ಗರ್ತಿಕೆರೆಯಲ್ಲಿ ಮೂರು ದಿನಗಳ ಕ್ರಿಕೆಟ್ ಹಬ್ಬ: ರಾಜ್ಯಮಟ್ಟದ ಹೊನಲು ಬೆಳಕಿನ ಟೆನ್ನಿಸ್ ಬಾಲ್ ಪಂದ್ಯಾವಳಿ ನಾಳೆಯಿಂದ ಆರಂಭ

A three-day state-level floodlight tennis ball cricket tournament begins March 20, 2026, at Garthikere near Ripponpet, featuring top teams, cash prizes, live streaming, and cultural events.

ರಿಪ್ಪನ್‌ಪೇಟೆ ಸಮೀಪದ ಗರ್ತಿಕೆರೆಯಲ್ಲಿ ನಾಳೆಯಿಂದ ಮೂರು ದಿನಗಳ ಕಾಲ ರಾಜ್ಯಮಟ್ಟದ ಹೊನಲು ಬೆಳಕಿನ ಲೈಟ್ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಭರ್ಜರಿಯಾಗಿ ನಡೆಯಲಿದೆ.

ನಿಟ್ಟೂರು ಮಠದ ರೇಣುಕಾನಂದ ಮಹಾಸ್ವಾಮೀಜೀ ಅವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲ್ಪಟ್ಟಿರುವ ಈ ಕ್ರೀಡಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ಪೂರ್ಣಗೊಂಡಿದ್ದು, ಸ್ಥಳೀಯರಲ್ಲಿ ಹಾಗೂ ಕ್ರಿಕೆಟ್ ಅಭಿಮಾನಿಗಳಲ್ಲಿ ಭಾರಿ ಉತ್ಸಾಹ ಮೂಡಿಸಿದೆ.

ಮಾರ್ಚ್ 20, 21 ಮತ್ತು 22, 2026ರಂದು ನಡೆಯಲಿರುವ ಈ ಪಂದ್ಯಾವಳಿಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಹಲವಾರು ಶಕ್ತಿಶಾಲಿ ತಂಡಗಳು ಭಾಗವಹಿಸುವ ನಿರೀಕ್ಷೆಯಿದೆ. ಹೊನಲು ಬೆಳಕಿನಡಿಯಲ್ಲಿ ನಡೆಯುವ ಪಂದ್ಯಗಳು ಕ್ರೀಡಾಭಿಮಾನಿಗಳಿಗೆ ವಿಶಿಷ್ಟ ಅನುಭವ ನೀಡಲಿವೆ.

ಬಹುಮಾನಗಳ ವಿಭಾಗವೂ ಈ ಬಾರಿ ವಿಶೇಷವಾಗಿದ್ದು, ಪ್ರಥಮ ಬಹುಮಾನವಾಗಿ ರೂ. 3,00,000, ದ್ವಿತೀಯ ಬಹುಮಾನವಾಗಿ ರೂ. 1,50,000 ನಿಗದಿಪಡಿಸಲಾಗಿದೆ. ತೃತೀಯ ಹಾಗೂ ಚತುರ್ಥ ಸ್ಥಾನ ಪಡೆದ ತಂಡಗಳಿಗೆ ತಲಾ ರೂ. 30,000 ಬಹುಮಾನ ನೀಡಲಾಗುತ್ತದೆ. ಇದರ ಜೊತೆಗೆ ಮ್ಯಾನ್ ಆಫ್ ದಿ ಮ್ಯಾಚ್, ಬೆಸ್ಟ್ ಬ್ಯಾಟ್ಸ್‌ಮನ್, ಬೆಸ್ಟ್ ಬೌಲರ್ ಸೇರಿದಂತೆ ಹಲವು ವೈಯಕ್ತಿಕ ಪ್ರಶಸ್ತಿಗಳೂ ಇರಲಿವೆ.

ಕಾರ್ಯಕ್ರಮದ ಮೊದಲ ದಿನ ಬೆಳಿಗ್ಗೆ ನಿಟ್ಟೂರು ಶ್ರೀಗಳು ಕ್ರೀಡಾಕೂಟಕ್ಕೆ ಅಧಿಕೃತ ಚಾಲನೆ ನೀಡಲಿದ್ದಾರೆ. ಅದೇ ದಿನ ಸಂಜೆ 4ರಿಂದ 6ರವರೆಗೆ ಸ್ಯಾಕ್ಸೋಫೋನ್ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದ್ದು, ಬಳಿಕ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ನಡೆಯಲಿದೆ. ಇದೇ ಸಂದರ್ಭದಲ್ಲಿ ಶ್ರೀ ನಾರಾಯಣ ಗುರು ಕ್ರಿಕೆಟ್ ಕ್ರೀಡಾಂಗಣದ ನೂತನ ಫ್ಲಡ್ ಲೈಟ್ ವ್ಯವಸ್ಥೆಯ ಉದ್ಘಾಟನೆ ಕೂಡ ನೆರವೇರಲಿದೆ. ನಂತರ ಕ್ರಿಕೆಟ್ ಪಂದ್ಯಗಳು ಪ್ರಾರಂಭವಾಗಲಿವೆ.

ಪಂದ್ಯಾವಳಿಯ ಮತ್ತೊಂದು ವಿಶೇಷತೆ ಎಂದರೆ, ಆನ್‌ಲೈನ್ ಮೂಲಕ ಲೈವ್ ಸ್ಟ್ರೀಮಿಂಗ್ ವ್ಯವಸ್ಥೆ ಮಾಡಲಾಗಿದ್ದು, ದೂರದಲ್ಲಿರುವ ಕ್ರಿಕೆಟ್ ಪ್ರೇಮಿಗಳು ಕೂಡ ಪಂದ್ಯಗಳನ್ನು ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ.

ಮನರಂಜನೆ ಮತ್ತು ಸ್ಪರ್ಧಾತ್ಮಕ ಕ್ರೀಡೆಯ ಸೊಗಡನ್ನು ಒಟ್ಟುಗೂಡಿಸುವ ಈ ಮಹತ್ವದ ಕ್ರೀಡಾ ಉತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಿ ಯಶಸ್ವಿಗೊಳಿಸಬೇಕು ಎಂದು ಆಯೋಜಕರು ಮನವಿ ಮಾಡಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು Sagar Tahsildar Dr. Prathibha…

7 hours ago

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು Thieves broke…

8 hours ago

ಮನೆಯಲ್ಲಿ ಒಬ್ಬರೇ ಇದ್ದ ಮಹಿಳೆ ಮೇಲೆ ಹಲ್ಲೆ; ಬಂಗಾರದ ಸರ ಕಿತ್ತುಕೊಂಡು ದುಷ್ಕರ್ಮಿ ಪರಾರಿ

ಮನೆಯಲ್ಲಿ ಒಬ್ಬರೇ ಇದ್ದ ಮಹಿಳೆ ಮೇಲೆ ಹಲ್ಲೆ; ಬಂಗಾರದ ಸರ ಕಿತ್ತುಕೊಂಡು ದುಷ್ಕರ್ಮಿ ಪರಾರಿ A woman was allegedly…

8 hours ago

30 ವರ್ಷ 8 ತಿಂಗಳ ಸಾರ್ಥಕ ಸೇವೆಗೆ ವಿರಾಮ: ಬರುವೆ ಶಾಲೆಯ ಶಿಕ್ಷಕಿ ಅಂಬಿಕಾ ಸಿ. ಅವರಿಗೆ ಆತ್ಮೀಯ ಬೀಳ್ಕೊಡುಗೆ

30 ವರ್ಷ 8 ತಿಂಗಳ ಸಾರ್ಥಕ ಸೇವೆಗೆ ವಿರಾಮ: ಶಿಕ್ಷಕಿ ಅಂಬಿಕಾ ಸಿ. ಅವರಿಗೆ ಆತ್ಮೀಯ ಬೀಳ್ಕೊಡುಗೆ Teacher Ambika…

19 hours ago

ಹುಂಚ ಹೋಬಳಿ ಕಾಂಗ್ರೆಸ್ OBC ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ

ಹುಂಚ ಹೋಬಳಿ ಕಾಂಗ್ರೆಸ್ OBC ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ Ramesh H.B. has been appointed as the…

20 hours ago

ರಿಪ್ಪನ್‌ಪೇಟೆ, ಹರತಾಳು, ಗರ್ತಿಕೆರೆಯಲ್ಲಿ ರಾಯರ 355ನೇ ಆರಾಧನೆ; ಹರಿದು ಬಂದ ಭಕ್ತ ಸಾಗರ

ರಿಪ್ಪನ್‌ಪೇಟೆ, ಹರತಾಳು, ಗರ್ತಿಕೆರೆಯಲ್ಲಿ ರಾಯರ 355ನೇ ಆರಾಧನೆ; ಹರಿದು ಬಂದ ಭಕ್ತ ಸಾಗರ Thousands of devotees participated in…

21 hours ago