H.S. Nagaraj, writer Ambrayyamat and Sahakari Ratna awardee M.M. Paramesh were honored at the 20th District Kannada Sahitya Sammelana held in Shivamogga for their contributions to journalism, literature and the cooperative sector.
ಹೊಸನಗರ: ಸಾಹಿತ್ಯ, ಪತ್ರಿಕೋದ್ಯಮ ಮತ್ತು ಸಹಕಾರಿ ಕ್ಷೇತ್ರಗಳಲ್ಲಿ ವಿಶಿಷ್ಟ ಸೇವೆ ಸಲ್ಲಿಸಿರುವ ಹೊಸನಗರ ತಾಲ್ಲೂಕಿನ ಮೂವರು ಗಣ್ಯರನ್ನು ಶಿವಮೊಗ್ಗದಲ್ಲಿ ನಡೆದ ಜಿಲ್ಲಾ ಮಟ್ಟದ 20ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಶಿವಮೊಗ್ಗದ ಸಾಹಿತ್ಯ ಭವನದಲ್ಲಿ ಶನಿವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ಹೊಸನಗರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷ ಹೆಚ್.ಎಸ್. ನಾಗರಾಜ್, ಖ್ಯಾತ ಸಾಹಿತಿ ಅಂಬ್ರಯ್ಯಮಠ, ಹಾಗೂ ಸಹಕಾರಿ ಕ್ಷೇತ್ರದ ಗಣ್ಯರಾದ ಸಹಕಾರಿ ರತ್ನ ಪ್ರಶಸ್ತಿ ಪುರಸ್ಕೃತ ಎಂ.ಎಂ. ಪರಮೇಶ್ ಅವರನ್ನು ಅದ್ದೂರಿಯಾಗಿ ಸನ್ಮಾನಿಸಿ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.
ಸಾಹಿತ್ಯ ಕ್ಷೇತ್ರದಲ್ಲಿ ತಮ್ಮ ಕೃತಿಗಳ ಮೂಲಕ ಹೆಸರು ಗಳಿಸಿ ಹೊಸನಗರ ತಾಲ್ಲೂಕಿಗೆ ಕೀರ್ತಿ ತಂದಿರುವ ಅಂಬ್ರಯ್ಯಮಠ, ಸುಮಾರು 35 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸುತ್ತಾ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿರುವ ಹೆಚ್.ಎಸ್. ನಾಗರಾಜ್, ಹಾಗೂ ರಿಪ್ಪನ್‌ಪೇಟೆ ಭಾಗದಲ್ಲಿ ಬಡವರ ಕಷ್ಟ–ಸುಖಗಳಿಗೆ ಕೈಜೋಡಿಸುವುದರ ಜೊತೆಗೆ ಸಹಕಾರಿ ಕ್ಷೇತ್ರದಲ್ಲಿ ಮೂರು ದಶಕಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿರುವ ಎಂ.ಎಂ. ಪರಮೇಶ್ ಅವರ ಸೇವೆಯನ್ನು ಈ ಸಂದರ್ಭದಲ್ಲಿ ಪ್ರಶಂಸಿಸಲಾಯಿತು.
ಅಭಿನಂದನೆ :
ಹೊಸನಗರ ತಾಲ್ಲೂಕಿನಲ್ಲಿ ಅವರವರ ಕ್ಷೇತ್ರದಲ್ಲಿ ಮೂರು ಜನರು ತಮ್ಮದೇ ಆದ ಛಾಪು ಮೂಡಿಸಿದ್ದಾರೆ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಸಂಘ ಹಾಗೂ ಹೊಸನಗರ ಕನ್ನಡ ಸಾಹಿತ್ಯ ಪರಿಷತ್ ಈ ಮೂವರ ಆಯ್ಕೆ ಸಂತೋಷ ತಂದಿದೆ ಎಂದು ಕೊಡಚಾದ್ರಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರು ಹಾಗೂ ನಿಕಟ ಪೂರ್ವ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಾರ್ಷಲ್ ಶರಾಂ, ಕೋಟೆಗಾರ್ ವಿದ್ಯಾವರ್ಧಕ ಸಂಘದ ಅಧ್ಯಕ್ಷರ ಶಶಿಧರ್‌ನಾಯ್ಕ್, ರಿಪ್ಪನ್‌ಪೇಟೆ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಎಂ.ಬಿ. ಲಕ್ಷ್ಮಣಗೌಡ, ಹೊಸನಗರದ ವರ್ತಕರ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಶ್ರೀನಿವಾಸ್ ಕಾಮತ್ ಹಾಗೂ ಪತ್ರಬರಹಗಾರರ ಸಂಘದ ಅಧ್ಯಕ್ಷರಾದ ಎನ್ ಶ್ರೀಧರ ಉಡುಪ, ಎನ್ ದತ್ತಾತ್ರೇಯ ಉಡುಪ, ವರ್ತಕರ ಸಂಘದ ಅಧ್ಯಕ್ಷ ಪೂರ್ಣೇಶ್, ನಿಕಟ ಪೂರ್ವ ಅಧ್ಯಕ್ಷ ವಿಜೇಂದ್ರ ಶೇಟ್, ಬಿ.ಎಸ್. ಸುರೇಶ್, ಹೇಳಿದ್ದು ಇಂತಹ ನಿಷ್ಠಾವಂತರ ಆಯ್ಕೆ ಮಾಡುವುದರಿಂದ ಕನ್ನಡ ಸಾಹಿತ್ಯ ಪರಿಷತ್ ಉತ್ತಂಗಕ್ಕೆ ಎರಲಿದೆ.
ಕೃತಜ್ಞತೆಗಳು:
ಜಿಲ್ಲಾ ಮಟ್ಟದ ಸಾಹಿತ್ಯ ಸಮ್ಮೇಳನದಲ್ಲಿ ನಾಡು-ನುಡಿ ಸೇವೆಗಾಗಿ ಹೊಸನಗರ ತಾಲ್ಲೂಕಿನ ಸಾಹಿತಿ ಅಂಬ್ರಯ್ಯಮಠ, ಪತ್ರಕರ್ತ ಹೆಚ್.ಎಸ್. ನಾಗರಾಜ್ ಸಹಕಾರಿ ರತ್ನ ಎಂ.ಎಂ. ಪರಮೇಶ್‌ರವರಿಗೆ ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ. ಮಂಜುನಾಥ್ ಹಾಗೂ ಸಂಘದ ಎಲ್ಲ ಸಮಿತಿಯವರಿಗೆ ಹಾಗೂ ಹೊಸನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಗರಕೊಡಿಗೆ ಗಣೇಶ್‌ಮೂರ್ತಿ ಪ್ರಧಾನ ಕಾರ್ಯದರ್ಶಿ ಕೆ.ಜಿ. ನಾಗೇಶ್ ಹಾಗೂ ಎಲ್ಲ ನಿರ್ದೇಶಕ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ Kalluru Meghraj urges the Karnataka government…
ಕುಡಿಯುವ ನೀರಿಗಾಗಿ ಬಾಳೂರು ಗ್ರಾಮಸ್ಥರ ಆಕ್ರೋಶ; ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆ Residents of Baluru and Kaleshwara villages…
ಬಟಾಣಿಜಡ್ಡು, ತಮ್ಮಡಿಕೊಪ್ಪ ಭಾಗದಲ್ಲಿ ಆನೆಗಳ ಸಂಚಾರ – ತೋಟಗಳಿಗೆ ಹಾನಿ , ಜನರಿಗೆ ಅರಣ್ಯ ಇಲಾಖೆ ಎಚ್ಚರಿಕೆ Wild elephant…
ಕಾರಿನಲ್ಲಿ ಗಾಂಜಾ ಮಾರಾಟ: ಇಬ್ಬರ ಬಂಧನ, 1.42 ಕೆಜಿ ಗಾಂಜಾ ಹಾಗೂ ಕಾರು ಜಪ್ತಿ Two people were arrested…
ಎಣ್ಣೆ ಮತ್ತಿನಲ್ಲಿ ಅಪಾಯಕಾರಿ ಆಟೋ ಚಾಲನೆ: ಚಾಲಕನ ಬಂಧನ, ವಾಹನ ಪೊಲೀಸ್ ವಶಕ್ಕೆ Shivamogga West Traffic Police registered…
ಅರಸಾಳು ಬಳಿ ರೈಲ್ವೆ ಹಳಿಯ ಮೇಲೆ ಉರುಳಿದ ಮರ; ಮಾರ್ಗ ಮಧ್ಯೆ ನಿಂತ ತಾಳಗುಪ್ಪ-ಬೆಂಗಳೂರು ರೈಲು! ಪ್ರಯಾಣಿಕರ ಪರದಾಟ The…