Keerthi S, an 8th-grade student from a government high school in Harishi village, Soraba taluk, has been selected for the Zee Kannada Sa Re Ga Ma Pa Junior mega audition, bringing pride to her village.
ಸೊರಬ: ತಾಲೂಕಿನ ಹರೀಶಿ ಗ್ರಾಮದ ಸರ್ಕಾರಿ ಪ್ರೌಢಶಾಲೆ, ವಿದ್ಯಾನಗರದ 8ನೇ ತರಗತಿ ವಿದ್ಯಾರ್ಥಿನಿ ಕೀರ್ತಿ ಎಸ್ ಅವರು ತಮ್ಮ ಸಂಗೀತ ಪ್ರತಿಭೆಯಿಂದ ರಾಜ್ಯಮಟ್ಟದಲ್ಲಿ ಗುರುತಿಸಿಕೊಳ್ಳುವ ಹೆಜ್ಜೆ ಇಟ್ಟಿದ್ದಾರೆ.
ಜನಪ್ರಿಯ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ “ಸರಿಗಮಪ ಜೂನಿಯರ್” ಕಾರ್ಯಕ್ರಮದ 22ನೇ ಸಂಚಿಕೆಯ ಮೆಗಾ ಆಡಿಷನ್ಗೆ ಅವರು ಆಯ್ಕೆಯಾಗಿರುವುದು ಸ್ಥಳೀಯವಾಗಿ ಸಂತಸದ ವಾತಾವರಣ ನಿರ್ಮಿಸಿದೆ.
ಕೀರ್ತಿ ಎಸ್ ಅವರು ಬಾಲ್ಯದಿಂದಲೇ ಸಂಗೀತದ ಮೇಲೆ ಅಪಾರ ಆಸಕ್ತಿ ಹೊಂದಿದ್ದು, ಶಾಲಾ ಕಾರ್ಯಕ್ರಮಗಳು ಹಾಗೂ ಸ್ಥಳೀಯ ಸಾಂಸ್ಕೃತಿಕ ವೇದಿಕೆಗಳಲ್ಲಿ ತಮ್ಮ ಗಾಯನದ ಮೂಲಕ ಗಮನ ಸೆಳೆದಿದ್ದಾರೆ. ಅವರ ಪ್ರತಿಭೆಯನ್ನು ಗುರುತಿಸಿದ ಗುರುಗಳು ಹಾಗೂ ಪೋಷಕರು ಸದಾ ಪ್ರೋತ್ಸಾಹ ನೀಡಿದ್ದು, ಇದೀಗ ಆ ಪರಿಶ್ರಮಕ್ಕೆ ಫಲ ದೊರೆತಿದೆ.
ಮೆಗಾ ಆಡಿಷನ್ಗೆ ಆಯ್ಕೆಯಾಗಿರುವುದು ಕೀರ್ತಿಗೆ ದೊಡ್ಡ ಸಾಧನೆಯಾಗಿದ್ದು, ಮುಂದಿನ ಹಂತಗಳಲ್ಲಿ ಉತ್ತಮ ಪ್ರದರ್ಶನ ನೀಡಿ ರಾಜ್ಯದ ಮಟ್ಟದಲ್ಲಿ ಹೆಸರು ಮಾಡಬೇಕೆಂಬ ಕನಸು ಹೊಂದಿದ್ದಾಳೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿನಿಯೊಬ್ಬಳು ಇಂತಹ ವೇದಿಕೆಗೆ ಆಯ್ಕೆಯಾಗಿರುವುದು ಇತರ ಮಕ್ಕಳಿಗೂ ಪ್ರೇರಣೆಯಾಗಿದೆ.
ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ಗ್ರಾಮಸ್ಥರು ಕೀರ್ತಿಯ ಸಾಧನೆಯನ್ನು ಅಭಿನಂದಿಸಿ, ಮುಂದಿನ ಹಂತಗಳಲ್ಲಿ ಯಶಸ್ಸು ಸಾಧಿಸಲಿ ಎಂದು ಶುಭ ಹಾರೈಸಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್