Passenger auto worth ₹2.44 lakh stolen from outside a house in Bommanakatte, Shivamogga; owner files police complaint after nearly one year.
ಶಿವಮೊಗ್ಗ: ನಗರದ ಬೊಮ್ಮನಕಟ್ಟೆಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಪ್ಯಾಸೆಂಜರ್ ಆಟೋವೊಂದು ನಾಪತ್ತೆಯಾಗಿದ್ದು, ಘಟನೆ ನಡೆದು ಸುಮಾರು 1 ವರ್ಷದ ಬಳಿಕ ಮಾಲೀಕರು ಪೊಲೀಸ್ ಠಾಣಾ ಮೆಟ್ಟಿಲೇರಿದ್ದಾರೆ.
ಬೊಮ್ಮನಕಟ್ಟೆ ನಿವಾಸಿಯೊಬ್ಬರು ತಮ್ಮ ಅಳಿಯನ ಹೆಸರಿನಲ್ಲಿದ್ದ ಪ್ಯಾಸೆಂಜರ್ ಆಟೋವನ್ನು ಭದ್ರಾವತಿಯಿಂದ ತಂದು ತಮ್ಮ ಮನೆಯ ಮುಂದೆ ನಿಲ್ಲಿಸಿದ್ದರು. 2025ರ ಮಾರ್ಚ್ 20 ರಂದು ಕುಟುಂಬ ಸಮೇತ ದೇವಸ್ಥಾನಕ್ಕೆ ತೆರಳಿದ್ದ ಇವರು, ಮಾರ್ಚ್ 24 ರಂದು ವಾಪಸ್ ಬಂದಾಗ ಮನೆ ಮುಂದೆ ನಿಲ್ಲಿಸಿದ್ದ ಆಟೋ ನಾಪತ್ತೆಯಾಗಿರುವುದು ಕಂಡುಬಂದಿದೆ.
ಆಟೋ ನಾಪತ್ತೆಯಾದಾಗ, ಅದನ್ನು ತನ್ನ ಅಳಿಯನೇ ತೆಗೆದುಕೊಂಡು ಹೋಗಿರಬಹುದು ಎಂದು ದೂರು ಭಾವಿಸಿದ್ದರು. ಇದೇ ಕಾರಣಕ್ಕೆ ಅವರು ಆರಂಭದಲ್ಲಿ ಪೊಲೀಸರಿಗೆ ದೂರು ನೀಡಿರಲಿಲ್ಲ. ಆದರೆ, ದಿನ ಕಳೆದಂತೆ ಆಟೋದ ಬಗ್ಗೆ ಯಾವುದೇ ಮಾಹಿತಿ ಸಿಗದ ಹಿನ್ನೆಲೆಯಲ್ಲಿ ಮತ್ತು ಅಳಿಯನೂ ಅದನ್ನು ಒಯ್ದಿಲ್ಲ ಎಂಬುದು ಖಚಿತವಾದ ನಂತರ ಈಗ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ.
ಕಳುವಾದ ಆಟೋದ ಅಂದಾಜು ಮೌಲ್ಯ 2,44,000 ರೂಪಾಯಿ ಎಂದು ತಿಳಿದುಬಂದಿದೆ. ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.
ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ PSI Shankar Gowda Patil has…
ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ Ripponpete Government Model Boys…
ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ A 7.5-foot-long, 10 kg giant python…
ಈದ್ ಮಿಲಾದ್ - ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್…
ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು Sagar Tahsildar Dr. Prathibha…
ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು Thieves broke…