ಮಾಜಿ ಸಚಿವ ಹರತಾಳು ಹಾಲಪ್ಪ ಹುಟ್ಟುಹಬ್ಬ – ಹೊಸನಗರದಲ್ಲಿ  ಸಮಾಜ ಸೇವಾ ಕಾರ್ಯದೊಂದಿಗೆ ಆಚರಣೆ | ರಿಪ್ಪನ್‌ಪೇಟೆಯಲ್ಲಿ ವಿಶೇಷ ಪೂಜೆ

An article on the 64th birthday of former Karnataka minister Haratalu Halappa, highlighting his political journey, struggles, achievements, and contributions to the development of the Malnad region and Shivamogga district.

ಮಾಜಿ ಸಚಿವ ಹರತಾಳು ಹಾಲಪ್ಪ ಹುಟ್ಟುಹಬ್ಬ – ಹೊಸನಗರದಲ್ಲಿ  ಸಮಾಜ ಸೇವ ಕಾರ್ಯದೊಂದಿಗೆ ಆಚರಣೆ | ರಿಪ್ಪನ್‌ಪೇಟೆಯಲ್ಲಿ ವಿಶೇಷ ಪೂಜೆ

ಹೊಸನಗರ: ಮಾಜಿ ಸಚಿವ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪನವರ ಹುಟ್ಟುಹಬ್ಬವನ್ನು ಬಿಜೆಪಿ ಮಂಡಲ ವಿವಿಧ ಸಮಾಜ ಸೇವ ಕಾರ್ಯಗಳೊಂದಿಗೆ ಇಂದು ಆಚರಿಸಿತು.

ಈ ನಿಮಿತ್ತ ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆಯನ್ನ ಸಲ್ಲಿಸಿದ ಅನಂತರ ಹೊಸನಗರ ಸರ್ಕಾರಿ ಆಸ್ಪತ್ರೆಯಲ್ಲಿ ಒಳ ರೋಗಿಗಳಿಗೆ ಹಣ್ಣು ಹಂಪಲುಗಳನ್ನು ವಿತರಿಸಿ ಬಳಿಕ ಪಟ್ಟಣದಲ್ಲಿರುವ ಸೇವಾ ಭಾರತಿ ಗೋಶಾಲೆಗೆ ಹಾಗೂ ರಾಮಚಂದ್ರ ಪುರ ಮಠದ ಗೋಶಾಲೆ ಮೇವುಗಳನ್ನ ನೀಡಿ ಮಾಜಿ ಶಾಸಕರ ಹುಟ್ಟು ಹಬ್ಬವನ್ನು ತಾಲೂಕು ಬಿಜೆಪಿ ಮಂಡಲ ಅರ್ಥಪೂರ್ಣ ವಾಗಿ ಆಚರಿಸಿತು.

ಈ ಸಂದರ್ಭದಲ್ಲಿ ಮುಖಂಡರಾದ ಉಮೇಶ್ ಕಂಚಿಗಾರ್, ಶ್ರೀಪತಿ ರಾವ್ ಏ ವಿ ಮಲ್ಲಿಕಾರ್ಜುನ್ ಮಾಜಿ ಪಟ್ಟಣ ಪಂಚಾಯತ್ ಅಧ್ಯಕ್ಷ ಹಾಲಗದ್ದೆ ಉಮೇಶ್, ಮೋಹನ್ ಮಂಡಾನಿ,ಮನೋದರ್, ಬಸವರಾಜ್, ಮನೋಜ್, ಗಣೇಶ್,ಸತೀಶ್, ಅಭಿಲಾಶ್ ಚಿಕ್ಕಮಣತಿ, ಮುಂತಾದವರು ಉಪಸ್ಥಿತರಿದ್ದರು.

ರಿಪ್ಪನ್‌ಪೇಟೆಯಲ್ಲಿ ಮಾಜಿ ಸಚಿವ ಹರತಾಳು ಹಾಲಪ್ಪ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ

ರಿಪ್ಪನ್‌ಪೇಟೆ : ಮಾಜಿ ಸಚಿವ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಹರತಾಳು ಹಾಲಪ್ಪ ರವರ ಹುಟ್ಟುಹಬ್ಬದ ಅಂಗವಾಗಿ ಅವರ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಪಟ್ಟಣದ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಿದರು.

ಈ ಸಂಧರ್ಭದಲ್ಲಿ ಹೊಸನಗರ ತಾಲೂಕ್ ಬಿಜೆಪಿ ಅಧ್ಯಕ್ಷ ಸತೀಶ್ , ರಿಪ್ಪನ್‌ಪೇಟೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸುಂದರೇಶ್ ,ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ್ , ಪ್ರಮುಖರಾದ ಮಂಜುಳಾ ಕೆ ರಾವ್ , ಎಂ ಬಿ ಮಂಜುನಾಥ್ , ಸುರೇಶ್ ಸಿಂಗ್ ,ರಾಮಚಂದ್ರ ಬಳೆಗಾರ್ , ಸುಧೀರ್ ಪಿ , ಮುರುಳಿ ಕೆರೆಹಳ್ಳಿ , ಪಿ ರಮೇಶ್ , ರಾಮಚಂದ್ರ ಕೆರೆಹಳ್ಳಿ , ರೇಖಾ ರವಿ , ದಾನಮ್ಮ  ಹಾಗೂ ಕೇತಾರ್ಜಿ ರಾವ್ ಇದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

12 hours ago

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…

12 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

18 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

2 days ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

2 days ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

2 days ago