A shocking stabbing and murder case in Siddapur of Uttara Kannada has exposed an alleged illicit relationship between a Shivamogga-based astrologer and a married woman. Police say the incident followed revelations made by the woman’s daughter to her father, leading to a violent late-night attack. One person was killed while others were injured. Several accused, including the astrologer, have been arrested and are under police investigation.
ಮಗಳ ಮೆಸೇಜ್‌ನಿಂದ ಬಯಲಾದ ರಹಸ್ಯ | ಶಿವಮೊಗ್ಗದ ಜ್ಯೋತಿಷಿ ಜೊತೆಗಿನ ಅನೈತಿಕ ಸಂಬಂಧ – ರಾತ್ರೋರಾತ್ರಿ ದಾಳಿ , ಓರ್ವ ಸಾವು
ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ನಡೆದ ಚಾಕು ಇರಿತ ಹಾಗೂ ಕೊಲೆ ಪ್ರಕರಣದ ಹಿನ್ನೆಲೆ ಇದೀಗ ಬಹಿರಂಗವಾಗಿದ್ದು, ಶಿವಮೊಗ್ಗದ ಜ್ಯೋತಿಷಿ ಕಮಲಾಕರ ಭಟ್ ಹಾಗೂ ವಿವಾಹಿತ ಮಹಿಳೆ ಸುಚಿತ್ರಾ ನಡುವಿನ ಅನೈತಿಕ ಸಂಬಂಧದ ಆರೋಪ ಈ ಹಲ್ಲೆಗೆ ಕಾರಣ ಎನ್ನಲಾಗಿದೆ.
ಪೊಲೀಸ್ ಮಾಹಿತಿ ಪ್ರಕಾರ, ಸಿದ್ದಾಪುರದ ಮಹೇಶ್ ನಾಯ್ಕ್ ಅವರ ಪತ್ನಿ ಸುಚಿತ್ರಾ ಸುಮಾರು ಆರು ತಿಂಗಳ ಹಿಂದೆ ತನ್ನಿಬ್ಬರು ಹೆಣ್ಣು ಮಕ್ಕಳೊಂದಿಗೆ ಮನೆ ಬಿಟ್ಟು ತೆರಳಿದ್ದು, ನಂತರ ಶಿವಮೊಗ್ಗದಲ್ಲಿ ಕಮಲಾಕರ ಭಟ್ ಅವರೊಂದಿಗೆ ವಾಸಿಸುತ್ತಿದ್ದಳು ಎನ್ನಲಾಗಿದೆ. ಈ ವಿಷಯವನ್ನು ಸುಚಿತ್ರಾಳ ಮಗಳು ರಹಸ್ಯವಾಗಿ ತಂದೆಗೆ ಮೊಬೈಲ್ ಸಂದೇಶದ ಮೂಲಕ ತಿಳಿಸಿದ್ದಾಳೆ ಎಂದು ತಿಳಿದು ಬಂದಿದೆ.
ಮಗಳು ಕಳುಹಿಸಿದ್ದ ಸಂದೇಶದಲ್ಲಿ ತಾಯಿಯಿಂದ ಹಿಂಸೆ ನಡೆಯುತ್ತಿದೆ ಹಾಗೂ ಅಲ್ಲಿನ ಪರಿಸ್ಥಿತಿ ಅಸುರಕ್ಷಿತವಾಗಿದೆ ಎಂದು ಉಲ್ಲೇಖಿಸಿದ್ದಾಳೆ ಎನ್ನಲಾಗಿದೆ. ಈ ಬೆಳವಣಿಗೆಯ ನಂತರ ಮಗಳು ತಂದೆಯ ಮನೆಗೆ ಮರಳಿದ್ದಾಳೆ.
ಈ ವಿಚಾರದಿಂದ ಆಕ್ರೋಶಗೊಂಡ ಸುಚಿತ್ರಾ, ಆಕೆಯ ತಂದೆ ಲೋಕನಾಥ್ ಹಾಗೂ ಇನ್ನಿತರ ಆರೋಪಿಗಳು ಸೇರಿ ರಾತ್ರಿ ವೇಳೆ ಮಹೇಶ್ ನಾಯ್ಕ್ ನಿವಾಸಕ್ಕೆ ನುಗ್ಗಿ ಚಾಕು ಹಿಡಿದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಹಲ್ಲೆಯಲ್ಲಿ ಮಹೇಶ್ ನಾಯ್ಕ್ ಗುರಿಯಾಗಿದ್ದು, ಅವರನ್ನು ರಕ್ಷಿಸಲು ಮುಂದಾದ ಅವರ ಸಹೋದರ ವಸಂತ್ ನಾಯ್ಕ್ ಮೇಲೆ ಬರ್ಬರವಾಗಿ ಇರಿತ ನಡೆದಿದ್ದು, ವಸಂತ್ ನಾಯ್ಕ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆಯಲ್ಲಿ ನೆರೆಯ ಕುಮಾರ್ ಎಂಬುವರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಕರಣದ ತನಿಖೆ ಕೈಗೊಂಡಿರುವ ಪೊಲೀಸರು, ಮಹಿಳೆ ಸುಚಿತ್ರಾ, ಆಕೆಯ ತಂದೆ ಲೋಕನಾಥ್, ಜ್ಯೋತಿಷಿ ಕಮಲಾಕರ ಭಟ್ ಸೇರಿದಂತೆ ನಾಲ್ವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಕೊಲೆ, ಕೊಲೆ ಯತ್ನ ಸೇರಿದಂತೆ ವಿವಿಧ ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…
ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…
ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…
ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…
ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…
ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…