ಗ್ರಾಮಸ್ಥರ ಸಾಂಘಿಕ ಸಂಭ್ರಮ: ಕೆರೆಹಳ್ಳಿಯಲ್ಲಿ ನಡೆದ ವಿಶಿಷ್ಟ ಕೆರೆ ಬೇಟೆ

Villagers of Kerehalli near Ripponpet in Shivamogga district celebrated the traditional “Kere Bete” by entering the lake together to catch fish and later sharing the catch equally among all households in the village.

ಶಿವಮೊಗ್ಗ ಜಿಲ್ಲೆ ಸೇರಿದಂತೆ ಮಲೆನಾಡಿನ ಹಲವು ಹಳ್ಳಿಗಳಲ್ಲಿ ವರ್ಷಕ್ಕೊಮ್ಮೆ ನಡೆಯುವ ಕೆರೆ ಬೇಟೆ ಕೇವಲ ಮೀನು ಹಿಡಿಯುವ ಕಾಯಕವಲ್ಲ; ಅದು ಒಂದು ರೀತಿಯ ಸಾಂಪ್ರದಾಯಿಕ ಕ್ರೀಡೆಯಂತೆಯೇ ಜನರ ಸಂಭ್ರಮದ ಹಬ್ಬವಾಗಿ ಆಚರಿಸಲಾಗುತ್ತದೆ.

ಮಲೆನಾಡಿನಲ್ಲಿ ಗಾಳ ಹಾಕಿ ಮೀನು ಹಿಡಿಯುವುದು ಹಲವರ ನೆಚ್ಚಿನ ಹವ್ಯಾಸವಾಗಿದ್ದರೂ, ಗ್ರಾಮಸ್ಥರೆಲ್ಲ ಸೇರಿ ಸಾಂಘಿಕವಾಗಿ ನಡೆಸುವ ಕೆರೆ ಬೇಟೆ ಇನ್ನಷ್ಟು ರೋಚಕತೆಯನ್ನು ಮೂಡಿಸುತ್ತದೆ. ಊರಿನ ಜನರೆಲ್ಲಾ ಒಟ್ಟಾಗಿ ಕೆರೆಯಲ್ಲಿ ಇಳಿದು, ನೀರಿನಲ್ಲಿ ಮೀನುಗಳನ್ನು ಹುಡುಕಿ ಹಿಡಿಯುವ ದೃಶ್ಯ ಗ್ರಾಮೀಣ ಸಂಸ್ಕೃತಿಯ ವಿಶೇಷತೆಯನ್ನು ತೋರಿಸುತ್ತದೆ.

ಅದೇ ರೀತಿಯಲ್ಲಿ ರಿಪ್ಪನ್‌ಪೇಟೆ ಪಟ್ಟಣದ ಕೆಳಗಿನ ಕೆರೆಹಳ್ಳಿ ಗ್ರಾಮದ ಕೆರೆಯಲ್ಲಿ ಗ್ರಾಮಸ್ಥರು ಒಟ್ಟಾಗಿ ಕೆರೆ ಬೇಟೆ ನಡೆಸಿ ಸಂಭ್ರಮಿಸಿದ್ದಾರೆ. ಯುವಕರು, ಯುವತಿಯರು, ಹಿರಿಯರು ಹಾಗೂ ಮಹಿಳೆಯರು ಸೇರಿದಂತೆ ಊರಿನ ಬಹುತೇಕ ಜನರು ಕೆರೆಗೆ ಇಳಿದು ಮೀನು ಹಿಡಿದು ಉಲ್ಲಾಸದಿಂದ ಪಾಲ್ಗೊಂಡರು.

ಸಾಮಾನ್ಯವಾಗಿ ಕೆರೆಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿರುವ ಸಮಯದಲ್ಲಿ ಕೆರೆ ಬೇಟೆ ಆಯೋಜಿಸಲಾಗುತ್ತದೆ. ಅನೇಕ ಗ್ರಾಮಗಳಲ್ಲಿ ಕೆರೆ ಬೇಟೆಯಲ್ಲಿ ಭಾಗವಹಿಸುವವರಿಂದ ಗ್ರಾಮ ಸಮಿತಿ ಶುಲ್ಕ ವಸೂಲಿಸಿ, ಶುಲ್ಕ ಪಾವತಿಸಿದವರು ತಮ್ಮಿಂದ ಸಾಧ್ಯವಾದಷ್ಟು ಮೀನು ಹಿಡಿಯುವ ವ್ಯವಸ್ಥೆ ಇರುತ್ತದೆ.

ಆದರೆ ಕೆರೆಹಳ್ಳಿ ಗ್ರಾಮದ ಕೆರೆ ಬೇಟೆ ವಿಭಿನ್ನವಾಗಿದ್ದು, ಇಲ್ಲಿ ಕುಣಿ ಬಳಸದೇ ಬಲೆಯ ಮೂಲಕ ಮೀನು ಹಿಡಿಯಲಾಗುತ್ತದೆ. ಇಲ್ಲಿ ಯಾರೂ ವೈಯಕ್ತಿಕವಾಗಿ ಮೀನುಗಳನ್ನು ತೆಗೆದುಕೊಂಡು ಹೋಗುವುದಿಲ್ಲ. ಗ್ರಾಮಸ್ಥರೆಲ್ಲ ಒಟ್ಟಾಗಿ ಹಿಡಿದ ಮೀನನ್ನು ನಂತರ ಊರಿನ ಎಲ್ಲಾ ಮನೆಗಳಿಗೆ ಸಮಾನವಾಗಿ ಹಂಚಿಕೆ ಮಾಡಲಾಗುತ್ತದೆ. ಈ ದಿನವನ್ನು ಗ್ರಾಮಸ್ಥರು ಸಂಭ್ರಮದಿಂದ ಆಚರಿಸುವುದು ಇಲ್ಲಿನ ವಿಶಿಷ್ಟ ಪರಂಪರೆಯಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ Kalluru Meghraj urges the Karnataka government…

17 hours ago

ಕುಡಿಯುವ ನೀರಿಗಾಗಿ ಬಾಳೂರು ಗ್ರಾಮಸ್ಥರ ಆಕ್ರೋಶ; ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆ

ಕುಡಿಯುವ ನೀರಿಗಾಗಿ ಬಾಳೂರು ಗ್ರಾಮಸ್ಥರ ಆಕ್ರೋಶ; ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆ Residents of Baluru and Kaleshwara villages…

18 hours ago

ಬಟಾಣಿಜಡ್ಡು, ತಮ್ಮಡಿಕೊಪ್ಪ ಭಾಗದಲ್ಲಿ ಆನೆಗಳ ಸಂಚಾರ – ತೋಟಗಳಿಗೆ ಹಾನಿ , ಜನರಿಗೆ ಅರಣ್ಯ ಇಲಾಖೆ ಎಚ್ಚರಿಕೆ

ಬಟಾಣಿಜಡ್ಡು, ತಮ್ಮಡಿಕೊಪ್ಪ ಭಾಗದಲ್ಲಿ ಆನೆಗಳ ಸಂಚಾರ – ತೋಟಗಳಿಗೆ ಹಾನಿ , ಜನರಿಗೆ ಅರಣ್ಯ ಇಲಾಖೆ ಎಚ್ಚರಿಕೆ Wild elephant…

18 hours ago

ಕಾರಿನಲ್ಲಿ ಗಾಂಜಾ ಮಾರಾಟ: ಇಬ್ಬರ ಬಂಧನ, 1.42 ಕೆಜಿ ಗಾಂಜಾ ಹಾಗೂ ಕಾರು ಜಪ್ತಿ

ಕಾರಿನಲ್ಲಿ ಗಾಂಜಾ ಮಾರಾಟ: ಇಬ್ಬರ ಬಂಧನ, 1.42 ಕೆಜಿ ಗಾಂಜಾ ಹಾಗೂ ಕಾರು ಜಪ್ತಿ Two people were arrested…

23 hours ago

ಎಣ್ಣೆ ಮತ್ತಿನಲ್ಲಿ ಅಪಾಯಕಾರಿ ಆಟೋ ಚಾಲನೆ: ಚಾಲಕನ ಬಂಧನ, ವಾಹನ ಪೊಲೀಸ್ ವಶಕ್ಕೆ

ಎಣ್ಣೆ ಮತ್ತಿನಲ್ಲಿ ಅಪಾಯಕಾರಿ ಆಟೋ ಚಾಲನೆ: ಚಾಲಕನ ಬಂಧನ, ವಾಹನ ಪೊಲೀಸ್ ವಶಕ್ಕೆ Shivamogga West Traffic Police registered…

24 hours ago

ಅರಸಾಳು ಬಳಿ ರೈಲ್ವೆ ಹಳಿಯ ಮೇಲೆ ಉರುಳಿದ ಮರ; ಮಾರ್ಗ ಮಧ್ಯೆ ನಿಂತ ತಾಳಗುಪ್ಪ-ಬೆಂಗಳೂರು ರೈಲು! ಪ್ರಯಾಣಿಕರ ಪರದಾಟ

ಅರಸಾಳು ಬಳಿ ರೈಲ್ವೆ ಹಳಿಯ ಮೇಲೆ ಉರುಳಿದ ಮರ; ಮಾರ್ಗ ಮಧ್ಯೆ ನಿಂತ ತಾಳಗುಪ್ಪ-ಬೆಂಗಳೂರು ರೈಲು! ಪ್ರಯಾಣಿಕರ ಪರದಾಟ The…

1 day ago