ಮಂಗನ ಕಾಯಿಲೆಗೆ ಮತ್ತೊಂದು ಬಲಿ: ತೀರ್ಥಹಳ್ಳಿ ಮೂಲದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಸಾವು

A woman from Thirthahalli in Shivamogga district has died due to Kyasanur Forest Disease (KFD), marking the second death this year. Authorities report 29 cases and ongoing treatment for several patients.

ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನಲ್ಲಿ ಕ್ಯಾಸನೂರು ಅರಣ್ಯ ರೋಗ (ಕೆಎಫ್‌ಡಿ) ಆತಂಕ ಹೆಚ್ಚುತ್ತಿರುವ ನಡುವೆಯೇ, ಈ ವರ್ಷ ಎರಡನೇ ಸಾವು ಸಂಭವಿಸಿರುವುದು ಜನರಲ್ಲಿ ಭೀತಿಗೆ ಕಾರಣವಾಗಿದೆ.

ಅರಳಸುರುಳಿ ಸಮೀಪದ ತಟ್ಟಿಕೇವಿ ಗ್ರಾಮದ ಗುಲಾಬಿ ಶೆಟ್ಟಿ (ಮಹಿಳೆ) ಅವರು ಕೆಎಫ್‌ಡಿ ಸೋಂಕಿನಿಂದ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ರೋಗ ತೀವ್ರಗೊಂಡ ಹಿನ್ನೆಲೆಯಲ್ಲಿ ಮಂಗಳವಾರ ಅವರನ್ನು ಮೊದಲಿಗೆ ಸರ್ಕಾರಿ ಜೆಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದರೂ, ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ.

ಈ ಮೊದಲು ಕಟಗಾರು ಆಸ್ಪತ್ರೆ ವ್ಯಾಪ್ತಿಯ ಹೊನ್ನೇಕೇರಿ ಗ್ರಾಮದ ಯುವಕನೊಬ್ಬ ಕೂಡ ಕೆಎಫ್‌ಡಿ ಸೋಂಕಿಗೆ ಬಲಿಯಾಗಿದ್ದನು. ಇದರಿಂದಾಗಿ ತಾಲೂಕಿನಲ್ಲಿ ಈ ವರ್ಷ ಸಾವಿನ ಸಂಖ್ಯೆ ಎರಡುಕ್ಕೇರಿದೆ.

ತಾಲೂಕಿನಲ್ಲಿ ಇದುವರೆಗೆ ಒಟ್ಟು 29 ಕೆಎಫ್‌ಡಿ ಪ್ರಕರಣಗಳು ದಾಖಲಾಗಿವೆ. ಪ್ರಸ್ತುತ ಸರ್ಕಾರಿ ಜೆಸಿ ಆಸ್ಪತ್ರೆಯಲ್ಲಿ 5 ಮಂದಿ ಹಾಗೂ ಮಣಿಪಾಲ ಆಸ್ಪತ್ರೆಯಲ್ಲಿ 3 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಾಲೂಕು ವೈದ್ಯಾಧಿಕಾರಿ ಡಾ. ಅನಿಕೇತನ್‌ ತಿಳಿಸಿದ್ದಾರೆ.

ಆರೋಗ್ಯ ಇಲಾಖೆ ಜನರು ಕಾಡು ಪ್ರದೇಶಗಳಿಗೆ ತೆರಳುವಾಗ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಸೂಚಿಸಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ

ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ PSI Shankar Gowda Patil has…

3 hours ago

ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ

ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ Ripponpete Government Model Boys…

4 hours ago

ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ

ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ A 7.5-foot-long, 10 kg giant python…

5 hours ago

ಈದ್ ಮಿಲಾದ್ – ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್ ವಾರ್ನಿಂಗ್

ಈದ್ ಮಿಲಾದ್ - ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್…

6 hours ago

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು Sagar Tahsildar Dr. Prathibha…

13 hours ago

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು Thieves broke…

13 hours ago