w
Headlines
Home » ರಿಪ್ಪನ್‌ಪೇಟೆಯಲ್ಲಿ ಹೆಜ್ಜೇನುಗಳ ದಾಳಿ: ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಾಯ – SBI ಬ್ಯಾಂಕ್ ಸಿಬ್ಬಂದಿಗೆ ಗಂಭೀರ ಗಾಯ

ರಿಪ್ಪನ್‌ಪೇಟೆಯಲ್ಲಿ ಹೆಜ್ಜೇನುಗಳ ದಾಳಿ: ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಾಯ – SBI ಬ್ಯಾಂಕ್ ಸಿಬ್ಬಂದಿಗೆ ಗಂಭೀರ ಗಾಯ

GridArt 20260317

ರಿಪ್ಪನ್‌ಪೇಟೆಯಲ್ಲಿ ಹೆಜ್ಜೇನುಗಳ ದಾಳಿ: ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಾಯ – SBI ಬ್ಯಾಂಕ್ ಸಿಬ್ಬಂದಿಗೆ ಗಂಭೀರ ಗಾಯ

A sudden bee attack near SBI Bank on Sagar Road created panic as school and college students were stung while passing by. An SBI employee sustained serious injuries after being stung by over 30 bees and was shifted to the district hospital for further treatment.

ರಿಪ್ಪನ್‌ಪೇಟೆ : ಪಟ್ಟಣದ ಸಾಗರ ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್ ಸಮೀಪ ಇಂದು ಬೆಳಿಗ್ಗೆ ಸುಮಾರು 9:30ರ ವೇಳೆಗೆ ಏಕಾಏಕಿ ಹೆಜ್ಜೇನುಗಳ ದಾಳಿ ನಡೆದಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.ಈ ಘಟನೆಯಿಂದ SBI ಬ್ಯಾಂಕ್ ಸಿಬ್ಬಂದಿಯೊಬ್ಬರಿಗೆ ಗಂಭೀರ ಗಾಯಗಳಾಗಿದ್ದು ಶಿವಮೊಗ್ಗಕ್ಕೆ ರವಾನಿಸಲಾಗಿದೆ.

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಕಾಲೇಜು ವಿದ್ಯಾರ್ಥಿಗಳು ಹಾಗೂ ಶಾಲಾ ಮಕ್ಕಳ ಮೇಲೆ ಹೆಜ್ಜೇನುಗಳು ದಾಳಿ ನಡೆಸಿದ ಘಟನೆ ನಡೆದಿದೆ. ಇದೇ ವೇಳೆ ಎಸ್‌ಎಸ್‌ಎಲ್‌ಸಿ ಹಾಲ್ ಟಿಕೆಟ್ ಪಡೆಯಲು ಶಾಲೆಗೆ ತೆರಳುತ್ತಿದ್ದ ಕೆಲವು ವಿದ್ಯಾರ್ಥಿಗಳ ಮೇಲೂ ಹೆಜ್ಜೇನುಗಳು ದಾಳಿ ನಡೆಸಿದ ಕಾರಣ ಸ್ಥಳದಲ್ಲಿ ಗೊಂದಲದ ಪರಿಸ್ಥಿತಿ ಉಂಟಾಯಿತು.

ಸರ್ಕಾರಿ ಬಾಲಕರ ಪಾಠಶಾಲೆಯ ಓರ್ವ ವಿದ್ಯಾರ್ಥಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಹಾಲ್ ಟಿಕೆಟ್ ಪಡೆಯಲು ತೆರಳುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಹಾಗೂ ಓರ್ವ ಪದವಿ ಕಾಲೇಜು ವಿದ್ಯಾರ್ಥಿ ಮೇಲೆ ಹೆಜ್ಜೇನುಗಳು ದಾಳಿ ಮಾಡಿದೆ.

ಘಟನೆಯಲ್ಲಿ ಎಸ್‌ಬಿಐ ಬ್ಯಾಂಕ್ ಉದ್ಯೋಗಿ ತೌಸಿಫ್ ಅವರಿಗೆ ಸುಮಾರು 30ಕ್ಕೂ ಹೆಚ್ಚು ಹೆಜ್ಜೇನುಗಳು ಚುಚ್ಚಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

ಘಟನೆ ಸಂಭವಿಸಿದ ತಕ್ಷಣ ಸ್ಥಳೀಯರು ನೆರವಿಗೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಸಹಕರಿಸಿದರು. ವಿದ್ಯಾರ್ಥಿಗಳಿಗೆ ತಕ್ಷಣ ಸೂಕ್ತ ಚಿಕಿತ್ಸೆ ನೀಡಲಾಗಿದೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.