A shocking assault incident reported near Soraba fish market where a driver was tied to a pole and brutally attacked with rods and sticks over a work-related dispute. Police have registered a case against five accused.
ಸೊರಬ: ಕೆಲಸದ ವಿಚಾರವಾಗಿ ಉಂಟಾದ ಹಳೆಯ ಕಿರಿಕಿರಿ ಹಿನ್ನೆಲೆಯಲ್ಲಿ ಚಾಲಕನೊಬ್ಬನನ್ನು ಕಂಬಕ್ಕೆ ಕಟ್ಟಿ ಹಾಕಿ ರಾಡ್ ಹಾಗೂ ಕೋಲಿನಿಂದ ಹಲ್ಲೆ ನಡೆಸಿದ ಘಟನೆ ಸೊರಬ ಪಟ್ಟಣದ ಮೀನು ಮಾರುಕಟ್ಟೆ ಬಳಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳ ವಿರುದ್ಧ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಫೆಬ್ರವರಿ 16ರ ರಾತ್ರಿ ಅಶೋಕ್ ಲೈಲ್ಯಾಂಡ್ ವಾಹನದಲ್ಲಿ ಚಾಲಕ ರಾಣೇಬೆನ್ನೂರಿಗೆ ತೆರಳಿ ಕೋಳಿಗಳನ್ನು ತುಂಬಿಕೊಂಡು ಮರಳಿದ್ದರು. ಫೆಬ್ರವರಿ 17ರ ಮುಂಜಾನೆ ಸುಮಾರು 4.30ರ ವೇಳೆಗೆ ಸೊರಬದ ಮೀನು ಮಾರುಕಟ್ಟೆ ಬಳಿ ವಾಹನ ನಿಲ್ಲಿಸಿ ಕೋಳಿ ಟ್ರೇಗಳ ಹಗ್ಗ ಬಿಚ್ಚುತ್ತಿದ್ದಾಗ ಆರೋಪಿಗಳು ಏಕಾಏಕಿ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
“ನಾನು ಹೋಗುತ್ತಿದ್ದ ಕೆಲಸಕ್ಕೆ ನೀನು ಏಕೆ ಹೋದೆ” ಎಂದು ಆರೋಪಿಯೊಬ್ಬ ಗಲಾಟೆ ಆರಂಭಿಸಿದ್ದಾನೆ. ಬಳಿಕ ಇನ್ನೂ ನಾಲ್ವರು ಸೇರಿ ಚಾಲಕನನ್ನು ಮಾರುಕಟ್ಟೆಯ ಕಾಂಪೌಂಡ್ ಕಂಬಕ್ಕೆ ಹಗ್ಗದಿಂದ ಕಟ್ಟಿ ಹಾಕಿ ಮನಬಂದಂತೆ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಆರೋಪಿಗಳು ಕೋಲು ಹಾಗೂ ರಾಡ್‌ನಿಂದ ಚಾಲಕನ ತಲೆ ಮತ್ತು ಬೆನ್ನಿಗೆ ಹೊಡೆದು ಗಾಯಗೊಳಿಸಿದ್ದಾರೆ. ಗಲಾಟೆಯ ಶಬ್ದ ಕೇಳಿ ಸ್ಥಳಕ್ಕೆ ಬಂದ ಸ್ಥಳೀಯರು ಜಗಳ ಬಿಡಿಸಿ, ಗಾಯಾಳುವನ್ನು ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕಳುಹಿಸಿದ್ದಾರೆ. ತೆರಳುವ ಮೊದಲು ಆರೋಪಿಗಳು ಮತ್ತೆ ಡ್ರೈವಿಂಗ್ ಕೆಲಸಕ್ಕೆ ಬಂದರೆ ಜೀವ ಸಹಿತ ಬಿಡುವುದಿಲ್ಲ ಎಂದು ಕೊಲೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.
ಪ್ರಸ್ತುತ ಗಾಯಾಳು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸೊರಬ ಪೊಲೀಸರು ಐವರು ಆರೋಪಿಗಳ ವಿರುದ್ಧ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಕೆರೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ - ತಪ್ಪಿದ ಭಾರಿ ಅನಾಹುತ Private bus…
ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆಗೆ ಚಾಲನೆ - ಮಳೆಯಲ್ಲೂ ಮುಂದುವರಿದ ಪಾದಯಾತ್ರೆ MLA Belur Gopalakrishna and RM Manjunath…
ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ Hosanagara Taluk Advocates Association extends…
ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ - ಆರೋಪಿ ಅರೆಸ್ಟ್! Sagar police arrested a man accused…
ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ Free 31-day mobile phone repair training for…
ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ Farmers and agricultural workers will hold a…