷಣ ದೂರು ದಾಖಲಿಸಲು ರಾಜ್ಯಮಟ್ಟದಲ್ಲಿ ನೋಡಲ್ ಅಧಿಕಾರಿಯೊಬ್ಬರನ್ನು ನೇಮಿಸುತ್ತಿದ್ದೇವೆ. ಜೊತೆಗೆ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲೂ ತಕ್ಷಣ ದೂರು ನೀಡಲು ಸೂಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಯಾವುದೇ ಅಕ್ರಮಗಳಿಗೆ ಅವಕಾಶವಿಲ್ಲದೆ, ಅತ್ಯಂತ ಪಾರದರ್ಶಕ ಹಾಗೂ ಸುಸೂತ್ರವಾಗಿ ನಡೆಸಲು ಎಲ್ಲ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರು, ಪೋಷಕರು ಯಾವುದೇ ವದಂತಿಗಳಿಗೆ ಕಿವಿಗೊಡದೆ ತಮ್ಮ ಮಕ್ಕಳನ್ನು ಏಕಾಗ್ರತೆಯಿಂದ ಪರೀಕ್ಷಾ ಸಿದ್ಧತೆಗೆ ಪ್ರೋತ್ಸಾಹಿಸಬೇಕು. ವಿದ್ಯಾರ್ಥಿಗಳು ಸುಳ್ಳು ವಿಚಾರಗಳಿಗೆ ಒಳಗಾಗಿ ತಪ್ಪು ದಾರಿ ಹಿಡಿದು ಮೋಸ ಹೋಗಬಾರದು. ಸುಳ್ಳು ಸುದ್ದಿ ಹರಡುವವರ ವಿರುದ್ಧ ಅಗತ್ಯ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷ ಪ್ರಕಾಶ್‌ ಜಿ.ಟಿ.ನಿಟ್ಟಾಲಿ ತಿಳಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ

ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ PSI Shankar Gowda Patil has…

6 hours ago

ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ

ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ Ripponpete Government Model Boys…

6 hours ago

ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ

ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ A 7.5-foot-long, 10 kg giant python…

8 hours ago

ಈದ್ ಮಿಲಾದ್ – ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್ ವಾರ್ನಿಂಗ್

ಈದ್ ಮಿಲಾದ್ - ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್…

9 hours ago

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು Sagar Tahsildar Dr. Prathibha…

16 hours ago

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು Thieves broke…

16 hours ago