ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಗೋಕಾಕ್ ಮಾದರಿ ಚಳುವಳಿ: ಏಪ್ರಿಲ್ 6ರಂದು ಬೃಹತ್ ಪಾದಯಾತ್ರೆ

ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಗೋಕಾಕ್ ಮಾದರಿ ಚಳುವಳಿ: ಏಪ್ರಿಲ್ 6ರಂದು ಬೃಹತ್ ಪಾದಯಾತ್ರೆ

A preparatory meeting held at Ripponpet announced a massive padayatra on April 6 demanding the restoration of the Hosanagara Assembly constituency, with support from political leaders and religious heads.

ರಿಪ್ಪನ್‌ಪೇಟೆ: ಈ ಹಿಂದೆ ಇದ್ದ ಹೊಸನಗರ ವಿಧಾನಸಭಾ ಕ್ಷೇತ್ರವನ್ನು ಮರುಸ್ಥಾಪನೆ ಮಾಡುವ ಮೂಲಕ ಹಿಂದುಳಿದಿರುವ ಈ ತಾಲ್ಲೂಕಿನ ಅಭಿವೃದ್ಧಿಗೆ ವೇಗ ನೀಡಬೇಕೆಂಬ ಉದ್ದೇಶದಿಂದ ಗೋಕಾಕ್ ಮಾದರಿಯ ಚಳುವಳಿ ಆರಂಭಿಸಲು ನಿರ್ಧರಿಸಲಾಗಿದೆ. ಸರ್ಕಾರದ ಗಮನ ಸೆಳೆಯುವ ನಿಟ್ಟಿನಲ್ಲಿ ಏಪ್ರಿಲ್ 6ರಂದು ನಗರದಿಂದ ಬೃಹತ್ ಪ್ರಮಾಣದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಮ.ನಿ.ಪ್ರ. ಅಭಿನವ ಚನ್ನಬಸವ ಮಹಾಸ್ವಾಮೀಜಿ ತಿಳಿಸಿದ್ದಾರೆ.

ರಿಪ್ಪನ್‌ಪೇಟೆಯ ಶ್ರೀರಾಮ ಮಂದಿರದಲ್ಲಿ ನಡೆದ ಹೋರಾಟದ ಪೂರ್ವಭಾವಿ ಸಭೆಯಲ್ಲಿ ದಿವ್ಯಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು, ಈ ಹಿಂದೆ ಹೊಸನಗರ ವಿಧಾನಸಭಾ ಕ್ಷೇತ್ರವನ್ನು ವಿಂಗಡಿಸಿ ಸಾಗರ ಮತ್ತು ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರಗಳಿಗೆ ಹರಿದು ಹಂಚಲಾಗಿದೆ. ಇದರ ಪರಿಣಾಮವಾಗಿ ಕ್ಷೇತ್ರವು ಜನನಾಯಕನಿಲ್ಲದಂತಾಗಿ ಅಭಿವೃದ್ಧಿಯಲ್ಲಿ ಹಿಂದುಳಿದಿದೆ ಎಂದು ಹೇಳಿದರು.

ಹೊಸನಗರ, ಕೊಡಚಾದ್ರಿ, ರಾಮಚಂದ್ರಪುರ ನಗರ ಕೋಟೆ ಸೇರಿದಂತೆ ಹಲವು ಪ್ರವಾಸಿ ಪ್ರೇಕ್ಷಣೀಯ ಸ್ಥಳಗಳನ್ನು ಒಳಗೊಂಡಿರುವ ಈ ಭಾಗದ ಸರ್ವಾಂಗೀಣ ಅಭಿವೃದ್ಧಿಗೆ ಪ್ರತ್ಯೇಕ ವಿಧಾನಸಭಾ ಕ್ಷೇತ್ರ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಸರ್ಕಾರದ ಗಮನ ಸೆಳೆಯಲು ಪಾದಯಾತ್ರೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಈ ವಿಷಯದ ಕುರಿತು ಈಗಾಗಲೇ ಮಾಜಿ ಶಾಸಕ ಬಿ. ಸ್ವಾಮಿರಾವ್, ಡಾ. ನಾರಾಯಣಪ್ಪ, ಕಿಮ್ಮನೆ ರತ್ನಾಕರ, ಹರತಾಳು ಹಾಲಪ್ಪ, ಕಲಗೋಡು ರತ್ನಾಕರ್, ಬಂಡಿ ರಾಮಚಂದ್ರ ಸೇರಿದಂತೆ ಪಕ್ಷಾತೀತವಾಗಿ ಸರ್ವರ ನೇತೃತ್ವದಲ್ಲಿ ಮೂರು–ನಾಲ್ಕು ಸಭೆಗಳು ನಡೆದಿದ್ದು, ಕ್ಷೇತ್ರದ ಉಳಿವಿಗಾಗಿ ಸಂಪೂರ್ಣ ಬೆಂಬಲ ವ್ಯಕ್ತವಾಗಿದೆ. ಹಾಲಿ ಶಾಸಕರಾದ ಗೋಪಾಲಕೃಷ್ಣ ಬೇಳೂರು ಮತ್ತು ಆರಗ ಜ್ಞಾನೇಂದ್ರ ಸಹ ಹೋರಾಟಕ್ಕೆ ಸಹಕಾರ ನೀಡುತ್ತಿದ್ದಾರೆ. ಹೋರಾಟದ ಸ್ವರೂಪದ ಕುರಿತು ಸಾರ್ವಜನಿಕರ ಸಲಹೆ ಸೂಚನೆಗಳನ್ನೂ ಸಭೆಯಲ್ಲಿ ಬಹಿರಂಗವಾಗಿ ಚರ್ಚಿಸಲಾಯಿತು.

ಚರ್ಚೆಯಲ್ಲಿ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಅರ್.ಎ. ಚಾಬುಸಾಬ್, ಆರ್.ಎನ್. ಮಂಜುನಾಥ್, ಆನಂದ್ ಮೆಣಸೆ, ಸುರೇಶ್ ಸಿಂಗ್ ಸೇರಿದಂತೆ ಹಲವರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

ಮಾಜಿ ಶಾಸಕ ಬಿ. ಸ್ವಾಮಿರಾವ್ ಮಾತನಾಡಿ, “ನಾನು ಎಂ.ಎಲ್.ಎ ಸ್ಪರ್ಧೆಗಾಗಿ ಈ ಹೋರಾಟ ಮಾಡುತ್ತಿಲ್ಲ. ನಮ್ಮ ಮುಂದಿನ ಯುವಜನಾಂಗದ ಭವಿಷ್ಯ ಹಾಗೂ ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಈ ಹೋರಾಟಕ್ಕೆ ನೇತೃತ್ವ ವಹಿಸಿದ್ದೇನೆ. ಈ ಪಾದಯಾತ್ರೆಯಲ್ಲಿ ಗಂಟೆ, ಜಾಗಟೆ, ಶಂಖ, ಕಹಳೆ, ಭಜನೆ, ಡೊಳ್ಳು, ವೀರಗಾಸೆ ತಂಡಗಳು ಭಾಗವಹಿಸಲಿವೆ. ಮಹಿಳೆಯರು, ಮಕ್ಕಳು ಸೇರಿದಂತೆ ತಾಲ್ಲೂಕಿನ ಪ್ರತಿಯೊಂದು ಮನೆಯವರೂ ಪಾದಯಾತ್ರೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸರ್ಕಾರದ ಗಮನ ಸೆಳೆಯಬೇಕು. ಸಂಘಟನೆಯನ್ನು ಬಲಪಡಿಸುವ ಮೂಲಕ ಕಿಚ್ಚಿನ ಕ್ರಾಂತಿಯನ್ನು ರೂಪಿಸೋಣ” ಎಂದು ಕರೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತ್ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ಬಿಜೆಪಿಯ ಮುಖಂಡ ಎನ್.ಆರ್. ದೇವಾನಂದ, ಜಿಲ್ಲಾ ಪಂಚಾಯಿತ್ ಮಾಜಿ ಸದಸ್ಯ ಬಂಡಿ ರಾಮಚಂದ್ರ, ಸಾಮಾಜಿಕ ಕಾರ್ಯಕರ್ತ ಟಿ.ಆರ್. ಕೃಷ್ಣಪ್ಪ, ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರುಮೌಳಿಗೌಡರು, ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷ ಎನ್. ಸತೀಶ್, ಜೆಡಿಎಸ್ ತಾಲೂಕು ಅಧ್ಯಕ್ಷ ಎನ್. ವರ್ತೇಶ್, ತಾಲೂಕು ಪಂಚಾಯಿತ್ ಮಾಜಿ ಅಧ್ಯಕ್ಷ ವೀರೇಶ್ ಅಲುವಳ್ಳಿ, ಎಂ. ಸುರೇಶ್ ಸಿಂಗ್ ಸೇರಿದಂತೆ ಹಲವು ಮುಖಂಡರು ಪಾಲ್ಗೊಂಡು ಪಾದಯಾತ್ರೆಗೆ ಬೆಂಬಲ ವ್ಯಕ್ತಪಡಿಸುವ ಭರವಸೆ ನೀಡಿದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

13 hours ago

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…

13 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

19 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

2 days ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

2 days ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

2 days ago