ನಾಯಿ ಅಡ್ಡ ಬಂದು ಬೈಕ್ ಅಪಘಾತ – ಯುವಕ ಸಾವು

A 35-year-old man from Kerehalli died after his bike skidded when a dog suddenly crossed the road near KEB office on Sagar Road in Ripponpet. He succumbed to injuries while being shifted for advanced treatment. A case has been registered at Ripponpet Police Station.

ರಿಪ್ಪನ್‌ಪೇಟೆ: ಇಲ್ಲಿನ ಸಾಗರ ರಸ್ತೆಯ ಕೆಇಬಿ ಕಚೇರಿ ಮುಂಭಾಗದಲ್ಲಿ ಬೈಕ್‌ಗೆ ನಾಯಿ ಅಡ್ಡ ಬಂದ ಪರಿಣಾಮ ನಿಯಂತ್ರಣ ತಪ್ಪಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟಿರುವ ದುರ್ಘಟನೆ ನಡೆದಿದೆ.

ಮೃತರನ್ನು ಕೆರೆಹಳ್ಳಿ ನಿವಾಸಿ ಮಂಜುನಾಥ್ (35) ಎಂದು ಗುರುತಿಸಲಾಗಿದೆ.

ಮಂಗಳವಾರ ರಾತ್ರಿ ಮನೆಗೆ ತೆರಳುತ್ತಿದ್ದ ವೇಳೆ ಸಾಗರ ರಸ್ತೆಯ ಕೆಇಬಿ ಮುಂಭಾಗದಲ್ಲಿ ಏಕಾಏಕಿ ನಾಯಿ ಅಡ್ಡ ಬಂದ ಪರಿಣಾಮ ಮಂಜುನಾಥ್ ಚಾಲನೆ ಮಾಡುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ಬಿದ್ದಿದೆ ಎಂದು ತಿಳಿದುಬಂದಿದೆ. ಅಪಘಾತದ ತೀವ್ರತೆಯಿಂದ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಸ್ಥಳೀಯರು ತಕ್ಷಣವೇ ರಿಪ್ಪನ್‌ಪೇಟೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಅಲ್ಲಿನ ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ರವಾನಿಸಿದ್ದರು. ಆದರೆ ತಲೆಗೆ ಗಂಭೀರ ಪೆಟ್ಟಾಗಿದ್ದರಿಂದ ಸ್ಥಿತಿ ಚಿಂತಾಜನಕವಾಗಿದ್ದ ಹಿನ್ನಲೆಯಲ್ಲಿ  ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಲು ಮೆಗ್ಗಾನ್ ವೈದ್ಯರು ಸಲಹೆ ನೀಡಿದ್ದರು. ಮಣಿಪಾಲ್‌ಗೆ ಕರೆದೊಯ್ಯುವಷ್ಟರಲ್ಲಿ ಮಂಜುನಾಥ್ ಅವರು ಪ್ರಾಣ ಕಳೆದುಕೊಂಡಿದ್ದಾರೆ.

ಮೃತದೇಹವನ್ನು ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ಮರಣೋತ್ತರ ಪರೀಕ್ಷೆಗೆ ಇರಿಸಲಾಗಿದೆ.

ಈ ಕುರಿತು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

3 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

23 hours ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

1 day ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

1 day ago

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…

2 days ago

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ​ಮಾನವೀಯತೆಯೆಂಬುದು ಕೇವಲ…

2 days ago