POSTMAN NEWS

ನೈಜ ಸುದ್ದಿ ನೇರ ಬಿತ್ತರ..

ಭೀಕರ ಅಪಘಾತ: ಜೋಳದ ಲಾರಿಯಡಿ ಬಿದ್ದು ದಂಪತಿಗಳ ಸಾವು

GridArt 20260330

A tragic road accident near HK Junction in Bhadravathi claimed the lives of a couple after their bike got trapped under a maize-loaded lorry. The incident reportedly occurred during an overtaking attempt.

ಶಿವಮೊಗ್ಗ: ಜೋಳ ತುಂಬಿಕೊಂಡು ಸಾಗುತ್ತಿದ್ದ ಲಾರಿಯ ಚಕ್ರಕ್ಕೆ ಬೈಕ್ ಸಿಲುಕಿದ ಪರಿಣಾಮ ದಂಪತಿ ಇಬ್ಬರೂ ದಾರುಣವಾಗಿ ಸಾವನ್ನಪ್ಪಿದ ಘಟನೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಎಚ್.ಕೆ. ಜಂಕ್ಷನ್ ಬಳಿ ನಡೆದಿದೆ.

ಮೃತರನ್ನು ತರೀಕೆರೆ ತಾಲ್ಲೂಕಿನ ಬರಗೇನಹಳ್ಳಿ ಗೌಳಿಕ್ಯಾಂಪ್ ನಿವಾಸಿ ಬಾಬು (30) ಎಂದು ಗುರುತಿಸಲಾಗಿದ್ದು, ಪತ್ನಿಯ ಹೆಸರು ಇನ್ನಷ್ಟೇ ತಿಳಿದುಬರಬೇಕಾಗಿದೆ.

ಶಿವಮೊಗ್ಗ–ತರೀಕೆರೆ ಮಾರ್ಗದಲ್ಲಿ ಜೋಳ ಸಾಗಿಸುತ್ತಿದ್ದ ಲಾರಿ ಸಾಗುತ್ತಿದ್ದ ವೇಳೆ, ಹೋಟೆಲ್ ಕೆಲಸ ಮುಗಿಸಿಕೊಂಡು ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದ ದಂಪತಿ ಲಾರಿಯನ್ನು ಓವರ್‌ಟೇಕ್ ಮಾಡಲು ಯತ್ನಿಸಿದಾಗ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಈ ವೇಳೆ ಬೈಕ್ ಲಾರಿಯ ಹಿಂಬದಿಯ ಚಕ್ರಕ್ಕೆ ಸಿಲುಕಿದ್ದು, ಬಾಬು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ಪತ್ನಿಯನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ.

ಘಟನೆ ಕುರಿತು ಭದ್ರಾವತಿ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.