Shivamogga SP Nikhil B IPS paid tribute to RSI Sachin V who died in the tragic road accident near Heggare in Chitradurga district. Three Karnataka State Police RSIs lost their lives in the accident.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಮೂವರು ಅಧಿಕಾರಿಗಳು ದುರ್ಘಟನೆಯಾಗಿ ಮೃತಪಟ್ಟಿರುವ ಘಟನೆ ರಾಜ್ಯದೆಲ್ಲೆಡೆ ದುಃಖದ ವಾತಾವರಣವನ್ನು ಉಂಟುಮಾಡಿದೆ.
ಈ ಅಪಘಾತದಲ್ಲಿ ಆರ್‌ಎಸ್‌ಐಗಳಾದ ಅಮರೇಶ್ ಬಿ., ಮಂಜುನಾಥ್ ದಾರಿಮನಿ ಹಾಗೂ ಸಚಿನ್ ವಿ. ಅವರು ದುರ್ಭಾಗ್ಯವಶಾತ್ ಪ್ರಾಣ ಕಳೆದುಕೊಂಡಿದ್ದಾರೆ.
ಮೃತರಾದ ಪೊಲೀಸ್ ಅಧಿಕಾರಿಗಳಿಗೆ ಗೌರವ ನಮನ ಸಲ್ಲಿಸುವ ಉದ್ದೇಶದಿಂದ ಮಾರ್ಚ್ 16, 2026ರಂದು ಬೆಳಿಗ್ಗೆ, ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ನಿಖಿಲ್ ಬಿ., ಐಪಿಎಸ್ ಅವರು ಶಿವಮೊಗ್ಗ ಜಿಲ್ಲೆಯ ಕುಡುವಳ್ಳಿ ಗ್ರಾಮಕ್ಕೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ದಿವಂಗತ ಸಚಿನ್ ವಿ. (ಆರ್‌ಎಸ್‌ಐ) ಅವರ ಪಾರ್ಥಿವ ಶರೀರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ವಂದನೆಗಳನ್ನು ಅರ್ಪಿಸಿದರು.
ನಂತರ ಮೃತ ಅಧಿಕಾರಿಯ ಕುಟುಂಬಸ್ಥರನ್ನು ಭೇಟಿಯಾದ ಜಿಲ್ಲಾ ಪೊಲೀಸ್ ಅಧೀಕ್ಷಕರು ಅವರಿಗೆ ಸಾಂತ್ವಾನ ಹೇಳಿ, ಈ ದುಃಖದ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಸದಾ ಅವರೊಂದಿಗೇ ಇರುತ್ತದೆ ಎಂದು ಭರವಸೆ ನೀಡಿ, ಕುಟುಂಬ ಸದಸ್ಯರು ಹಾಗೂ ಗ್ರಾಮಸ್ಥರೊಂದಿಗೆ ಮಾತನಾಡಿದ ಅವರು, ಕರ್ತವ್ಯನಿಷ್ಠೆಯಿಂದ ಸೇವೆ ಸಲ್ಲಿಸಿದ್ದ ಸಚಿನ್ ವಿ. ಅವರ ಸೇವೆಯನ್ನು ಸ್ಮರಿಸಿ, ಅವರ ಅಗಲಿಕೆ ಪೊಲೀಸ್ ಇಲಾಖೆಗೆ ತುಂಬಲಾರದ ನಷ್ಟವಾಗಿದೆ ಎಂದು ಹೇಳಿದರು.
ಈ ವೇಳೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಮೂವರು ಆರ್‌ಎಸ್‌ಐ ಅಧಿಕಾರಿಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಮೌನಾಚರಣೆ ನಡೆಸಿ, ಮೃತ ಆತ್ಮಗಳಿಗೆ ಶಾಂತಿ ಸಿಗಲೆಂದು ಪ್ರಾರ್ಥಿಸಿದರು.
ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ Hosanagara Taluk Advocates Association extends…
ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ - ಆರೋಪಿ ಅರೆಸ್ಟ್! Sagar police arrested a man accused…
ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ Free 31-day mobile phone repair training for…
ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ Farmers and agricultural workers will hold a…
ಸಾಗರ: ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ; ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನೆ Farmers staged a massive protest…
ಇಂಡಿಯಾ ಪೋಸ್ಟ್‌ನಲ್ಲಿ 25,000ಕ್ಕೂ ಹೆಚ್ಚು ಹುದ್ದೆ: 10ನೇ ತರಗತಿ ಪಾಸಾದವರಿಗೆ ಅವಕಾಶ, ಪರೀಕ್ಷೆ ಇಲ್ಲದೆ ನೇಮಕಾತಿ India Post GDS…