POSTMAN NEWS

ನೈಜ ಸುದ್ದಿ ನೇರ ಬಿತ್ತರ..

ಬೈಕ್ ಅಪಘಾತದಲ್ಲಿ Btv ವರದಿಗಾರ ಅನಿಲ್ ಸಾವು

GridArt 20260309

BTV reporter Anil died after a tragic bike accident in Shivamogga near Vinobanagar Benki Nagar Road. He was undergoing treatment at a private hospital but succumbed to injuries.

ಶಿವಮೊಗ್ಗ: ನಗರದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬಿ.ಟಿವಿ ವಾಹಿನಿಯ ವರದಿಗಾರರಾದ ಅನಿಲ್ ಅವರು ಮೃತಪಟ್ಟಿರುವ ಘಟನೆ ನಡೆದಿದೆ.

ಅಪಘಾತದ ಸಿಸಿಟಿವಿ ದೃಶ್ಯಾವಳಿ

ಕಳೆದ ರಾತ್ರಿ ನಗರದ ವಿನೋಬನಗರದ ಬೆಂಕಿ ನಗರ ರಸ್ತೆಯಲ್ಲಿ ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಈ ಅಪಘಾತ ಸಂಭವಿಸಿದೆ. ಅಪಘಾತದ ವೇಳೆ ಅನಿಲ್ ಅವರು ಗಂಭೀರವಾಗಿ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿ ರಸ್ತೆಯ ಮೇಲೆ ಬಿದ್ದಿದ್ದರು.

ಘಟನೆಯ ನಂತರ ಸ್ಥಳೀಯರು ತಕ್ಷಣವೇ ಅವರನ್ನು ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುವಂತೆ ಮಾಡಿದರು. ಆದರೆ ತೀವ್ರ ಗಾಯಗಳಿಂದ ಬಳಲುತ್ತಿದ್ದ ಅನಿಲ್ ಅವರಿಗೆ ವೈದ್ಯರು ಚಿಕಿತ್ಸೆ ನೀಡಿದರೂ ಅವರು ಸ್ಪಂದಿಸದೇ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಮೃತ ಅನಿಲ್ ಅವರಿಗೆ ಮೂವರು ಮಕ್ಕಳಿದ್ದಾರೆ. ಅವರ ಅಕಾಲಿಕ ನಿಧನ ಕುಟುಂಬಸ್ಥರು ಹಾಗೂ ಮಾಧ್ಯಮ ವಲಯದಲ್ಲಿ ಆಘಾತ ಮತ್ತು ದುಃಖಕ್ಕೆ ಕಾರಣವಾಗಿದೆ.

ಅನಿಲ್ ಅವರು ಶಿವಮೊಗ್ಗದಲ್ಲಿ ಬಿ.ಟಿವಿ ವಾಹಿನಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದಕ್ಕೂ ಮೊದಲು ಚಿಕ್ಕಮಗಳೂರು ಜಿಲ್ಲೆಯಲ್ಲಿ ಟಿವಿ9 ವಾಹಿನಿಯಲ್ಲಿ ಕ್ಯಾಮೆರಾಮನ್ ಆಗಿ ಕೆಲಸ ಮಾಡಿದ್ದರು. ಅಲ್ಲದೆ ವಾಯ್ಸ್ ಆಫ್ ಶಿವಮೊಗ್ಗ ಪತ್ರಿಕೆಯಲ್ಲಿ ಸಹ ಸೇವೆ ಸಲ್ಲಿಸಿದ್ದ ಅನುಭವ ಹೊಂದಿದ್ದರು.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.