Two notorious accused, including the prime suspect in Shivamogga scrap trader Amjad murder case, have been shifted from Shivamogga Central Prison to Belagavi Hindalga and Bengaluru Parappana Agrahara prisons citing security reasons.
ಅಮ್ಜದ್ ಕೊಲೆ ಕೇಸ್: ಶಿವಮೊಗ್ಗ ಜೈಲಿನಿಂದ ರೌಡಿಗಳಿಬ್ಬರ ಶಿಫ್ಟ್ – ಫೌಝಾನ್ ಬೆಳಗಾವಿಗೆ, ಅಬಿದ್ ಬೆಂಗಳೂರಿಗೆ
ಶಿವಮೊಗ್ಗ: ನಗರದ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳಾಗಿದ್ದ ಸ್ಕ್ರ್ಯಾಪ್ ವ್ಯಾಪಾರಿ ಅಮ್ಜದ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಒಳಗೊಂಡಂತೆ ಇಬ್ಬರು ರೌಡಿಗಳನ್ನು ಬೇರೆ ಬೇರೆ ಜೈಲುಗಳಿಗೆ ಸ್ಥಳಾಂತರಿಸಲಾಗಿದೆ.
ಕಳೆದ ಅಕ್ಟೋಬರ್ 3ರಂದು ಶಿವಮೊಗ್ಗದಲ್ಲಿ ಸ್ಕ್ರ್ಯಾಪ್ ವ್ಯಾಪಾರಿ ಅಮ್ಜದ್ ಮೇಲೆ ಯುವಕರ ಗುಂಪೊಂದು ಹಲ್ಲೆ ನಡೆಸಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಅಮ್ಜದ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಪ್ರಕರಣದ ಬಳಿಕ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಒಟ್ಟು ಆರು ಮಂದಿ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.
ಈ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಫೌಝಾನ್‌ನನ್ನು ಇಂದು ಶಿವಮೊಗ್ಗ ಕೇಂದ್ರ ಕಾರಾಗೃಹದಿಂದ ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ.
ಇದಕ್ಕೂ ಜೊತೆಗೆ, ಶಿವಮೊಗ್ಗದ ಕುಖ್ಯಾತ ರೌಡಿಶೀಟರ್ ಕಡೆಕಲ್ ಅಬಿದ್‌ನನ್ನೂ ಸಹ ಬೇರೆ ಜೈಲಿಗೆ ರವಾನಿಸಲಾಗಿದೆ. ಅಬಿದ್ ವಿರುದ್ಧ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ 20ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದು, ಆತನನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ.
ಭದ್ರತಾ ಕಾರಣಗಳು ಹಾಗೂ ತನಿಖೆಯ ಸುಗಮತೆಗೆ ಈ ಸ್ಥಳಾಂತರ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…
ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…
ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…
ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…
ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…
ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…