ASI Halappa of Ripponpet Police Station receives appreciation letter for maintaining law and order during Ganapati and Eid Milad processions in Thirthahalli subdivision of Shivamogga district.
ರಿಪ್ಪನ್ಪೇಟೆ : 2025ನೇ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಉಪವಿಭಾಗ ವ್ಯಾಪ್ತಿಯಲ್ಲಿ ನಡೆದ ಗಣಪತಿ ಮೆರವಣಿಗೆ ಹಾಗೂ ಈದ್ ಮಿಲಾದ್ ಮೆರವಣಿಗೆ ಸಂದರ್ಭಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ತೋರಿದ ಎಚ್ಚರಿಕೆ ಮತ್ತು ಜವಾಬ್ದಾರಿತನಕ್ಕಾಗಿ ರಿಪ್ಪನ್ಪೇಟೆ ಪೊಲೀಸ್ ಠಾಣೆಯ ಎಎಸ್ಐ ಹಾಲಪ್ಪ ಅವರಿಗೆ ಪ್ರಶಂಸನಾ ಪತ್ರ ನೀಡಿ ಗೌರವಿಸಲಾಗಿದೆ.
ಗುಪ್ತ ಮಾಹಿತಿಯ ಸಂಗ್ರಹಣೆ, ರೌಡಿಶೀಟರ್ಗಳ ಮೇಲೆ ನಿಗಾವಹಿಸುವುದು ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಕೈಗೊಂಡ ಕ್ರಮಗಳು ಶ್ಲಾಘನೀಯವಾಗಿವೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಕರ್ತವ್ಯನಿಷ್ಠೆ, ಪ್ರಾಮಾಣಿಕತೆ ಹಾಗೂ ಶ್ರದ್ಧೆಯಿಂದ ಸಮಾಜದಲ್ಲಿ ಶಾಂತಿ ಸ್ಥಾಪನೆಗೆ ಹಾಲಪ್ಪ ಮಹತ್ತರ ಕೊಡುಗೆ ನೀಡಿದ್ದಾರೆ ಎಂದು ಪ್ರಶಂಸಿಸಲಾಗಿದೆ.
ದಾವಣಗೆರೆಯ ಪೂರ್ವ ವಲಯದ ಪೊಲೀಸ್ ಮಹಾನಿರೀಕ್ಷಕರಾದ ರವಿಕಾಂತೇ ಗೌಡ ಅವರು ಈ ಪ್ರಶಂಸನಾ ಪತ್ರವನ್ನು ನೀಡಿ ಗೌರವಿಸಿದ್ದು, ಅದನ್ನು ಪಟ್ಟಣದ ಪಿಎಸ್ಐ ರಾಜು ರೆಡ್ಡಿ ಅವರು ಹಾಲಪ್ಪ ಅವರಿಗೆ ವಿತರಿಸಿದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್