ಪಾರದರ್ಶಕವಾಗಿ ನೆರವೇರಿದ ಕಲಾ ಕೌಸ್ತುಭ ಸಂಘದ ಲಕ್ಕಿ ಡ್ರಾ

Kala Kaustubha Kannada Sangha successfully conducted a transparent lucky draw event in Rippon Pete as part of its 32nd Kannada Rajyotsava celebrations, earning public trust and appreciation.

ರಿಪ್ಪನ್ ಪೇಟೆ : ಪಟ್ಟಣದ ಕಲಾ ಕೌಸ್ತುಭ ಕನ್ನಡ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಲಕ್ಕಿ ಡ್ರಾ ಕಾರ್ಯಕ್ರಮವು ವಿನಾಯಕ ವೃತ್ತದಲ್ಲಿ ಸಾರ್ವಜನಿಕರ ಸಮ್ಮುಖದಲ್ಲಿ ಯಶಸ್ವಿಯಾಗಿ ನೆರವೇರಿತು.

ಸಂಘದ 32ನೇ ವರ್ಷದ ಕನ್ನಡ ರಾಜ್ಯೋತ್ಸವ ಆಚರಣೆಯ ಅಂಗವಾಗಿ ಈ ಲಕ್ಕಿ ಡ್ರಾ ಯೋಜನೆಯನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜನರ ಸಮ್ಮುಖದಲ್ಲಿ ಪಾರದರ್ಶಕವಾಗಿ ಡ್ರಾ ಪ್ರಕ್ರಿಯೆ ನಡೆಸಲಾಯಿತು.

ಲಕ್ಕಿ ಡ್ರಾದ ಪ್ರಥಮ ಬಹುಮಾನವಾದ ಎಲೆಕ್ಟ್ರಿಕ್ ಬೈಕ್ (ಟಿಕೆಟ್ ಸಂಖ್ಯೆ 1968) ನಾಗರಾಜ್ ಕೆದಲುಗುಡ್ಡೆ ಅವರಿಗೆ ಲಭಿಸಿತು. ದ್ವಿತೀಯ ಬಹುಮಾನವಾದ ಸೈಕಲ್ (ಟಿಕೆಟ್ ಸಂಖ್ಯೆ 1891) ವಿನಾಯಕ ನಗರದ ನಿಶ್ಚಲ್ ಎಸ್ ಎಂಬುವವರಿಗೆ ಲಭಿಸಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಪ್ರಮುಖ ಸುರೇಶ್ ಸಿಂಗ್, “ಕಲಾ ಕೌಸ್ತುಭ ಕನ್ನಡ ಸಂಘವು ಕಳೆದ 32 ವರ್ಷಗಳಿಂದ ನಿರಂತರವಾಗಿ ಕನ್ನಡ ಸೇವೆಯಲ್ಲಿ ತೊಡಗಿಸಿಕೊಂಡಿದ್ದು, ಅನೇಕ ಸಾಂಸ್ಕೃತಿಕ ಮತ್ತು ಕನ್ನಡಪರ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸುತ್ತಿದೆ. ಸಂಘದ ಕಾರ್ಯಗಳಲ್ಲಿ ಸದಾ ನಿಷ್ಠೆ ಮತ್ತು ಪಾರದರ್ಶಕತೆ ಕಾಪಾಡಲಾಗುತ್ತಿದೆ. ಇದರಿಂದ ಸಂಘವು ಸಾರ್ವಜನಿಕರ ವಿಶ್ವಾಸವನ್ನು ಗಳಿಸಿದೆ” ಎಂದು ಹೇಳಿದರು.

ಮುಖ್ಯ ಅತಿಥಿ ಮಹೇಂದ್ರ ಗೌಡ ಮಾತನಾಡಿ, “ನವೆಂಬರ್ 28, 29 ಮತ್ತು 30ರಂದು ನಡೆದ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಚರಿಸಲಾಗಿತ್ತು. ಅದರ ಅಂಗವಾಗಿ ಲಕ್ಕಿ ಡ್ರಾ ಘೋಷಿಸಲಾಗಿದ್ದರೂ ಕೆಲವು ಕಾರಣಗಳಿಂದ ನಿಗದಿತ ವೇಳೆಗೆ ನಡೆಸಲು ಸಾಧ್ಯವಾಗಿರಲಿಲ್ಲ. ಆದರೂ, ಸಂಘದ ಮೇಲಿರುವ ಸಾರ್ವಜನಿಕರ ನಂಬಿಕೆ ಅಚಲವಾಗಿದ್ದು, ಕೆಲವು ಟೀಕೆಗಳು ಫಲಿಸಿಲ್ಲ” ಎಂದು ಹೇಳಿದರು.

ಸಂಘದ ಅಧ್ಯಕ್ಷ ಮುರುಳಿಧರ್ ಕೆರೆಹಳ್ಳಿ ಮಾತನಾಡಿ, “ಕಲಾ ಕೌಸ್ತುಭ ಕನ್ನಡ ಸಂಘಕ್ಕೆ ತನ್ನದೇ ಆದ ಸಮೃದ್ಧ ಇತಿಹಾಸವಿದ್ದು, ಟೀಕೆಗಳಿಗೆ ಬಗ್ಗುವ ಪ್ರಶ್ನೆಯೇ ಇಲ್ಲ. ಕಳೆದ ಮೂವತ್ತೆರಡು ವರ್ಷಗಳಿಂದ ಸಂಘವು ಪಾರದರ್ಶಕವಾಗಿ ಕಾರ್ಯನಿರ್ವಹಿಸುತ್ತಾ ಸಾರ್ವಜನಿಕರ ಅಪಾರ ವಿಶ್ವಾಸವನ್ನು ಗಳಿಸಿದೆ. ಮಹಿಳಾ ಪ್ರಾತಿನಿಧ್ಯಕ್ಕೆ ಆದ್ಯತೆ ನೀಡುವ ಉದ್ದೇಶದಿಂದ ಕಳೆದ ನಾಲ್ಕು ವರ್ಷಗಳಿಂದ ಮಹಿಳೆಯರಿಗೆ ಪ್ರಮುಖ ಸ್ಥಾನಗಳನ್ನು ನೀಡಲಾಗಿದ್ದು, ಮಹಿಳಾ ಸಬಲೀಕರಣಕ್ಕೂ ಸಂಘ ಒತ್ತು ನೀಡಿದೆ. ಜೊತೆಗೆ ಆರೋಗ್ಯ ತಪಾಸಣಾ ಶಿಬಿರಗಳು, ಆಳ್ವಾಸ್ ನುಡಿಸಿರಿ ಕಾರ್ಯಕ್ರಮ ಸೇರಿದಂತೆ ಅನೇಕ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇಂತಹ ಸಂಘದ ಬಗ್ಗೆ ತಪ್ಪು ಅಭಿಪ್ರಾಯಗಳನ್ನು ಮೂಡಿಸುವುದು ಸರಿಯಾದ ನಡೆ ಅಲ್ಲ” ಎಂದು ಹೇಳಿದರು.

ಇದೇ ಸಂಧರ್ಭದಲ್ಲಿ ಸ್ಕೂಟರ್ ವಿಜೇತ ನಾಗರಾಜ್ ಕೆದಲುಗುಡ್ಡೆ ಹಾಗೂ ದ್ವಿತೀಯ ಬಹುಮಾನ ವಿಜೇತ ನಿಶಾಲ್ ರವರಿಗೆ ಮುಖ್ಯ ಅತಿಥಿ ಮಹೇಂದ್ರಗೌಡ ಬಹುಮಾನ ವಿತರಿಸಿದರು.

ಕಾರ್ಯಕ್ರಮದಲ್ಲಿ ಸಂಘದ ಪದಾಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಯುವಕ ಸ್ಥಳದಲ್ಲೇ ಸಾವು

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಮೆಕ್ಯಾನಿಕ್ ಸ್ಥಳದಲ್ಲೇ ಸಾವು A 27-year-old mechanic was killed in a…

1 hour ago

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು – ತೋಟದ ಮಾಲೀಕನ ಬಂಧನ

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು - ತೋಟದ ಮಾಲೀಕನ ಬಂಧನ A three-year-old male…

1 hour ago

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್ Shivamogga rowdy sheeter…

5 hours ago

ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ

ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ Kudumallige Society CEO Madan,…

6 hours ago

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

20 hours ago

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…

20 hours ago