A 35-year-old farmer, Satish from Brahmashwara in Hosanagara taluk of Shivamogga district, died on the spot after a huge rock slipped and fell on him while he was digging a pit in his farmland.
ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಕಲ್ಲು ಬಂಡೆ ಉರುಳಿ ವ್ಯಕ್ತಿ ಸಾವು
ಶಿವಮೊಗ್ಗ : ಹೊಸನಗರ ತಾಲ್ಲೂಕಿನ ಬ್ರಹ್ಮಶ್ವರ ಗ್ರಾಮದಲ್ಲಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ದೊಡ್ಡ ಕಲ್ಲು ಬಂಡೆ ಉರುಳಿಬಿದ್ದು ಕೃಷಿಕನೊಬ್ಬ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.
ಮೃತ ಕೃಷಿಕನನ್ನು ಬ್ರಹ್ಮಶ್ವರ ನಿವಾಸಿ ಸತೀಶ್ (35) ಎಂದು ಗುರುತಿಸಲಾಗಿದೆ.
ಲಭ್ಯವಿರುವ ಮಾಹಿತಿಯಂತೆ, ಸತೀಶ್ ಅವರು ಮಸಗಲಿ ಗ್ರಾಮದ ತಮ್ಮ ಜಮೀನಿನಲ್ಲಿ ತೋಟಕ್ಕೆ ನೀರಿನ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಗುಂಡಿ ತೆಗೆಯುವ ಕೆಲಸದಲ್ಲಿ ನಿರತರಾಗಿದ್ದರು. ಈ ವೇಳೆ ಜಮೀನಿನ ಮೇಲ್ಭಾಗದಲ್ಲಿದ್ದ ದೊಡ್ಡ ಗಾತ್ರದ ಕಲ್ಲು ಬಂಡೆಯೊಂದು ಏಕಾಏಕಿ ಜಾರಿ ಅವರ ಮೇಲೆ ಉರುಳಿಬಿದ್ದಿದೆ.
ಭಾರೀ ಗಾತ್ರದ ಕಲ್ಲು ಬಂಡೆಯ ಅಡಿಗೆ ಸಿಲುಕಿದ ಪರಿಣಾಮ ಸತೀಶ್ ಅವರಿಗೆ ಗಂಭೀರ ಗಾಯಗಳಾಗಿ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ತಿಳಿದ ತಕ್ಷಣ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಘಟನೆಯಿಂದ ಕುಟುಂಬದವರು ಹಾಗೂ ಗ್ರಾಮಸ್ಥರಲ್ಲಿ ಶೋಕ ಆವರಿಸಿದೆ.
ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ.
ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…
ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…
RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…
ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…
ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…
ಬಸ್-ಬೈಕ್ ಭೀಕರ ಅಪಘಾತ; 27 ವರ್ಷದ ಮೆಕ್ಯಾನಿಕ್ ಸ್ಥಳದಲ್ಲೇ ಸಾವು A 27-year-old mechanic was killed in a…