ಮಲೆನಾಡಿನಲ್ಲಿ ಟಗರಿನ ಕಾಳಗ ಸಂಭ್ರಮ: ನಾಳೆಯಿಂದ ಕೆಂಚನಾಳದಲ್ಲಿ ರಾಜ್ಯ ಮಟ್ಟದ ಸ್ಪರ್ಧೆ

A state-level ram fight competition is set to take place in Kenchanala village near Ripponpet, marking a first for the Malnad region and promoting traditional rural sports and culture.

ರಿಪ್ಪನ್ ಪೇಟೆ : ಕೆಂಚನಾಲ ಗ್ರಾಮವು ಭಾನುವಾರ (ಮಾ.29) ಗ್ರಾಮೀಣ ಕ್ರೀಡೆಗಳ ಸಂಭ್ರಮಕ್ಕೆ ಸಾಕ್ಷಿಯಾಗಲಿದ್ದು, ಶ್ರೀ ಮಾರಿಕಾಂಬ ಯುವಕರ ಬಳಗ ಮತ್ತು ಗ್ರಾಮಸ್ಥರ ಸಹಯೋಗದಲ್ಲಿ ರಾಜ್ಯ ಮಟ್ಟದ ಟಗರಿನ ಕಾಳಗವನ್ನು ಬೆಳಿಗ್ಗೆ 10 ಗಂಟೆಗೆ ಆಯೋಜಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಈ ಭಾಗದಲ್ಲಿ ಇದೇ ಮೊದಲ ಬಾರಿಗೆ ರಾಜ್ಯ ಮಟ್ಟದಲ್ಲಿ ಟಗರಿನ ಕಾಳಗ ನಡೆಯುತ್ತಿರುವುದು ವಿಶೇಷವಾಗಿದ್ದು, ಮಲೆನಾಡಿನ ಸಂಪ್ರದಾಯಿಕ ಕ್ರೀಡೆಗೆ ಹೊಸ ಮೆರುಗು ತಂದಿದೆ. ಪೀಳಿಗೆಗಳಿಂದ ಬಂದಿರುವ ಈ ಕಾಳಗ ಗ್ರಾಮೀಣ ಬದುಕಿನ ಉತ್ಸಾಹ, ಸಂಸ್ಕೃತಿ ಮತ್ತು ಪರಂಪರೆಯನ್ನು ಪ್ರತಿಬಿಂಬಿಸುವ ಪ್ರಮುಖ ವೇದಿಕೆಯಾಗಿದೆ.

ರಾಜ್ಯದ ವಿವಿಧ ಜಿಲ್ಲೆಗಳಿಂದ ತರಲಾಗುವ ಟಗರಿಗಳು ಸ್ಪರ್ಧೆಯಲ್ಲಿ ಭಾಗವಹಿಸಲಿದ್ದು, ಕಾಳಗವು ತೀವ್ರ ಸ್ಪರ್ಧಾತ್ಮಕವಾಗಿ ನಡೆಯಲಿದೆ. ವಿಜೇತರಿಗೆ ಬಹುಮಾನಗಳನ್ನು ನೀಡುವ ವ್ಯವಸ್ಥೆಯನ್ನೂ ಮಾಡಲಾಗಿದೆ.

ಕಾರ್ಯಕ್ರಮದ ಯಶಸ್ವಿ ನಿರ್ವಹಣೆಗೆ ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತದೆ ಎಂದು ತಿಳಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಈ ಗ್ರಾಮೀಣ ಕ್ರೀಡೆಗೆ ಬೆಂಬಲ ನೀಡಬೇಕೆಂದು ಸಂಘಟಕರು ಮನವಿ ಮಾಡಿದ್ದಾರೆ.

ಗ್ರಾಮೀಣ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ದಿಟ್ಟ ಉದ್ದೇಶದೊಂದಿಗೆ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್ Shivamogga rowdy sheeter…

4 hours ago

ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ

ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ Kudumallige Society CEO Madan,…

4 hours ago

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

19 hours ago

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…

19 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

1 day ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

2 days ago