ವಾಟ್ಸಾಪ್‌ನಲ್ಲಿ ಡೆತ್ ನೋಟ್ ಬರೆದು ವಿಧವೆಯ ಆತ್ಮಹತ್ಯೆ: ಪೊಲೀಸಪ್ಪನ ಕಾಟ ಆರೋಪ, ಕ್ರಮಕ್ಕೆ ಆಗ್ರಹ

A widow in Bhadravathi taluk of Shivamogga district died by suicide after allegedly facing harassment and defamation by a police personnel, leaving behind a WhatsApp death note naming the accused.

ವಾಟ್ಸಾಪ್‌ನಲ್ಲಿ ಡೆತ್ ನೋಟ್ ಬರೆದು ವಿಧವೆಯ ಆತ್ಮಹತ್ಯೆ: ಪೊಲೀಸಪ್ಪನ ಕಾಟ ಆರೋಪ, ಕ್ರಮಕ್ಕೆ ಆಗ್ರಹ

ಶಿವಮೊಗ್ಗ: ಪೊಲೀಸರ ಕಾಟ ತಾಳಲಾರದೆ ವಿಧವೆಯೊಬ್ಬಳು ವಾಟ್ಸಾಪ್‌ನಲ್ಲಿ ಡೆತ್ ನೋಟ್ ಬರೆದು ನೇಣಿಗೆ ಶರಣಾದ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಸ್ವಾತಿ ಎಂದು ಗುರುತಿಸಲಾಗಿದೆ.

ಮೃತ ಸ್ವಾತಿ ಸಾವಿಗೂ ಮುನ್ನ ಬರೆದ ಡೆತ್ ನೋಟ್‌ನಲ್ಲಿ, ತೀರ್ಥಹಳ್ಳಿ ಪೊಲೀಸ್ ಠಾಣೆನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮೋಹನ್ ಎಂಬ ಪೊಲೀಸ್ ಸಿಬ್ಬಂದಿಯ ಹೆಸರನ್ನು ಉಲ್ಲೇಖಿಸಿದ್ದಾರೆ. ಸ್ವಾತಿಗೆ ಮದುವೆಯಾಗಿ ಏಳು ವರ್ಷವಾಗಿದ್ದು, ವಾರದ ಹಿಂದಷ್ಟೇ ಪತಿ ಜಗದೀಶ್ ಅನಾರೋಗ್ಯದಿಂದ ಮೃತಪಟ್ಟಿದ್ದರು.

ಪತಿಯ ಸಾವಿನ ಬಳಿಕ ಈ ದುರ್ಘಟನೆಯನ್ನು ಬಂಡವಾಳ ಮಾಡಿಕೊಂಡು, ಮೋಹನ್ ಫೇಸ್‌ಬುಕ್ ಮೂಲಕ ಸಂದೇಶ ಕಳುಹಿಸಿದ್ದಾನೆ ಎಂದು ಆರೋಪಿಸಲಾಗಿದೆ. ಸ್ವಾತಿ ಆ ಖಾತೆಯನ್ನು ಬ್ಲಾಕ್ ಮಾಡಿದ ಹಿನ್ನೆಲೆಯಲ್ಲಿ ಕೋಪಗೊಂಡು, ಬೇರೆ ಖಾತೆಯಿಂದ ಅವಳ ಕುರಿತು ಅಪಪ್ರಚಾರ ನಡೆಸಿದ್ದಾನೆ ಎಂಬುದಾಗಿ ಡೆತ್ ನೋಟ್‌ನಲ್ಲಿ ಉಲ್ಲೇಖವಾಗಿದೆ. ಇದರಿಂದ ಮನನೊಂದ ಸ್ವಾತಿ ಆತ್ಮಹತ್ಯೆಗೆ ಶರಣಾದರೆಂದು ಕುಟುಂಬದವರು ತಿಳಿಸಿದ್ದಾರೆ.

ಡೆತ್ ನೋಟ್‌ನಲ್ಲಿ ಸ್ವಾತಿ, “ನನ್ನ ಬಗ್ಗೆ ಇಲ್ಲದ ಕೆಟ್ಟ ಮಾತುಗಳನ್ನು ಜನರ ಮುಂದೆ ಹೇಳಲಾಗಿದೆ. ಇದನ್ನು ತಾಳಲು ಸಾಧ್ಯವಾಗುತ್ತಿಲ್ಲ. ಫೇಸ್‌ಬುಕ್‌ನಲ್ಲಿ ಮೆಸೇಜ್ ಮಾಡಿದ ವ್ಯಕ್ತಿಯನ್ನು ನಾನು ಬ್ಲಾಕ್ ಮಾಡಿದ ಕಾರಣಕ್ಕೆ ಈ ಅಪಪ್ರಚಾರ ನಡೆದಿದೆ. ನನ್ನ ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಿ. ಆ ವ್ಯಕ್ತಿಯನ್ನು ಸುಮ್ಮನೆ ಬಿಡಬೇಡಿ” ಎಂದು ಮನವಿ ಮಾಡಿದ್ದಾರೆ.

ಈ ಘಟನೆಗೆ ಬಳಿಕ, ಸ್ವಾತಿಯ ತಂದೆ–ತಾಯಿಯು ಸಂಬಂಧಪಟ್ಟ ಪೊಲೀಸ್ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ತಾಯಿ–ತಂದೆ ಇಬ್ಬರನ್ನೂ ಕಳೆದುಕೊಂಡ ಇಬ್ಬರು ಬಾಲಕಿಯರು ಅನಾಥರಾಗಿದ್ದು, ಗ್ರಾಮದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

3 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

3 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

1 day ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

2 days ago