Skip to content
August 16, 2026
  • ಕೆಂಚನಾಲದಲ್ಲಿ ಮನೆ ಮೇಲೆ ಉರುಳಿದ ತೆಂಗಿನ ಮರ : ತಪ್ಪಿದ ಭಾರಿ ಅನಾಹುತ – ಸಂತ್ರಸ್ತ ಕುಟುಂಬಕ್ಕೆ ಶಾಸಕರ ಸೂಚನೆಯಂತೆ ಪರಿಹಾರ
  • ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ
  • ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ಆರೋಪ – ಇಬ್ಬರ ಬಂಧನ
  • ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

POSTMANNEWS

ನೈಜ ಸುದ್ದಿ ನೇರ ಬಿತ್ತರ..

subscribe
Random News
  • Categories
    • ಅಂತರಾಷ್ಟ್ರೀಯ ಸುದ್ದಿ:
    • ಉದ್ಯೋಗ ಸುದ್ದಿ:
    • ಕ್ರೈಂ ಸುದ್ದಿ:
    • ಜಾಹಿರಾತು:
    • ಜಿಲ್ಲಾ ಸುದ್ದಿ:
    • ಜಿಲ್ಲಾಸುದ್ದಿ:
    • ನಿಧನ ವಾರ್ತೆ:
    • ರಫ಼ಿ ರಿಪ್ಪನ್ ಪೇಟೆ:
    • ರಾಜಕೀಯ ಸುದ್ದಿ:
    • ರಾಜಕೀಯ ಸುದ್ದಿಗಳು
    • ರಾಜ್ಯ ಸುದ್ದಿ:
    • ರಾಷ್ಟ್ರೀಯ ಸುದ್ದಿ:
    • ರಿಪ್ಪನ್ ಪೇಟೆ:
    • ವೈರಲ್ ಸುದ್ದಿ:
    • ಸಿನಿಮಾ ಜಗತ್ತು:
      • ಸ್ಥಳೀಯ ಸುದ್ದಿ:
  • Privacy Policy
  • Disclaimer
  • About
  • contact Us
follow in facebook
Headlines
  • ಕೆಂಚನಾಲದಲ್ಲಿ ಮನೆ ಮೇಲೆ ಉರುಳಿದ ತೆಂಗಿನ ಮರ : ತಪ್ಪಿದ ಭಾರಿ ಅನಾಹುತ – ಸಂತ್ರಸ್ತ ಕುಟುಂಬಕ್ಕೆ ಶಾಸಕರ ಸೂಚನೆಯಂತೆ ಪರಿಹಾರ

    9 hours ago
  • ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ

    13 hours ago12 hours ago
  • ಪೊಲೀಸ್ ಅಧಿಕಾರಿಗಳೆಂದು ನಂಬಿಸಿ ಮಹಿಳೆಯಿಂದ ಚಿನ್ನದ ಸರ ದೋಚಿದ್ದ ಆರೋಪ – ಇಬ್ಬರ ಬಂಧನ

    15 hours ago
  • ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

    18 hours ago
  • ರಿಪ್ಪನ್ ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಮಳೆಯ ನಡುವೆಯೂ ಶಾಲಾ ಮಕ್ಕಳ ಪಥಸಂಚಲನ

    18 hours ago
  • ಗುಟ್ಕಾ- ಪಾನ್‌ ಮಸಾಲಾ ಬ್ಯಾನ್‌ಗೆ ಬಿಗ್‌ ಟ್ವಿಸ್ಟ್‌: ಎರಡೇ ದಿನಕ್ಕೆ ಆದೇಶ ವಾಪಸ್!

    2 days ago
  • Home
  • 2026
  • February
  • ಕಮಿಷನ್ ಆಸೆಗೆ ಬ್ಯಾಂಕ್ ಖಾತೆ ಮಾರಾಟ: ಶಿವಮೊಗ್ಗದಲ್ಲಿ ₹55 ಕೋಟಿ ಸೈಬರ್ ವಂಚನೆ ಜಾಲ ಪತ್ತೆ , ಚಾಲಕನ ಹಿಂದೆ ಕೋಟ್ಯಾಂತರ ರೂಪಾಯಿಗಳ ಸೈಬರ್ ಸಾಮ್ರಾಜ್ಯ!
  • ಕ್ರೈಂ ಸುದ್ದಿ:

ಕಮಿಷನ್ ಆಸೆಗೆ ಬ್ಯಾಂಕ್ ಖಾತೆ ಮಾರಾಟ: ಶಿವಮೊಗ್ಗದಲ್ಲಿ ₹55 ಕೋಟಿ ಸೈಬರ್ ವಂಚನೆ ಜಾಲ ಪತ್ತೆ , ಚಾಲಕನ ಹಿಂದೆ ಕೋಟ್ಯಾಂತರ ರೂಪಾಯಿಗಳ ಸೈಬರ್ ಸಾಮ್ರಾಜ್ಯ!

ರಫ಼ಿ ರಿಪ್ಪನ್ ಪೇಟೆ6 months ago01 mins

Shivamogga cyber crime police bust a massive ₹55 crore cyber fraud involving rented bank accounts. Driver arrested in commission-based scam.

ಶಿವಮೊಗ್ಗ:ಹಣದ ಆಮಿಷವೊಡ್ಡಿ ಸಾರ್ವಜನಿಕರ ಬ್ಯಾಂಕ್ ಖಾತೆಗಳ ಸಂಪೂರ್ಣ ವಿವರಗಳನ್ನು ಸಂಗ್ರಹಿಸಿ ಸೈಬರ್ ವಂಚಕರಿಗೆ ಒದಗಿಸುತ್ತಿದ್ದ ಭಾರೀ ಜಾಲವೊಂದನ್ನು ಶಿವಮೊಗ್ಗದ ಸೈಬರ್ ಅಪರಾಧ ಠಾಣೆ ಪೊಲೀಸರು ಭೇದಿಸಿದ್ದಾರೆ.

ಈ ಪ್ರಕರಣದಲ್ಲಿ ಶಿವಮೊಗ್ಗದ ತುಂಗಾ ನಗರ ನಿವಾಸಿ ಕೆ. ಶರತ್ ಕುಮಾರ್ ಅಲಿಯಾಸ್ ಗುಂಡ ಎಂಬಾತನನ್ನು ಬಂಧಿಸಲಾಗಿದೆ.

ಚಾಲಕ ವೃತ್ತಿ ಮಾಡುತ್ತಿದ್ದ ಶರತ್ ಕುಮಾರ್, ತನ್ನ ಸ್ನೇಹಿತ ಅಮಿತ್ (ಟೀ ಅಂಗಡಿ ಮಾಲೀಕ) ಸೇರಿದಂತೆ ಹಲವರನ್ನು ಕಮಿಷನ್ ಆಮಿಷಕ್ಕೆ ಒಳಪಡಿಸಿ ಅವರ ಬ್ಯಾಂಕ್ ಪಾಸ್‌ಬುಕ್, ಎಟಿಎಂ ಕಾರ್ಡ್, ಚೆಕ್ ಬುಕ್ ಹಾಗೂ ಮೊಬೈಲ್ ಸಂಖ್ಯೆಗಳನ್ನೂ ಪಡೆದುಕೊಳ್ಳುತ್ತಿದ್ದ. 15 ದಿನಕ್ಕೊಮ್ಮೆ ಕಮಿಷನ್ ನೀಡುವುದಾಗಿ ನಂಬಿಸಿ ಖಾತೆಗಳನ್ನು ಬಳಸಿದ್ದಾನೆ ಎನ್ನಲಾಗಿದೆ.

ಸ್ವಲ್ಪ ಸಮಯದ ಬಳಿಕ ಅಮಿತ್‌ನ ಬ್ಯಾಂಕ್ ಖಾತೆ ಫ್ರೀಜ್ ಆದ ಹಿನ್ನೆಲೆಯಲ್ಲಿ ಅನುಮಾನಗೊಂಡು ಬ್ಯಾಂಕ್‌ಗೆ ವಿಚಾರಿಸಿದಾಗ, ಆ ಖಾತೆ ವಿರುದ್ಧವೇ 51 ಸೈಬರ್ ಕ್ರೈಂ ಪ್ರಕರಣಗಳು ದಾಖಲಾಗಿರುವುದು ಬೆಳಕಿಗೆ ಬಂದಿತ್ತು. ಬಳಿಕ ಅಮಿತ್ ನೀಡಿದ ದೂರಿನ ಮೇರೆಗೆ ತನಿಖೆ ಆರಂಭಗೊಂಡಿತು.

96ಕ್ಕೂ ಹೆಚ್ಚು ಪ್ರಕರಣ, ₹55.43 ಕೋಟಿ ವಂಚನೆ

ಪೊಲೀಸರು ಆರೋಪಿ ಶರತ್ ಕುಮಾರ್‌ನಿಂದ 18 ಬ್ಯಾಂಕ್ ಪಾಸ್‌ಬುಕ್‌ಗಳು, 25 ಎಟಿಎಂ ಕಾರ್ಡ್‌ಗಳು, 7 ಚೆಕ್ ಬುಕ್‌ಗಳು, 2 ಮೊಬೈಲ್ ಫೋನ್‌ಗಳು ಹಾಗೂ 2 ಕ್ಯೂಆರ್ ಕೋಡ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಈತನ ಬಳಿ ಪತ್ತೆಯಾದ 19 ಬಾಡಿಗೆ ಬ್ಯಾಂಕ್ ಖಾತೆಗಳ ವಿರುದ್ಧ ದೇಶಾದ್ಯಂತ 96ಕ್ಕೂ ಹೆಚ್ಚು ವಂಚನೆ ಪ್ರಕರಣಗಳು ದಾಖಲಾಗಿವೆ.

ಈ ಖಾತೆಗಳ ಮೂಲಕ ಸಾರ್ವಜನಿಕರಿಗೆ ಒಟ್ಟು ₹55,43,56,248 ಮೊತ್ತದ ವಂಚನೆ ನಡೆದಿದ್ದು, ಇದರಲ್ಲಿ ₹11,48,42,898 ಹಣ ವರ್ಗಾವಣೆಯಾದ ದಾಖಲೆಗಳು ಲಭ್ಯವಾಗಿವೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್ ಮಾರ್ಗದರ್ಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧಿಕಾರಿಗಳು ಕಾರ್ಯಪ್ಪ, ರಮೇಶ್, ಸೈಬರ್ ಕ್ರೈಂ ಡಿವೈಎಸ್‌ಪಿ ಕೃಷ್ಣಮೂರ್ತಿ ಹಾಗೂ ಇನ್ಸ್‌ಪೆಕ್ಟರ್ ಮಂಜುನಾಥ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

ಒಬ್ಬನೇ ಅಲ್ಲ, ದೇಶವ್ಯಾಪಿ ಜಾಲ

ಸಾರ್ವಜನಿಕರ ಬ್ಯಾಂಕ್ ಖಾತೆಗಳನ್ನು ಸೈಬರ್ ವಂಚಕರಿಗೆ ಒದಗಿಸುವ ಜಾಲ ದೇಶಾದ್ಯಂತ ವ್ಯಾಪಕವಾಗಿದೆ. ರಾಜ್ಯದ ಸೈಬರ್ ಕಮಾಂಡ್ ಘಟಕ ಈಗಾಗಲೇ 14 ಮಂದಿಯನ್ನು ಬಂಧಿಸಿದ್ದು, ನಕಲಿ ಹಾಗೂ ಬಾಡಿಗೆ ಖಾತೆಗಳನ್ನು ಸೃಷ್ಟಿಸುವವರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ. ಬ್ಯಾಂಕ್ ಅಧಿಕಾರಿಗಳ ಪಾಲ್ಗೊಳ್ಳುವಿಕೆ ಪತ್ತೆಯಾದರೆ ಅವರ ಮೇಲೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಡಿಜಿಪಿ ಪ್ರಣವ್ ಮೊಹಂತಿ ಎಚ್ಚರಿಸಿದ್ದಾರೆ.

2021ರಿಂದ ನಡೆದ ತನಿಖೆಯಲ್ಲಿ ಸುಮಾರು 48,000ಕ್ಕೂ ಹೆಚ್ಚು ಬಾಡಿಗೆ ಬ್ಯಾಂಕ್ ಖಾತೆಗಳು ಅಕ್ರಮ ಚಟುವಟಿಕೆಗೆ ಬಳಸಿರುವುದು ಪತ್ತೆಯಾಗಿದೆ. ಈ ಖಾತೆಗಳ ಮೂಲಕ ಅಂದಾಜು ₹100 ಕೋಟಿ ರೂ.ಗೂ ಅಧಿಕ ಹಣಕಾಸು ವಹಿವಾಟು ನಡೆದಿರುವ ಶಂಕೆ ವ್ಯಕ್ತವಾಗಿದೆ. ಒಂದು ಖಾತೆ ಒದಗಿಸಿದಕ್ಕೆ ₹10,000 ರಿಂದ ₹20,000 ವರೆಗೆ ಹಣ ಪಡೆಯಲಾಗುತ್ತಿದ್ದು, ಪ್ರತಿ ₹1 ಲಕ್ಷ ವರ್ಗಾವಣೆಗೆ ₹3,000 ರಿಂದ ₹5,000 ವರೆಗೆ ಕಮಿಷನ್ ಸಿಗುತ್ತಿತ್ತು. ಕೆಲವರು ಇದನ್ನೇ ವೃತ್ತಿಯನ್ನಾಗಿ ಮಾಡಿಕೊಂಡು ವ್ಯವಸ್ಥಿತ ದಂಧೆ ನಡೆಸುತ್ತಿರುವುದು ತನಿಖೆಯಿಂದ ಬಹಿರಂಗವಾಗಿದೆ.

About The Author

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.

ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”

ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.

ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.

ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.

– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

See author's posts

Tagged: bank account scam commission scam cyber crime Karnataka cyber fraud arrest cyber police action financial fraud mule accounts online scam India Shivamogga cyber fraud Shivamogga News

Post navigation

Previous: ಮಾರಣಾಂತಿಕ ಹಲ್ಲೆಯ ನಡುವೆಯೂ ಧೈರ್ಯ ತೋರಿದ ಪೊಲೀಸರು: ರೌಡಿ ಡಿಚ್ಚಿ ಮುಬಾರಕ್ ಕಾಲಿಗೆ ಗುಂಡೇಟು
Next: ವೀಲ್ ಕಟ್ ಆಗಿ ನಿಯಂತ್ರಣ ತಪ್ಪಿ ಅಡಕೆ ತೋಟಕ್ಕೆ ನುಗ್ಗಿದ ಬಸ್ – 25 ಪ್ರಯಾಣಿಕರು ಪಾರು
Newsmatic - News WordPress Theme 2026. Powered By BlazeThemes.