ವಿದ್ಯಾನಗರ ರೈಲು ನಿಲ್ದಾಣದಲ್ಲಿ ದರೋಡೆ ಪ್ರಕರಣ : ಇಬ್ಬರು ಆರೋಪಿಗಳ ಬಂಧನ

ವಿದ್ಯಾನಗರ ರೈಲು ನಿಲ್ದಾಣದಲ್ಲಿ ದರೋಡೆ ಪ್ರಕರಣ : ಇಬ್ಬರು ಆರೋಪಿಗಳ ಬಂಧನ

Railway Police crack a robbery case at Vidyanagar Railway Station in Shivamogga, arresting two accused involved in an attack on passengers aboard the Shivamogga–Yeshwantpur Express.

ಶಿವಮೊಗ್ಗ: ನಗರದ ಮಹಾದೇವಿ ಟಾಕೀಸ್ ಸಮೀಪದ ವಿದ್ಯಾನಗರ ರೈಲು ನಿಲ್ದಾಣದಲ್ಲಿ ನಡೆದಿದ್ದ ದರೋಡೆ ಪ್ರಕರಣವನ್ನು ರೈಲ್ವೆ ಪೊಲೀಸರು ತ್ವರಿತವಾಗಿ ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.

ಫೆಬ್ರವರಿ 10ರಂದು ವಿದ್ಯಾನಗರ ರೈಲ್ವೆ ನಿಲ್ದಾಣದಲ್ಲಿ ಈ ಘಟನೆ ಸಂಭವಿಸಿತ್ತು. ದರೋಡೆ ಕುರಿತು ಪೀಡಿತರು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ರೈಲ್ವೆ ಇಲಾಖೆಯ ನೆರವಿನ ಆ್ಯಪ್‌ನಲ್ಲಿ ತಮ್ಮ ಅನುಭವ ಹಂಚಿಕೊಂಡ ಬಳಿಕ ಪ್ರಕರಣ ಮಾಧ್ಯಮಗಳ ಗಮನಕ್ಕೆ ಬಂದಿದೆ.

ಆ ದಿನ ಶಿವಮೊಗ್ಗ (SME) ಹಾಲ್ಟ್ ನಿಲ್ದಾಣದಲ್ಲಿ 16582 ಶಿವಮೊಗ್ಗ–ಯಶವಂತಪುರ ಎಕ್ಸ್‌ಪ್ರೆಸ್ ರೈಲು ನಿಂತಿದ್ದ ವೇಳೆ, ಆಗಂತುಕನೊಬ್ಬ ರೈಲಿನ ಬೋಗಿಯೊಳಗೆ ನುಗ್ಗಿ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿ, ಒಬ್ಬರಿಂದ ದರೋಡೆ ಮಾಡಿ ಪರಾರಿಯಾಗಿದ್ದರು.

ಪ್ರಕರಣದ ತನಿಖೆಯನ್ನು ರೈಲ್ವೆ ರಕ್ಷಣಾ ಪಡೆ (RPF) ಕಮಾಂಡರ್ ಬಿ.ಕೆ. ಪ್ರಕಾಶ ಹಾಗೂ ಸರ್ಕಾರಿ ರೈಲ್ವೆ ಪೊಲೀಸ್ (GRP) ಸಬ್-ಇನ್ಸ್‌ಪೆಕ್ಟರ್ ಮಹೇಶ್ ನೇತೃತ್ವದ ತಂಡ ಕೈಗೊಂಡಿದ್ದು, ಶೀಘ್ರದಲ್ಲೇ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚಾಲಕನ ನಿಯಂತ್ರಣ ತಪ್ಪಿ ಕೆರೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಕೆರೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ - ತಪ್ಪಿದ ಭಾರಿ ಅನಾಹುತ Private bus…

11 hours ago

ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆಗೆ ಚಾಲನೆ – ಮಳೆಯಲ್ಲೂ ಮುಂದುವರಿದ ಪಾದಯಾತ್ರೆ

ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆಗೆ ಚಾಲನೆ - ಮಳೆಯಲ್ಲೂ ಮುಂದುವರಿದ ಪಾದಯಾತ್ರೆ MLA Belur Gopalakrishna and RM Manjunath…

18 hours ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ Hosanagara Taluk Advocates Association extends…

1 day ago

ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ – ಆರೋಪಿ ಅರೆಸ್ಟ್!

ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ - ಆರೋಪಿ ಅರೆಸ್ಟ್! Sagar police arrested a man accused…

1 day ago

ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ

ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ Free 31-day mobile phone repair training for…

1 day ago

ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ

ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ Farmers and agricultural workers will hold a…

1 day ago