ಮದುವೆ ಆಮಂತ್ರಣಕ್ಕೆ ತೆರಳಿದ ಕಾರು ಬೆಂಕಿಗಾಹುತಿ – ಬೆಳ್ಳೂರು ರಸ್ತೆ ಮಧ್ಯೆ ಧಗಧಗನೆ ಹೊತ್ತಿ ಉರಿದ ಕಾರು | ನಡೆದಿದ್ದೇನು!? ಇಲ್ಲಿದೆ ಸಂಪೂರ್ಣ ಮಾಹಿತಿ

A moving Maruti Omni car caught fire due to a suspected short circuit near Belluru village close to Ripponpet in Shivamogga district. The car was completely gutted in flames, while the occupants escaped safely.

ಮದುವೆ ಆಮಂತ್ರಣಕ್ಕೆ ತೆರಳಿದ ಕಾರು ಬೆಂಕಿಗಾಹುತಿ – ಬೆಳ್ಳೂರು ರಸ್ತೆ ಮಧ್ಯೆ ಧಗಧಗನೆ ಹೊತ್ತಿ ಉರಿದ ಕಾರು | ನಡೆದಿದ್ದೇನು!? ಇಲ್ಲಿದೆ ಸಂಪೂರ್ಣ ಮಾಹಿತಿ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬೆಳ್ಳೂರು ಗ್ರಾಮದಲ್ಲಿ ಶನಿವಾರ ರಾತ್ರಿ ಸಂಚಲನಕಾರಿ ಘಟನೆ ನಡೆದಿದೆ. ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೆಲವೇ ಕ್ಷಣಗಳಲ್ಲಿ ಕಾರು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ.

ಕಾರು ದ್ಯಾಮ್ಲಾಪುರ ಗ್ರಾಮದ ಶ್ರೀಕಾಂತ್ ಎಂಬುವವರಿಗೆ ಸೇರಿದ್ದು ಅದೃಷ್ಟಾವಶಾತ್ ಯಾರಿಗೂ ಯಾವುದೇ ಗಾಯಗಳಾಗಿರುವುದಿಲ್ಲ.

ನಡೆದಿದ್ದೇನು..!!??

ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ದ್ಯಾಮ್ಲಾಪುರ ಗ್ರಾಮದ ಶ್ರೀಕಾಂತ್ ತಮ್ಮ ತಂಗಿಯ ಮದುವೆಯ ಹಿನ್ನಲೆಯಲ್ಲಿ ತಮ್ಮ ದೊಡ್ಡಪನವರಾದ ಗಂಗಾಧರಗೌಡ ಎಂಬುವವರೊಂದಿಗೆ ವಿವಾಹ ಆಮಂತ್ರಣ ಪತ್ರಿಕೆ ನೀಡಲು ಮಾರುತಿ ಓಮಿನಿ‌ ಕಾರಿನಲ್ಲಿ ಶಿವಮೊಗ್ಗಕ್ಕೆ ತೆರಳಿ ಹಿಂದಿರುಗುತಿದ್ದ ವೇಳೆಯಲ್ಲಿ ಶನಿವಾರ ರಾತ್ರಿ ಸುಮಾರು 10.20 ರ ಸಮಯದಲ್ಲಿ ಬೆಳ್ಳೂರು ಗ್ರಾಮದ ಮುಖ್ಯ ರಸ್ತೆಯಲ್ಲಿರುವ ಶಿಕ್ಷಕ ಸುರೇಶ್ ಎಂಬುವವರ ಮನೆ ಮುಂದೆ ಮಾರುತಿ ಓಮಿನಿ ಕಾರಿನಲ್ಲಿ ವೈರ್ ಶಾರ್ಟ್ ಸರ್ಕ್ಯೂಟ್ ಆಗಿ ಮೊದಲು ಹೊಗೆ ಕಾಣಿಸಿಕೊಂಡಿದ್ದು, ಬಳಿಕ ಕ್ಷಣಾರ್ಧದಲ್ಲಿ ಬೆಂಕಿ ಜ್ವಾಲೆಗಳು ಎದ್ದಿವೆ.ಕೂಡಲೇ ಇಬ್ಬರು ಹೊರಗೆ ಇಳಿದು ಓಡಿದ್ದಾರೆ, ನಂತರ ನೋಡನೋಡುತಿದ್ದಂತೆ ಬೆಂಕಿ ಕಾರಿನನ್ನೆಲ್ಲಾ ಆವರಿಸಿ, ಕಣ್ಣೆದುರೇ ಕಾರು ಹಾಗೂ ಕಾರಿನಲ್ಲಿದ್ದ ತರಕಾರಿ , ಸೀರೆ ಮತ್ತು ಬಟ್ಟೆಗಳು ಸುಟ್ಟು ಭಸ್ಮವಾಗಿದೆ.

ರಸ್ತೆ ಮಧ್ಯದಲ್ಲಿಯೇ ಧಗಧಗನೆ ಹೊತ್ತಿ ಉರಿದ ಕಾರಿನ ದೃಶ್ಯವನ್ನು ಕಂಡು ಸ್ಥಳೀಯರು ತಕ್ಷಣವೇ ಸಹಾಯಕ್ಕೆ ಧಾವಿಸಿದ್ದು, ಬೆಂಕಿ ಆರಿಸಲು ಪ್ರಯತ್ನಿಸಿದ್ದಾರೆ. ಆದರೆ ಬೆಂಕಿಯ ತೀವ್ರತೆ ಹೆಚ್ಚಿದ್ದರಿಂದ ಕಾರು ಸಂಪೂರ್ಣವಾಗಿ ಸುಟ್ಟುಹೋಗಿದೆ.

ವಿಷಯ ತಿಳಿಯುತಿದ್ದಂತೆ ರಿಪ್ಪನ್ ಪೇಟೆ ಪೊಲೀಸರು ಸ್ಥಳಕ್ಕೆ ತೆರಳಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

12 hours ago

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…

12 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

18 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

2 days ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

2 days ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

2 days ago