ಕಿಯಾ ಶೋರೂಂ ಎದುರು ಸರಣಿ ಅಪಘಾತ: ಆಟೋ, ದ್ವಿಚಕ್ರ ವಾಹನ ಜಖಂ – ಹಲವರಿಗೆ ಗಾಯ

A chain accident occurred on the Shivamogga bypass road in front of a Kia showroom, involving a car, auto-rickshaw and a two-wheeler. Several people were injured and the auto driver sustained a leg fracture. Police have registered an FIR.

ಶಿವಮೊಗ್ಗ: ನಗರದ ಬೈಪಾಸ್ ರಸ್ತೆಯ ಕಿಯಾ ಶೋರೂಂ ಮುಂಭಾಗದಲ್ಲಿ ನಿನ್ನೆ ಸಂಜೆ 4.30ರ ಸುಮಾರಿಗೆ ಸಂಭವಿಸಿದ ಸರಣಿ ಅಪಘಾತದಲ್ಲಿ ಹಲವರಿಗೆ ಗಾಯಗಳಾಗಿದ್ದು, ಆಟೋ ಚಾಲಕನ ಕಾಲು ಮುರಿದ ಘಟನೆ ನಡೆದಿದೆ.

ಹಿಂದಿನಿಂದ ಬಂದ ಕಾರೊಂದು ಮುಂದೆ ಸಾಗುತ್ತಿದ್ದ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ, ಆ ಆಟೋ ಮುಂದೆ ಚಲಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಪಲ್ಟಿಯಾಗಿದ್ದು, ಆಟೋ ಸಂಪೂರ್ಣವಾಗಿ ಜಖಂಗೊಂಡಿದೆ. ದ್ವಿಚಕ್ರ ವಾಹನದ ಹಿಂಬದಿ ಸವಾರರಿಗೆ ತಲೆ ಹಾಗೂ ಮುಖಕ್ಕೆ ಗಾಯಗಳಾಗಿವೆ.

ಮೆಗ್ಗಾನ್ ಆಸ್ಪತ್ರೆಯಲ್ಲಿ ಹೌಸ್‌ಕೀಪಿಂಗ್ ಕೆಲಸ ಮಾಡುತ್ತಿದ್ದ ಲಕ್ಷ್ಮೀಬಾಯಿ ಅವರು ತಮ್ಮ ಪತಿ ಕುಮಾರ ನಾಯ್ಕ ಅವರೊಂದಿಗೆ ಮಲವಗೊಪ್ಪದ ಇಂದಿರಾ ಕಾಲೋನಿಗೆ ಬೈಪಾಸ್ ಮೂಲಕ ತೆರಳುತ್ತಿದ್ದಾಗ ಕಿಯಾ ಶೋರೂಂ ಎದುರು ಈ ಅಪಘಾತ ಸಂಭವಿಸಿದೆ. ದ್ವಿಚಕ್ರ ವಾಹನದಲ್ಲಿದ್ದ ಲಕ್ಷ್ಮೀಬಾಯಿ ಹಾಗೂ ಕಾರು ಚಾಲಕ ಶಂಕರ್ ಅವರನ್ನು ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿವರಗಳಂತೆ, ಕೆಎ 14 ಎ 9198 ಕ್ರಮ ಸಂಖ್ಯೆಯ ಕಾರು, ಮುಂದೆ ಸಾಗುತ್ತಿದ್ದ ಕೆಎ 14 ಸಿ 4382 ಕ್ರಮ ಸಂಖ್ಯೆಯ ಆಟೋಗೆ ಡಿಕ್ಕಿ ಹೊಡೆದಿದ್ದು, ಆ ಆಟೋ ಮುಂದೆ ಸಾಗುತ್ತಿದ್ದ ಕೆಎ 14 ಇಯು 6592 ಕ್ರಮ ಸಂಖ್ಯೆಯ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಈ ಸಂಬಂಧ ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕಾರು ಚಾಲಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಅತಿ ವೇಗದ ಬೈಕ್ ಚಾಲನೆಯಿಂದ ಪಾದಚಾರಿ ಸಾವು : ಬೈಕ್ ಸವಾರನಿಗೆ 1 ವರ್ಷಕ್ಕೂ ಹೆಚ್ಚು ಜೈಲು ಶಿಕ್ಷೆ

ಅತಿ ವೇಗದ ಬೈಕ್ ಚಾಲನೆಯಿಂದ ಪಾದಚಾರಿ ಸಾವು : ಬೈಕ್ ಸವಾರನಿಗೆ 1 ವರ್ಷಕ್ಕೂ ಹೆಚ್ಚು ಜೈಲು ಶಿಕ್ಷೆ Bhadravati…

5 hours ago

ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆಗೆ ಸಾವಿರಾರು ಅಭ್ಯರ್ಥಿಗಳು –  ವಸತಿ ಕೊರತೆಯಿಂದ ಬಸ್ ನಿಲ್ದಾಣದಲ್ಲೇ ವಿಶ್ರಾಂತಿ

ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆಗೆ ಸಾವಿರಾರು ಅಭ್ಯರ್ಥಿಗಳು –  ವಸತಿ ಕೊರತೆಯಿಂದ ಬಸ್ ನಿಲ್ದಾಣದಲ್ಲೇ ವಿಶ್ರಾಂತಿ KSRP Police Constable written…

5 hours ago

ಜಿಂಕೆ ಮಾಂಸ ದಾಸ್ತಾನು ಆರೋಪ: ಇಬ್ಬರ ಬಂಧನ

ಜಿಂಕೆ ಮಾಂಸ ದಾಸ್ತಾನು ಆರೋಪ: ಇಬ್ಬರ ಬಂಧನ Forest officials in Shivamogga taluk arrested two persons for…

5 hours ago

ಕಸ್ತೂರಿರಂಗನ್ ವರದಿ ಸಂವಾದ: ಮಲೆನಾಡಿನ ರೈತರಿಗೆ ಸಿಎಂ ಡಿ.ಕೆ. ಶಿವಕುಮಾರ್ ನೀಡಿದ ಭರವಸೆಗಳೇನು?

ಮಲೆನಾಡಿನ ರೈತರ ಜಮೀನಿಗೆ ಕೈಹಾಕಬೇಡಿ: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ ಕಸ್ತೂರಿರಂಗನ್ ವರದಿ ಸಂವಾದ: ಮಲೆನಾಡಿನ ರೈತರಿಗೆ ಸಿಎಂ ಡಿ.ಕೆ.…

1 day ago

ವಿಶ್ವಕರ್ಮ ಜಯಂತಿ ಕೌಶಲ, ಶ್ರಮ ಹಾಗೂ ಸೃಜನಶೀಲತೆಯ ಪ್ರತೀಕ: ಗಣೇಶ್ ಆಚಾರ್ಯ

ವಿಶ್ವಕರ್ಮ ಜಯಂತಿ ಕೌಶಲ, ಶ್ರಮ ಹಾಗೂ ಸೃಜನಶೀಲತೆಯ ಪ್ರತೀಕ: ಗಣೇಶ್ ಆಚಾರ್ಯ Vishwakarma Jayanti was celebrated by the…

1 day ago

ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ

ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ A fire caused by a…

2 days ago