w
Headlines
Home » ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಗೆ ಬೆಂಕಿಗೆ ಆಹುತಿಯಾದ ಅಡಿಕೆ ತೋಟಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ , ಸಾಂತ್ವಾನ

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಗೆ ಬೆಂಕಿಗೆ ಆಹುತಿಯಾದ ಅಡಿಕೆ ತೋಟಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ , ಸಾಂತ್ವಾನ

GridArt 20260315

Sagar MLA Belur Gopalakrishna visited Kusugundi village in Koduru GP after a fire caused by an electrical short circuit destroyed over 250 arecanut trees, causing heavy loss to farmer Chandrashekhar.

ರಿಪ್ಪನ್‌ಪೇಟೆ : ಕೋಡೂರು ಗ್ರಾಮ ಪಂಚಾಯಿತಿಯ ಕುಸುಗುಂಡಿ ಗ್ರಾಮದಲ್ಲಿ ಇತ್ತೀಚೆಗೆ ಸಂಭವಿಸಿದ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ದುರಂತದಲ್ಲಿ ಸುಮಾರು 250ಕ್ಕೂ ಹೆಚ್ಚು ಅಡಿಕೆ ಮರಗಳು ಬೆಂಕಿಗೆ ಆಹುತಿಯಾದ ಹಿನ್ನೆಲೆಯಲ್ಲಿ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಲೂರು ಗೋಪಾಲಕೃಷ್ಣ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ದುರಂತದಲ್ಲಿ ನಷ್ಟ ಅನುಭವಿಸಿದ ರೈತ ಚಂದ್ರಶೇಖರ್ ಆಚಾರ್ ಅವರ ಅಡಿಕೆ ತೋಟವನ್ನು ಪರಿಶೀಲಿಸಿದ ಶಾಸಕರು, ರೈತನ ಕಷ್ಟ-ಸಂಕಷ್ಟಗಳನ್ನು ಆಲಿಸಿ ಧೈರ್ಯ ತುಂಬಿದರು. ಹಲವು ವರ್ಷಗಳ ಪರಿಶ್ರಮದಿಂದ ಬೆಳೆದ ಅಡಿಕೆ ತೋಟ ಬೆಂಕಿಗೆ ಆಹುತಿಯಾಗಿ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿರುವುದನ್ನು ಕಂಡು ವಿಷಾದ ವ್ಯಕ್ತಪಡಿಸಿದರು.

ಈ ವೇಳೆ ರೈತನಿಗೆ ವೈಯಕ್ತಿಕವಾಗಿ ಆರ್ಥಿಕ ಸಹಾಯ ನೀಡಿದ ಶಾಸಕರು, ಸರ್ಕಾರದ ವತಿಯಿಂದ ಸೂಕ್ತ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಜೊತೆಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಘಟನೆಯ ಕುರಿತು ಸಮಗ್ರ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಸ್ಥಳೀಯರು ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯದಿಂದ ಈ ಘಟನೆ ಸಂಭವಿಸಿದೆ ಎಂದು ಆರೋಪಿಸಿರುವ ಹಿನ್ನೆಲೆಯಲ್ಲಿ, ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಬೇಲೂರು ಗೋಪಾಲಕೃಷ್ಣ ತಿಳಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ ಜಿ ಚಂದ್ರಮೌಳಿ , ಶಾಸಕರ ಆಪ್ತ ಸಹಾಯಕ ಸಣ್ಣಕ್ಕಿ ಮಂಜು, ಮೆಸ್ಕಾಂ ಇಲಾಖೆಯ ಅಧಿಕಾರಿ ನಾಗರಾಜ್ ಹಾಗೂ ಗ್ರಾಮಸ್ಥರು ಇದ್ದರು.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.