A 23-year-old man from Kolavalli village near Ripponpet died by suicide late at night after returning home. Police have registered a case and are investigating the incident.
ರಿಪ್ಪನ್ ಪೇಟೆ : ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಳವಳ್ಳಿ ಗ್ರಾಮದಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕೊಳವಳ್ಳಿ ನಿವಾಸಿ ಸುನೀಲ್ ಬಿನ್ ವೀರಭದ್ರ (23) ಮೃತ ಯುವಕ. ಬುಧವಾರ ಸಂಜೆ ಕೆಲಸ ಮುಗಿಸಿಕೊಂಡು ಮನೆಗೆ ಬಂದಿದ್ದ ಸುನೀಲ್, ನಂತರ ಸ್ನೇಹಿತನ ಮನೆಗೆ ತೆರಳುವುದಾಗಿ ಹೇಳಿ ಸಂಜೆ 5 ಗಂಟೆ ಸುಮಾರಿಗೆ ಹೊರಟಿದ್ದನು. ಬಳಿಕ ರಾತ್ರಿ ಸುಮಾರು 11 ಗಂಟೆಗೆ ಮನೆಗೆ ಮರಳಿದ್ದಾನೆ.
ಮನೆಗೆ ಬಂದ ಬಳಿಕ ಮದ್ಯಪಾನ ಮಾಡಿದ್ದ ಸ್ಥಿತಿಯಲ್ಲಿ ಇದ್ದನು ಎನ್ನಲಾಗಿದ್ದು, ತಂದೆ-ತಾಯಿಯವರೊಂದಿಗೆ ಹೊರಭಾಗದಲ್ಲಿ ಕೆಲಕಾಲ ಮಾತನಾಡಿ ಕುಳಿತಿದ್ದನು. ನಂತರ ತಂದೆ ಮಲಗಲು ತೆರಳಿದ ಮೇಲೆ, ಸುನೀಲ್ ಮನೆಯೊಳಗೆ ಹೋಗಿದ್ದಾನೆ.
ಸ್ವಲ್ಪ ಸಮಯದ ಬಳಿಕ ಅಣ್ಣ ಹಾಗೂ ತಾಯಿ ಒಳಗೆ ತೆರಳಿ ನೋಡಿದಾಗ, ಹಾಲ್‌ನಲ್ಲಿದ್ದ ಕಬ್ಬಿಣದ ರಾಡಿಗೆ ನೈಲಾನ್ ಬೆಡ್‌ಶೀಟ್ ಬಳಸಿ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ. ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಷ್ಟರಲ್ಲಾಗಲೇ ಆತ ಮೃತಪಟ್ಟಿದ್ದನು.
ಇನ್ನೂ ಸುನೀಲ್ ಅತ್ಯುತ್ತಮ ಕಬ್ಬಡಿ ಆಟಗಾರನಾಗಿದ್ದನು , ಕುಟುಂಬದವರು ನೀಡಿದ ಮಾಹಿತಿಯಂತೆ, ಮದ್ಯಪಾನದ ಅಭ್ಯಾಸವಿದ್ದ ಕಾರಣದಿಂದ ಸುನೀಲ್ ಮಾನಸಿಕವಾಗಿ ಸಮಸ್ಯೆ ಅನುಭವಿಸುತ್ತಿದ್ದನೆಂದು ಹೇಳಲಾಗಿದೆ.
ಈ ಸಂಬಂಧ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್ Shivamogga rowdy sheeter…
ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ Kudumallige Society CEO Madan,…
ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…
ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…
ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…
ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…