ಕೆಂಚನಾಳದಲ್ಲಿ ಅಂದರ್ – ಬಾಹರ್ ಇಸ್ಪೀಟು ಅಡ್ಡದ ಮೇಲೆ ಪೊಲೀಸ್ ದಾಳಿ: ಪ್ರಕರಣ ದಾಖಲು

Police conducted a raid on an illegal gambling den in Kenchanala village during patrol duty and registered a case against those involved in Andar-Bahar and card gambling activities.

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಮದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಅಂದರ್-ಬಾಹರ್ ಹಾಗೂ ಇಸ್ಪೀಟ್ ಜೂಜಾಟ ಅಡ್ಡದ ಮೇಲೆ ಪೊಲೀಸರು ದಾಳಿ ನಡೆಸಿದ ಘಟನೆ ಶುಕ್ರವಾರ ವರದಿಯಾಗಿದೆ.

ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಗಸ್ತು ಕರ್ತವ್ಯದಲ್ಲಿದ್ದ ಪೊಲೀಸರು ಕೆದಲುಗುಡ್ಡೆ, ಬೆಳಂದೂರು ಮತ್ತು ಕೆಂಚನಾಲ ಗ್ರಾಮಗಳಲ್ಲಿ ನಿಯಮಿತವಾಗಿ ಪರಿಶೀಲನೆ ನಡೆಸುತ್ತಿದ್ದರು. ಈ ವೇಳೆ ಮಧ್ಯಾಹ್ನ ಸುಮಾರು 2 ಗಂಟೆ ಸುಮಾರಿಗೆ ಕೆಂಚನಾಲ ಗ್ರಾಮದ ಸಾಗವಾನಿ ಪ್ಲಾಂಟೇಷನ್ ಪ್ರದೇಶದಲ್ಲಿ ಕೆಲವು ವ್ಯಕ್ತಿಗಳು ಗುಂಪುಗೂಡಿ ಅಕ್ರಮವಾಗಿ ಜೂಜಾಟದಲ್ಲಿ ತೊಡಗಿರುವ ಬಗ್ಗೆ ಖಚಿತ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ.

ತಕ್ಷಣವೇ ಕಾರ್ಯಾಚರಣೆ ನಡೆಸಿದ ಪೊಲೀಸರು ಸ್ಥಳಕ್ಕೆ ದಾಳಿ ಮಾಡಿ ಜೂಜಾಟದಲ್ಲಿ ತೊಡಗಿದ್ದವರನ್ನು ವಶಕ್ಕೆ ಪಡೆದಿದ್ದಾರೆ.

ಘಟನೆಯ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ

ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ PSI Shankar Gowda Patil has…

2 hours ago

ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ

ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ Ripponpete Government Model Boys…

3 hours ago

ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ

ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ A 7.5-foot-long, 10 kg giant python…

4 hours ago

ಈದ್ ಮಿಲಾದ್ – ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್ ವಾರ್ನಿಂಗ್

ಈದ್ ಮಿಲಾದ್ - ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್…

5 hours ago

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು Sagar Tahsildar Dr. Prathibha…

12 hours ago

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು Thieves broke…

12 hours ago