w
Headlines
Home » HOSANAGARA | ಶಾಲಾ ಆವರಣದಲ್ಲಿ ಯುವಕ ನೇಣು ಬಿಗಿದುಕೊಂಡು ಆತ್ಮ*ಹತ್ಯೆ

HOSANAGARA | ಶಾಲಾ ಆವರಣದಲ್ಲಿ ಯುವಕ ನೇಣು ಬಿಗಿದುಕೊಂಡು ಆತ್ಮ*ಹತ್ಯೆ

GridArt 20260207

ಶಾಲಾ ಆವರಣದಲ್ಲಿ ಯುವಕ ನೇಣು ಬಿಗಿದುಕೊಂಡು ಆತ್ಮ*ಹತ್ಯೆ

A 28-year-old youth was found hanging in the premises of a government primary school near Nagar in Hosanagar taluk, Shivamogga district. Police have registered a case and initiated an investigation to ascertain the cause of death.

ಸರ್ಕಾರಿ ಶಾಲೆಯ ಆವರಣದಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರ ಸಮೀಪದ ಬೈಸೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಇಂದು ಬೆಳಿಗ್ಗೆ ದುರ್ಘಟನೆ ಸಂಭವಿಸಿದೆ.

28 ವರ್ಷದ ರಾಕೇಶ್ ಜೋಗಿ ಎಂಬ ಯುವಕ ಶಾಲೆಯ ಮುಂಭಾಗದ ಜಗುಲಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಶಾಲೆಯ ಕಾರಿಡಾರ್‌ನಲ್ಲಿ ಯುವಕನೊಬ್ಬ ನೇಣು ಹಾಕಿಕೊಂಡಿರುವುದನ್ನು ಸ್ಥಳೀಯರು ಗಮನಿಸಿದ ಬಳಿಕ ವಿಷಯ ಪೊಲೀಸರಿಗೆ ತಿಳಿಸಲಾಗಿದೆ. ಮಾಹಿತಿ ಪಡೆದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.