ಭೀಕರ ರಸ್ತೆ ಅಪಘಾತ: ತೀರ್ಥಹಳ್ಳಿ ಮೂಲದ ಸಬ್ ಇನ್ಸ್ ಪೆಕ್ಟರ್ ಸೇರಿ ಮೂವರು ಸಾವು – ಸಾಗರ ಮೂಲದ ಸಿವಿಲ್ ಪಿಎಸ್‌ಐ ಸೇರಿ ಇಬ್ಬರಿಗೆ ಗಂಭೀರ ಗಾಯ

Three Reserve Police Sub-Inspectors, including one from Thirthahalli, died in a tragic car accident near Sanekere Gate in Chitradurga district after their car rammed into a moving lorry. Two other police officers, including one from Sagar, sustained serious injuries.

ಭೀಕರ ರಸ್ತೆ ಅಪಘಾತ: ತೀರ್ಥಹಳ್ಳಿ ಮೂಲದ ಎಸ್‌ಐ ಸೇರಿ ಮೂವರು ಸಾವು – ಸಾಗರ ಮೂಲದ ಸಿವಿಲ್ ಪಿಎಸ್‌ಐ ಸೇರಿ ಇಬ್ಬರಿಗೆ ಗಂಭೀರ ಗಾಯ

ಚಿತ್ರದುರ್ಗ, ಮಾ.15: ಚಲಿಸುತ್ತಿದ್ದ ಲಾರಿಗೆ ಕಾರು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಮೂವರು ರಿಸರ್ವ್ ಪೊಲೀಸ್ ಸಬ್ ಇನ್‌ಸ್ಪೆಕ್ಟರ್‌ಗಳು (ಆರ್‌ಎಸ್‌ಐ) ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿಬ್ಬರು ಪೊಲೀಸ್ ಅಧಿಕಾರಿಗಳು ಗಂಭೀರವಾಗಿ ಗಾಯಗೊಂಡಿರುವ ಭೀಕರ ರಸ್ತೆ ಅಪಘಾತ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಸಾಣೆಕೆರೆ ಗೇಟ್ ಸಮೀಪ ಭಾನುವಾರ ಬೆಳಿಗ್ಗೆ ಸಂಭವಿಸಿದೆ.

ಮೃತರನ್ನು ಕಾರಟಗಿ ಮೂಲದ ಮಂಜುನಾಥ್ ದಾರಿಮಣಿ (32), ರಾಯಚೂರಿನ ಅಂಬರೀಶ್ ಹಾಗೂ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕುಡುವಲ್ಕಿ ಗ್ರಾಮದ ಸಚಿನ್ ಎಂದು ಗುರುತಿಸಲಾಗಿದೆ. ಇವರು ಮೂವರೂ ಬೆಂಗಳೂರಿನ ರಿಸರ್ವ್ ಪೊಲೀಸ್ ಇಲಾಖೆಯಲ್ಲಿ ಸಬ್ ಇನ್‌ಸ್ಪೆಕ್ಟರ್‌ಗಳಾಗಿ ಸೇವೆ ಸಲ್ಲಿಸುತ್ತಿದ್ದರು.

ಮದುವೆ ಕಾರ್ಯಕ್ರಮಕ್ಕೆ ಹಾಜರಾಗುವ ಸಲುವಾಗಿ ಐವರು ಕಾರಿನಲ್ಲಿ ಬಳ್ಳಾರಿಗೆ ತೆರಳುತ್ತಿದ್ದ ವೇಳೆ ಮುಂಜಾನೆ ಸುಮಾರು 7.50ರ ವೇಳೆಗೆ ಶ್ರೀರಂಗಪಟ್ಟಣ–ಬೀದರ್ ರಾಷ್ಟ್ರೀಯ ಹೆದ್ದಾರಿಯ ಸಾಣೆಕೆರೆ ಗೇಟ್ ಬಳಿ ಈ ದುರ್ಘಟನೆ ಸಂಭವಿಸಿದೆ. ಚಲಿಸುತ್ತಿದ್ದ ಲಾರಿಗೆ ಕಾರು ಹಿಂದಿನಿಂದ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಲಾರಿ ಕೆಳಗೆ ಸಿಲುಕಿಕೊಂಡು ಕೆಲವು ದೂರ ಎಳೆದುಕೊಂಡು ಹೋಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಅಪಘಾತದ ತೀವ್ರತೆಯಿಂದ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಮಂಜುನಾಥ್ ದಾರಿಮಣಿ, ಅಂಬರೀಶ್ ಹಾಗೂ ಸಚಿನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಸಾಗರ ತಾಲೂಕಿನ ಹುರುಳಗಲ್ಲು ಗ್ರಾಮದ ಸಿವಿಲ್ ಪಿಎಸ್‌ಐ ಈಶ್ವರ್ ಹಾಗೂ ಬೆಂಗಳೂರು ಮೂಲದ ಆರ್‌ಎಸ್‌ಐ ಮಹಾಂತೇಶ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕಾರು ಭಾರೀ ಹಾನಿಗೊಳಗಾದ ಕಾರಣ ಮೃತದೇಹಗಳನ್ನು ಹೊರತೆಗೆಯಲು ಪೊಲೀಸರು ಸಾಕಷ್ಟು ಹರಸಾಹಸ ಪಡಬೇಕಾಯಿತು. ಘಟನೆ ಕುರಿತು ಮಾಹಿತಿ ತಿಳಿದ ತಕ್ಷಣ ಚಳ್ಳಕೆರೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಮಧ್ಯೆ ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಘಟನೆ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ. ಅಪಘಾತದ ಕುರಿತು ಮುಂದಿನ ತನಿಖೆ ಮುಂದುವರಿದಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ Kalluru Meghraj urges the Karnataka government…

17 hours ago

ಕುಡಿಯುವ ನೀರಿಗಾಗಿ ಬಾಳೂರು ಗ್ರಾಮಸ್ಥರ ಆಕ್ರೋಶ; ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆ

ಕುಡಿಯುವ ನೀರಿಗಾಗಿ ಬಾಳೂರು ಗ್ರಾಮಸ್ಥರ ಆಕ್ರೋಶ; ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆ Residents of Baluru and Kaleshwara villages…

17 hours ago

ಬಟಾಣಿಜಡ್ಡು, ತಮ್ಮಡಿಕೊಪ್ಪ ಭಾಗದಲ್ಲಿ ಆನೆಗಳ ಸಂಚಾರ – ತೋಟಗಳಿಗೆ ಹಾನಿ , ಜನರಿಗೆ ಅರಣ್ಯ ಇಲಾಖೆ ಎಚ್ಚರಿಕೆ

ಬಟಾಣಿಜಡ್ಡು, ತಮ್ಮಡಿಕೊಪ್ಪ ಭಾಗದಲ್ಲಿ ಆನೆಗಳ ಸಂಚಾರ – ತೋಟಗಳಿಗೆ ಹಾನಿ , ಜನರಿಗೆ ಅರಣ್ಯ ಇಲಾಖೆ ಎಚ್ಚರಿಕೆ Wild elephant…

17 hours ago

ಕಾರಿನಲ್ಲಿ ಗಾಂಜಾ ಮಾರಾಟ: ಇಬ್ಬರ ಬಂಧನ, 1.42 ಕೆಜಿ ಗಾಂಜಾ ಹಾಗೂ ಕಾರು ಜಪ್ತಿ

ಕಾರಿನಲ್ಲಿ ಗಾಂಜಾ ಮಾರಾಟ: ಇಬ್ಬರ ಬಂಧನ, 1.42 ಕೆಜಿ ಗಾಂಜಾ ಹಾಗೂ ಕಾರು ಜಪ್ತಿ Two people were arrested…

23 hours ago

ಎಣ್ಣೆ ಮತ್ತಿನಲ್ಲಿ ಅಪಾಯಕಾರಿ ಆಟೋ ಚಾಲನೆ: ಚಾಲಕನ ಬಂಧನ, ವಾಹನ ಪೊಲೀಸ್ ವಶಕ್ಕೆ

ಎಣ್ಣೆ ಮತ್ತಿನಲ್ಲಿ ಅಪಾಯಕಾರಿ ಆಟೋ ಚಾಲನೆ: ಚಾಲಕನ ಬಂಧನ, ವಾಹನ ಪೊಲೀಸ್ ವಶಕ್ಕೆ Shivamogga West Traffic Police registered…

23 hours ago

ಅರಸಾಳು ಬಳಿ ರೈಲ್ವೆ ಹಳಿಯ ಮೇಲೆ ಉರುಳಿದ ಮರ; ಮಾರ್ಗ ಮಧ್ಯೆ ನಿಂತ ತಾಳಗುಪ್ಪ-ಬೆಂಗಳೂರು ರೈಲು! ಪ್ರಯಾಣಿಕರ ಪರದಾಟ

ಅರಸಾಳು ಬಳಿ ರೈಲ್ವೆ ಹಳಿಯ ಮೇಲೆ ಉರುಳಿದ ಮರ; ಮಾರ್ಗ ಮಧ್ಯೆ ನಿಂತ ತಾಳಗುಪ್ಪ-ಬೆಂಗಳೂರು ರೈಲು! ಪ್ರಯಾಣಿಕರ ಪರದಾಟ The…

1 day ago