Three students selected for Navodaya Vidyalaya after attending the free coaching camp organized by Hombuja Navodaya and Morarji training center, marking a proud achievement for the institution.
ರಿಪ್ಪನ್ ಪೇಟೆ : ಇಲ್ಲಿನ ಹೊಂಬುಜದಲ್ಲಿ ಪ್ರತೀವರ್ಷದಂತೆ ಈ ವರ್ಷವೂ ನವೋದಯ ವಿದ್ಯಾರ್ಥಿಗಳ ಮಿಲನ ಅಸೋಸಿಯೇಷನ್ ಮತ್ತು ಹುಂಚ ಯುವ ಬಳಗ ಸಂಸ್ಥೆಯಿಂದ ನಡೆದ ನವೋದಯ ಮತ್ತು ಮೊರಾರ್ಜಿ ಶಾಲಾ ಪ್ರವೇಶ ಪರೀಕ್ಷಾ ಉಚಿತ ತರಬೇತಿ ಶಿಬಿರದಿಂದ ತಾಲ್ಲೂಕಿನ ಮೂವರು ಮಕ್ಕಳು ಗಾಜನೂರಿನ ನವೋದಯ ಶಾಲೆಗೆ ಆಯ್ಕೆಯಾಗಿದ್ದಾರೆ.
ಹೊಂಬುಜದಲ್ಲಿ ನಡೆದ ಶಿಬಿರದಲ್ಲಿ ತರಬೇತಿ ಪಡೆದಿದ್ದ ಸುಧನ್ವ ಎಸ್, ಆರಾಧ್ಯ ಕೆ ಪಿ, ಹಾಗೂ ಮೈತ್ರಿ ಎಸ್. ಎನ್ 6ನೇ ತರಗತಿಯ ಪ್ರವೇಶಕ್ಕೆ ನವೋದಯ ಪರೀಕ್ಷೆಯನ್ನು ಬರೆದಿದ್ದು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಉಚಿತ ಶಿಬಿರದ ಪ್ರಯೋಜನ ಪಡೆದುಕೊಂಡು ನವೋದಯ ಶಾಲೆಗೆ ಪ್ರವೇಶ ಪಡೆದಿರುವ ಮಕ್ಕಳನ್ನು ಅಭಿನಂದಿಸಿ ಮಾತನಾಡಿದ ಈ ಶಿಬಿರದ ಸಂಸ್ಥಾಪಕರಾದ, ಹಳೆ ನವೋದಯ ವಿದ್ಯಾರ್ಥಿಯಾದ ಪ್ರಕಾಶ್ ಜೋಯ್ಸ್ ಅವರು, ಈ ಶಿಬಿರ, ಕರ್ನಾಟಕ ರಾಜ್ಯದಲ್ಲಿ ಮೊದಲ ನೂತನ ಪ್ರಯೋಗವಾಗಿದ್ದು, ಉತ್ತಮ ಶಿಕ್ಷಣ ಬಯಸುವ ಗ್ರಾಮೀಣ ಮಕ್ಕಳಿಗೆ ಉಚಿತವಾಗಿ ಸಿಗುವ ಸೌಲಭ್ಯ ಕಲ್ಪಿಸುವ ಒಂದು ವೇದಿಕೆಯಾಗಿದೆ. ಈ ಯಶಸ್ಸಿಗೆ ಕಾರಣೀಕರ್ತರಾದ ಶಿಬಿರದ ಶಿಕ್ಷಕ ವೃಂದಕ್ಕೆ, ಸಂಚಾಲಕರಿಗೆ, ಪೋಷಕರಿಗೆ ಮತ್ತು ಮಕ್ಕಳಿಗೆ ಶುಭಾಶಯ ತಿಳಿಸುವುದಾಗಿ ಹೇಳಿದರು.
ಜೊತೆಗೆ ಈ ಮಕ್ಕಳ ಯಶಸ್ಸು, ಸಾಧನೆಯನ್ನು, ಶಿಬಿರದ ಪ್ರತಿ ಕಾರ್ಯದ ಜೊತೆಗೆ ನಿಂತು, ಎಲ್ಲರನ್ನು ಪ್ರೇರೇಪಿಸಿ, ಆಶೀರ್ವದಿಸಿದ ಹುಂಚ ಕ್ಷೇತ್ರದ ಪರಮ ಪೂಜ್ಯ ಗುರುಗಳಾದ ಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿಯವರ ಚರಣಕ್ಕೆ ಸಮರ್ಪಿಸುವುದಾಗಿ ತಿಳಿಸಿದರು.
ಚಾಲಕನ ನಿಯಂತ್ರಣ ತಪ್ಪಿ ಕೆರೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ - ತಪ್ಪಿದ ಭಾರಿ ಅನಾಹುತ Private bus…
ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆಗೆ ಚಾಲನೆ - ಮಳೆಯಲ್ಲೂ ಮುಂದುವರಿದ ಪಾದಯಾತ್ರೆ MLA Belur Gopalakrishna and RM Manjunath…
ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ Hosanagara Taluk Advocates Association extends…
ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ - ಆರೋಪಿ ಅರೆಸ್ಟ್! Sagar police arrested a man accused…
ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ Free 31-day mobile phone repair training for…
ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ Farmers and agricultural workers will hold a…