ಆಲ್‌ರೌಂಡರ್ ಕಾವ್ಯಾ ಸಾಧನೆಗೆ ವಿಶ್ವಕರ್ಮ ನಿಗಮದ ಗೌರವ | ಎಲ್ಲಾ ಸೌಕರ್ಯಗಳನ್ನು ಕಲ್ಪಿಸಲಾಗುವುದು – ನಿಗಮದ ಅಧ್ಯಕ್ಷ ಸುಜ್ಞಾನ ಮೂರ್ತಿ ಭರವಸೆ

Blind T20 World Cup winner Kavya V from Ripponpete was felicitated by the Karnataka Vishwakarma Communities Development Corporation, with assurances of government support, facilities, and welfare measures.

ಆಲ್‌ರೌಂಡರ್ ಕಾವ್ಯಾ ಸಾಧನೆಗೆ ವಿಶ್ವಕರ್ಮ ನಿಗಮದ ಗೌರವ | ಎಲ್ಲಾ ಸೌಕರ್ಯಗಳನ್ನು ಕಲ್ಪಿಸಲಾಗುವುದು – ನಿಗಮದ ಅಧ್ಯಕ್ಷ ಸುಜ್ಞಾನ ಮೂರ್ತಿ ಭರವಸೆ

ರಿಪ್ಪನ್‌ಪೇಟೆ: ಭಾರತ ಮಹಿಳಾ ತಂಡವು ಟಿ20 ಅಂಧರ ವಿಶ್ವಕಪ್ ಜಯಿಸುವ ಮೂಲಕ ದೇಶಕ್ಕೆ ಕೀರ್ತಿ ತಂದ ಹಿನ್ನೆಲೆಯಲ್ಲಿ, ವಿಶ್ವಕಪ್ ವಿಜೇತೆ ರಿಪ್ಪನ್‌ಪೇಟೆಯ ಕಾವ್ಯಾ ವಿ ಅವರಿಗೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಸುಜ್ಞಾನ ಮೂರ್ತಿ ಭರವಸೆ ನೀಡಿದರು.

ಭಾರತಕ್ಕೆ ಕೀರ್ತಿ ತಂದ ಮಹಿಳಾ ತಂಡದ ಪ್ರಮುಖ ಸದಸ್ಯೆಯಾಗಿರುವ ಕಾವ್ಯಾ ವಿ ಅವರನ್ನು ನಿಗಮದ ವತಿಯಿಂದ ಬರುವೆ ಗ್ರಾಮದ ಅವರ ಸ್ವಗ್ರಹದಲ್ಲಿ ವಿಶೇಷವಾಗಿ ಸನ್ಮಾನಿಸಿ ಮಾತನಾಡಿದ ಅವರು, ಕರ್ನಾಟಕದಿಂದ ವಿಶ್ವಕಪ್ ಚಾಂಪಿಯನ್ ತಂಡದಲ್ಲಿ ಪ್ರಮುಖ ಆಟಗಾರ್ತಿಯಾಗಿದ್ದ ಕಾವ್ಯಾ ಆಲ್–ರೌಂಡರ್ ಆಗಿ ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ ಎಂದು ಪ್ರಶಂಸಿಸಿದರು. ಸರ್ಕಾರದಿಂದ ಸಿಗಬೇಕಾದ ಎಲ್ಲಾ ರೀತಿಯ ಸವಲತ್ತುಗಳನ್ನು ಅವರಿಗೆ ತಲುಪಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಬಿಡಿಎ ಸೈಟ್ ಒದಗಿಸುವುದು, ಸಾರ್ವಜನಿಕ ಕಂಪನಿಗೆ ಕಾವ್ಯಾ ಅವರನ್ನು ರಾಯಭಾರಿಯಾಗಿ ಆಯ್ಕೆ ಮಾಡುವ ಬಗ್ಗೆ ಹಾಗೂ ಸಿಎಸ್‌ಆರ್ ನಿಧಿಯ ಮೂಲಕ ಬಡತನದಲ್ಲಿರುವ ಕುಟುಂಬಕ್ಕೆ ಮನೆ ನಿರ್ಮಿಸುವ ವಿಷಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಸುಜ್ಞಾನ ಮೂರ್ತಿ ಹೇಳಿದರು.

ಈ ಸಂದರ್ಭದಲ್ಲಿ ವಿಶ್ವಕರ್ಮ ಸಮಿತಿಯ ರಾಜ್ಯಾಧ್ಯಕ್ಷ ಕನ್ನಡ ಸೋಮು, ಜಿಲ್ಲಾ ವಿಶ್ವಕರ್ಮ ಸಮಾಜದ ಅಧ್ಯಕ್ಷರು, ತಾಲ್ಲೂಕು ವಿಶ್ವಕರ್ಮ ಸಮಾಜದ ಅಧ್ಯಕ್ಷ ದೇವದಾಸ್ ಆಚಾರ್, ಶಿವಮೊಗ್ಗ ಜಿಲ್ಲಾ ವಿಶ್ವಕರ್ಮ ಮಹಿಳಾ ಮೋರ್ಚಾದ ಅಧ್ಯಕ್ಷರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ: ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ; ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನೆ

ಸಾಗರ: ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ; ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನೆ Farmers staged a massive protest…

2 hours ago

ಇಂಡಿಯಾ ಪೋಸ್ಟ್‌ನಲ್ಲಿ 25,000ಕ್ಕೂ ಹೆಚ್ಚು ಹುದ್ದೆ: 10ನೇ ತರಗತಿ ಪಾಸಾದವರಿಗೆ ಅವಕಾಶ, ಪರೀಕ್ಷೆ ಇಲ್ಲದೆ ನೇಮಕಾತಿ

ಇಂಡಿಯಾ ಪೋಸ್ಟ್‌ನಲ್ಲಿ 25,000ಕ್ಕೂ ಹೆಚ್ಚು ಹುದ್ದೆ: 10ನೇ ತರಗತಿ ಪಾಸಾದವರಿಗೆ ಅವಕಾಶ, ಪರೀಕ್ಷೆ ಇಲ್ಲದೆ ನೇಮಕಾತಿ India Post GDS…

2 hours ago

ಶಂಕರಮಠ ರಸ್ತೆಯ ರಾಹುಲ್ ಹುಂಡೈ  ಶೋರೂಮ್‌ನಲ್ಲಿ ಮತ್ತೆ ಅಗ್ನಿ ಆಕಸ್ಮಿಕ

ಶಂಕರಮಠ ರಸ್ತೆಯ ರಾಹುಲ್ ಹುಂಡೈ  ಶೋರೂಮ್‌ನಲ್ಲಿ ಮತ್ತೆ ಅಗ್ನಿ ಆಕಸ್ಮಿಕ Small fire accident reported at Rahul Hyundai…

13 hours ago

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

2 days ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

2 days ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

2 days ago