BMS ಪದವಿಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದ ಕೋಡೂರಿನ ಸಂಜನಾ ಎಸ್ ರಾವ್‌ – 5 ಚಿನ್ನದ ಪದಕ ಬಾಚಿಕೊಂಡ ಗ್ರಾಮೀಣ ಪ್ರತಿಭೆ

Dr. Sanjana S Rao from Koduru village in Hosanagara taluk secured State First Rank in BAMS under RGUHS and won 5 gold medals for outstanding academic performance.

ಹೊಸನಗರ: ಹೊಸನಗರ ತಾಲ್ಲೂಕಿನ ಕೋಡೂರು ಗ್ರಾಮದ ವಿದ್ಯಾರ್ಥಿನಿ ಡಾ. ಸಂಜನಾ ಎಸ್ ರಾವ್ ಅವರು ಬಿಎಎಂಎಸ್ ಪದವಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದು ವಿಶಿಷ್ಟ ಸಾಧನೆ ಮಾಡಿದ್ದಾರೆ.

ಕೊಪ್ಪ (ಚಿಕ್ಕಮಗಳೂರು)ದಲ್ಲಿರುವ ಆರೂರು ಲಕ್ಷ್ಮಿನಾರಾಯಣ ರಾವ್ ಸ್ಮಾರಕ ಆಯುರ್ವೇದ ಮಹಾವಿದ್ಯಾಲಯದ ವಿದ್ಯಾರ್ಥಿನಿಯಾಗಿರುವ ಸಂಜನಾ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಅಧೀನದಲ್ಲಿ ನಡೆದ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ತೋರಿದ್ದಾರೆ. ವಿವಿಧ ವಿಷಯಗಳಲ್ಲಿ ಉತ್ತಮ ಅಂಕಗಳನ್ನು ಗಳಿಸಿ ಒಟ್ಟು ಐದು ಚಿನ್ನದ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ಮೌಲಿಕ ಸಿದ್ಧಾಂತ ಮತ್ತು ಅಷ್ಟಾಂಗ ಹೃದಯ, ಚರಕ ಪೂರ್ವಾರ್ಧ ಹಾಗೂ ಶಲ್ಯತಂತ್ರ ವಿಷಯಗಳಲ್ಲಿ ಪ್ರಥಮ ರ‍್ಯಾಂಕ್ ಪಡೆದಿರುವ ಅವರು, ಕ್ರಿಯಾ ಶಾರೀರದಲ್ಲಿ ದ್ವಿತೀಯ ರ‍್ಯಾಂಕ್ ಪಡೆದಿದ್ದಾರೆ. ಸಂಸ್ಕೃತದಲ್ಲಿ ನಾಲ್ಕನೇ ರ‍್ಯಾಂಕ್, ದ್ರವ್ಯಗುಣಂನಲ್ಲಿ ಆರನೇ ರ‍್ಯಾಂಕ್ ಹಾಗೂ ರೋಗನಿದಾನ ಮತ್ತು ವಿಕೃತಿ ವಿಜ್ಞಾನದಲ್ಲಿ ಏಳನೇ ರ‍್ಯಾಂಕ್ ಗಳಿಸಿದ್ದಾರೆ.

ಶಶಿಧರ ಎಸ್ ರಾವ್ ಹಾಗೂ ದೀಪಾ ಎಸ್ ರಾವ್ ದಂಪತಿಗಳ ಪುತ್ರಿಯಾದ ಸಂಜನಾ, ಗ್ರಾಮೀಣ ಹಿನ್ನೆಲೆಯಿಂದ ಬಂದಿದ್ದರೂ ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿ ಊರು ಮತ್ತು ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ.

ಸಂಜನಾ ಅವರ ಸಾಧನೆಯನ್ನು ಕೋಡೂರು ಗ್ರಾಮದವರೇ ಆದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ ಜಿ ಚಂದ್ರಮೌಳಿ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಜ್ಯೋತಿ ಚಂದ್ರಮೌಳಿ ದಂಪತಿಗಳು ಅಭಿನಂದಿಸಿದ್ದಾರೆ.

ಡಾ. ಸಂಜನಾ ಎಸ್ ರಾವ್ ಅವರ ಈ ಅಪೂರ್ವ ಸಾಧನೆಗೆ ಪೋಸ್ಟ್ ಮ್ಯಾನ್ ನ್ಯೂಸ್ ಬಳಗದ ವತಿಯಿಂದ ಹಾರ್ದಿಕ ಅಭಿನಂದನೆಗಳು

ರಫ಼ಿ ರಿಪ್ಪನ್ ಪೇಟೆ

ನಮಸ್ಕಾರ, ನಾನು ರಫಿ ರಿಪ್ಪನ್‌ಪೇಟೆ. ​'ಪೋಸ್ಟ್‌ಮ್ಯಾನ್ ನ್ಯೂಸ್' ಮಾಧ್ಯಮದ ಹಿಂದಿರುವ ಓರ್ವ ಅಪ್ಪಟ ಸುದ್ದಿಪ್ರೇಮಿ ಹಾಗೂ ಪತ್ರಕರ್ತ. "ನಮ್ಮೂರ ಸುದ್ದಿಗಳು ಜಗತ್ತಿಗೆ ತಲುಪಬೇಕು" ಎಂಬ ಆರು ವರ್ಷಗಳ ಕನಸಿನ ಕೂಸೇ ಈ ನಮ್ಮ ಪೋಸ್ಟ್‌ಮ್ಯಾನ್ ನ್ಯೂಸ್. ​ಸ್ಥಳೀಯ ಪತ್ರಿಕೆಗಳಿಂದ ಹಿಡಿದು ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೂ ಮಾಧ್ಯಮದ ನಾನಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದು. ಆದರೆ, ಈ ಪಯಣದಲ್ಲಿ ನನಗೊಂದು ಕೊರತೆ ಸದಾ ಕಾಡುತ್ತಿತ್ತು; ಅದೇನೆಂದರೆ, 'ನಿಜವಾದ ಸ್ಥಳೀಯ ಧ್ವನಿಗೆ ಅಲ್ಲಿ ಸೂಕ್ತ ವೇದಿಕೆ ಇರಲಿಲ್ಲ'. ಆ ಶೂನ್ಯವನ್ನು ತುಂಬಲು ಹುಟ್ಟಿಕೊಂಡ ಪರ್ಯಾಯ ವೇದಿಕೆಯೇ “ಪೋಸ್ಟ್‌ಮ್ಯಾನ್ ನ್ಯೂಸ್.” ​ಇಲ್ಲಿ 'ಸುದ್ದಿ' ಎಂದರೆ ಕೇವಲ ಸುದ್ದಿ ಮಾತ್ರ. ಇದು ಯಾವ ವ್ಯಕ್ತಿ ಅಥವಾ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಅತ್ಯಂತ ಸ್ಪಷ್ಟ: "ಸುದ್ದಿಯನ್ನು ಪ್ರಾಮಾಣಿಕವಾಗಿ ಹೇಳಬೇಕು, ತೀರ್ಪು ಕೊಡುವ ಕೆಲಸ ನಮಗಲ್ಲ." ಕೆಲವೊಮ್ಮೆ ನಮ್ಮ ವರದಿಗಳಿಗೆ ಬರುವ ಪ್ರತಿಕ್ರಿಯೆಗಳು ಬೇರೆಯದೇ ಬಣ್ಣ ಪಡೆಯಬಹುದು, ಆದರೆ ಅದಕ್ಕೆ ನನ್ನ ಏಕೈಕ ಉತ್ತರ ಕೇವಲ ನನ್ನ ಕೆಲಸದ ಮೂಲಕ ಮಾತ್ರ. ​'ಪೋಸ್ಟ್‌ಮ್ಯಾನ್ ನ್ಯೂಸ್' ಇಂದು ಕೇವಲ ಒಂದು ಸುದ್ದಿ ಪುಟವಾಗಿ ಉಳಿದಿಲ್ಲ, ಅದೊಂದು ಜಾಗೃತಿಯ ಚಳವಳಿಯಾಗಿ ರೂಪುಗೊಳ್ಳುತ್ತಿದೆ. ಕೇವಲ ವರದಿ ಮಾಡುವುದಷ್ಟೇ ನಮ್ಮ ಉದ್ದೇಶವಲ್ಲ; ನಮ್ಮೂರಿನ ಘಟನೆಗಳು, ಎಲೆಮರೆಯ ಕಾಯಿಯಂತಿರುವ ಪ್ರತಿಭೆಗಳು, ಜ್ವಲಂತ ಸಮಸ್ಯೆಗಳು ಮತ್ತು ಸಾಧನೆಗಳನ್ನು ಹೊರಲೋಕಕ್ಕೆ ಪರಿಚಯಿಸುವ 'ಸೇತುವೆ'ಯಾಗಬೇಕೆಂಬುದು ನಮ್ಮ ಹೆಬ್ಬಯಕೆ. ಹಣ ಪಡೆದು, ಕಾಸಿಗಾಗಿ ಸುದ್ದಿ ಮಾಡುವ ಅಭ್ಯಾಸವೂ ನಮಗಿಲ್ಲ, ಆ ಹವ್ಯಾಸವೂ ನಮಗಿಲ್ಲ. ಸತ್ಯ ಮತ್ತು ನೈಜತೆಯೇ ನಮ್ಮ ಬಂಡವಾಳ. ​ನಮ್ಮ ಅಂತಿಮ ಗುರಿ ಒಂದೇ — "ಸಣ್ಣ ಊರುಗಳ ಸತ್ಯ ಕಥೆಗಳು, ಅತಿ ದೊಡ್ಡ ಮಟ್ಟದಲ್ಲಿ ಜಗತ್ತಿನ ಕಿವಿಗೆ ತಲುಪಬೇಕು." ​ತಮ್ಮ ಪ್ರೀತಿ ಮತ್ತು ಬೆಂಬಲ ಸದಾ ಹೀಗೆಯೇ ಇರಲಿ. ​ಸ್ನೇಹಪೂರ್ವಕವಾಗಿ, ರಫಿ ರಿಪ್ಪನ್‌ಪೇಟೆ ಸಂಪಾದಕರು, ಪೋಸ್ಟ್‌ಮ್ಯಾನ್ ನ್ಯೂಸ್ 🌐 [www.postmannewskannada.com]

Recent Posts

ಅತಿ ವೇಗದ ಬೈಕ್ ಚಾಲನೆಯಿಂದ ಪಾದಚಾರಿ ಸಾವು : ಬೈಕ್ ಸವಾರನಿಗೆ 1 ವರ್ಷಕ್ಕೂ ಹೆಚ್ಚು ಜೈಲು ಶಿಕ್ಷೆ

ಅತಿ ವೇಗದ ಬೈಕ್ ಚಾಲನೆಯಿಂದ ಪಾದಚಾರಿ ಸಾವು : ಬೈಕ್ ಸವಾರನಿಗೆ 1 ವರ್ಷಕ್ಕೂ ಹೆಚ್ಚು ಜೈಲು ಶಿಕ್ಷೆ Bhadravati…

9 hours ago

ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆಗೆ ಸಾವಿರಾರು ಅಭ್ಯರ್ಥಿಗಳು –  ವಸತಿ ಕೊರತೆಯಿಂದ ಬಸ್ ನಿಲ್ದಾಣದಲ್ಲೇ ವಿಶ್ರಾಂತಿ

ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆಗೆ ಸಾವಿರಾರು ಅಭ್ಯರ್ಥಿಗಳು –  ವಸತಿ ಕೊರತೆಯಿಂದ ಬಸ್ ನಿಲ್ದಾಣದಲ್ಲೇ ವಿಶ್ರಾಂತಿ KSRP Police Constable written…

10 hours ago

ಜಿಂಕೆ ಮಾಂಸ ದಾಸ್ತಾನು ಆರೋಪ: ಇಬ್ಬರ ಬಂಧನ

ಜಿಂಕೆ ಮಾಂಸ ದಾಸ್ತಾನು ಆರೋಪ: ಇಬ್ಬರ ಬಂಧನ Forest officials in Shivamogga taluk arrested two persons for…

10 hours ago

ಕಸ್ತೂರಿರಂಗನ್ ವರದಿ ಸಂವಾದ: ಮಲೆನಾಡಿನ ರೈತರಿಗೆ ಸಿಎಂ ಡಿ.ಕೆ. ಶಿವಕುಮಾರ್ ನೀಡಿದ ಭರವಸೆಗಳೇನು?

ಮಲೆನಾಡಿನ ರೈತರ ಜಮೀನಿಗೆ ಕೈಹಾಕಬೇಡಿ: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ ಕಸ್ತೂರಿರಂಗನ್ ವರದಿ ಸಂವಾದ: ಮಲೆನಾಡಿನ ರೈತರಿಗೆ ಸಿಎಂ ಡಿ.ಕೆ.…

2 days ago

ವಿಶ್ವಕರ್ಮ ಜಯಂತಿ ಕೌಶಲ, ಶ್ರಮ ಹಾಗೂ ಸೃಜನಶೀಲತೆಯ ಪ್ರತೀಕ: ಗಣೇಶ್ ಆಚಾರ್ಯ

ವಿಶ್ವಕರ್ಮ ಜಯಂತಿ ಕೌಶಲ, ಶ್ರಮ ಹಾಗೂ ಸೃಜನಶೀಲತೆಯ ಪ್ರತೀಕ: ಗಣೇಶ್ ಆಚಾರ್ಯ Vishwakarma Jayanti was celebrated by the…

2 days ago

ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ

ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ A fire caused by a…

2 days ago